Connect with us

ಸಿನಿ ಸುದ್ದಿ

HaPpY BiRtHdAy | ಸ್ವಾಮಿ ದೇವನೆ ಲೋಕ ಪಾಲನೆ ತೇನಮೋಸ್ತು ನಮೋಸ್ತುತೇ | ಬಿ.ಆರ್. ಪಂತುಲು

Published

on

ದ್ಮಿನಿ ಪಿಕ್ಚರ್ಸ್ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆಗಳಿಸಿ ದಕ್ಷಿಣ ಭಾರತದಲ್ಲಿ ಕನ್ನಡ ಚಿತ್ರರಂಗವನ್ನು ಸದಭಿರುಚಿಯ ಸಿನಿಮಾಗಳ ಮೂಲಕ ಕೀರ್ತಿಯ ಉತ್ತುಂಗಕ್ಕೇರಿದ ಬಿ.ಆರ್. ಪಂತುಲು ಅವರಿಗೆ ಜನ್ಮದಿನದ ಶುಭಾಶಯಗಳು.

“ಸ್ವಾಮಿ ದೇವನೆ ಲೋಕಪಾಲನೆ ತೇನಮೋಸ್ತು ನಮೋಸ್ತುತೆ” ಎಂದು ಮಕ್ಕಳಿಗೆ ಪಾಠ ಹೇಳಿಕೊಟ್ಟು ನಮಗೆ ಇಷ್ಟವಾಗಿರುವ ಮೇಷ್ಟರ ಹಾಗೆ ಇವರೂ ಕೂಡಾ ಎಂದು ಭಾವ ಹುಟ್ಟಿಸಿದ ‘ಸ್ಕೂಲ್ ಮಾಸ್ಟರ್’ ಎಂದೇ ಪ್ರಿಯರಾದ ಬಿ.ಆರ್. ಪಂತುಲು ಅವರು ಕನ್ನಡಿಗರಿಗೆ ಮಾತ್ರವಲ್ಲ, ದಕ್ಷಿಣ ಭಾರತ ಚಿತ್ರರಂಗಕ್ಕೇ ಒಂದು ಅವಿಸ್ಮರಣೀಯ ನೆನಪು. ಅವರು ಶ್ರೀಕೃಷ್ಣದೇವರಾಯ ಚಿತ್ರದಲ್ಲಿ ಮಂತ್ರಿ ತಿಮ್ಮರಸುವಾಗಿ ಕಂಗೊಳಿಸಿದ ರೀತಿ ಅವಿಸ್ಮರಣೀಯವಾದುದು. “ಒಂದರಿಂದ ಇಪ್ಪತ್ತೊಂದರವರೆಗೆ ಜಂಜಾಟ, ಬಂಡಾಟ” ಎಂದು ಅವರ ಮೊದಲ ತೇದಿಯಲ್ಲಿ ಮೂಡಿದ ಹಾಡು, ಅಂದಿನ ಎಲ್ಲಾ ಮಧ್ಯಮ ಮತ್ತು ಕೆಳವರ್ಗದ ಜನಕ್ಕೆ ಇದು ನಮ್ಮ ಜೀವನವೇ ಎಂದು ಅನ್ವಯಿಸಿಕೊಳ್ಳುವಷ್ಟು ಪ್ರಖ್ಯಾತವಾಗಿತ್ತು. ತಮಿಳು ಗೊತ್ತಿದ್ದು ಅಂದಿನ ಕರ್ಣ ತಮಿಳು ಚಿತ್ರದ ‘ಉಳ್ಳತ್ತಿಲ್ ನಲ್ಲ ಉಳ್ಳಂ ಉರಂಗಾದು ಎನ್ಬದು … ವಲ್ಲವನ್ ವಗುತ್ತದಡ’ ಹಾಡು ಕೇಳಿದ್ದರೆ, ಕರ್ಣನಂತಹವನಿಗೇ ಹೀಗಾಯಿತಲ್ಲಾ ಎಂದು ಸ್ವಯಂ ಕೃಷ್ಣನೇ ಶೋಕಿಸುವ ಈ ಸೃಷ್ಟಿಯ ಪರಿ ಆತ್ಮೀಯವಾಗಿತ್ತು. ಕನ್ನಡ ಚಿತ್ರರಂಗದ ಸುವರ್ಣಯುಗದ ಹರಿಕಾರ, ಬೆಳ್ಳಿತೆರೆಯ ಗಾರುಡಿಗರೆಂದೇ ಅವರು ಪ್ರಸಿದ್ಧಿ.

ರಾಜ್ ಕುಮಾರ್ ಅವರು ಕೃಷ್ಣದೇವರಾಯನಾಗಿ ಪ್ರಸಿದ್ಧಿ ಪಡೆದುದು ಮಾತ್ರವಲ್ಲ ಅವರ ಹಲವಾರು ಮನೋಜ್ಞ ಚಿತ್ರಗಳನ್ನು ನಿರ್ಮಿಸಿದವರು ಪಂತುಲು ಅವರೇ. ನರಸಿಂಹರಾಜು ಅವರ ಸುಂದರ ಅಭಿನಯವನ್ನು ಕನ್ನಡ ಚಿತ್ರಗಳಲ್ಲಿ ಪ್ರಧಾನ ಅಂಶವಾಗಿ ರೂಪಿಸಿ ಮೆರೆಸಿದವರು ಕೂಡಾ ಪಂತುಲು ಅವರೇ. ಸ್ಕೂಲ್ ಮಾಸ್ಟರ್ ಚಿತ್ರದಲ್ಲಿ ಅವರ ವಿದ್ಯಾರ್ಥಿಯಾಗಿ ರೂಪಿತನಾದ ಶಿವಾಜಿ ಗಣೇಶನ್ ಅವರನ್ನು ವೀರಪಾಂಡ್ಯ ಕಟ್ಟಬೊಮ್ಮನ್, ಕರ್ಣ ಅಂತಹ ಪಾತ್ರಗಳಿಂದ ರೂಪಿಸಿದವರು ಪಂತುಲು ಅವರೇ. ಕಿತ್ತೂರು ರಾಣಿ ಚೆನ್ನಮ್ಮನನ್ನು ಸುಂದರ ಅಭಿನೇತ್ರಿಯಾದ ಬಿ. ಸರೋಜಾದೇವಿಯವರಲ್ಲಿ ಮರೆಯಲಾಗದಂತೆ ಮೂಡಿಸಿದವರು ಕೂಡಾ ಪಂತುಲು ಅವರೇ. ಅಷ್ಟೇಕೆ ನಮ್ಮ ಕನ್ನಡದ ಶ್ರೇಷ್ಠ ದಿಗ್ದರ್ಶಕ ಪುಟ್ಟಣ್ಣ ಕಣಗಾಲ್, ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ, ಸಂಗೀತ ನಿರ್ದೇಶಕ ಟಿ.ಜಿ. ಲಿಂಗಪ್ಪ, ನಟಿಯಾದ ಪಂತುಲು ಅವರ ಪತ್ನಿ ಎಂ.ವಿ.ರಾಜಮ್ಮ ಇವರುಗಳೆಲ್ಲಾ ಶ್ರೇಷ್ಠರಾಗಿ ಹೊರಹೊಮ್ಮಿದ್ದು ಪಂತುಲು ಅವರ ಪದ್ಮಿನಿ ಪಿಕ್ಚರ್ಸ್ ಗರಡಿಯಲ್ಲೇ.

ಬಡಗೂರು ರಾಮಕೃಷ್ಣ ಪಂತುಲು ಅವರು ಜನಿಸಿದ್ದು 1911 ಜುಲೈ 28ರಂದು ಕರ್ನಾಟಕ-ಆಂಧ್ರಪ್ರದೇಶದ ಗಡಿಯಲ್ಲಿನ ಬಂಗಾರ ಪೇಟೆಯ ಬಳಿಯಿರುವ ಕುಪ್ಪಂನಿಂದ ಹನ್ನೊಂದು ಕಿಲೋಮೀಟರ್ ದೂರದ ಕುಗ್ರಾಮ ಬಡಗೂರಿನಲ್ಲಿ. ಗಡಿ ಪ್ರದೇಶದಲ್ಲಿರುವ ಈ ಊರಿನಲ್ಲಿ ಕನ್ನಡದಂತೆ ತೆಲುಗು, ತಮಿಳು ಕೂಡ ಮುಖ್ಯ ಭಾಷೆಗಳಾಗಿದ್ದವು. ಹೀಗಾಗಿ ಬಾಲ್ಯದಿಂದಲೇ ಪಂತುಲು ಅವರಿಗೆ ಮೂರು ಭಾಷೆಗಳ ಒಡನಾಟ ಬರಲು ಕಾರಣವಾಯಿತು. ಪಂತುಲು ಅವರ ತಂದೆ ವೆಂಕಟಾಚಲಯ್ಯನವರಿಗೆ ಕಿರಿಯವರಾದ ಪಂತುಲು ಸೇರಿದಂತೆ ಐವರು ಮಕ್ಕಳು, ಮೂರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳು. ಪಂತುಲು ಅವರ ತಂದೆ ಸಂಗೀತ, ಸಾಹಿತ್ಯ ಮತ್ತು ನೃತ್ಯಗಳಲ್ಲಿ ಉತ್ತಮ ಅಭಿರುಚಿ ಪಡೆದಿದ್ದರು. ಆಗಾಗ ಊರಿನಲ್ಲಿ ನಾಟಕಗಳನ್ನು ಆಡಿಸುತಿದ್ದರು. ತಂದೆಯ ಜೊತೆ ಮಗನೂ ಆಗಾಗ ರಂಗ ತರಬೇತಿ ನೋಡಲು ಹೋಗುತ್ತಿದ್ದನು. ಚಂದ್ರಹಾಸನ ಪಾತ್ರ ನೀಡುವ ಮೂಲಕ ತಂದೆಯೇ ಆತನ ರಂಗ ಪ್ರವೇಶಕ್ಕೆ ಕಾರಣಕರ್ತರಾದರು.

ರಾಮಕೃಷ್ಣರ ಪ್ರಾಥಮಿಕ ಶಿಕ್ಷಣ ಬಡಗೂರಿನಲ್ಲಿಯೇ ನಡೆದರೂ ಮುಂದಿನ ಶಿಕ್ಷಣಕ್ಕೆ ಅಲ್ಲಿ ಅವಕಾಶ ಇರದ ಕಾರಣ ತಮ್ಮ ತಾತನ ಮನೆಯಾದ ಕೊಲಾರದಲ್ಲಿದ್ದು ಎಸ್.ಎಸ್.ಎಲ್.ಸಿ.ವರೆಗಿನ ಶಿಕ್ಷಣ ಪಡೆದರು. ಶಾಲಾ ಜೀವನದಲ್ಲಿಯೂ ಅವರು ನಾಟಕದ ಅಭಿನಯದಲ್ಲಿ ಪ್ರಸಿದ್ದಿ ಪಡೆದಿದ್ದರು. ಪಂತುಲು ಮುಂದೆ ಪ್ರಾಥಮಿಕ ಶಿಕ್ಷಕರಾಗಿ ನೇಮಕಗೊಂಡರು. ಕಲಾವಿದರಾದ ಅವರು ಶಾಲೆಯಲ್ಲಿ ಪಾಠ ಮಾಡಿದ್ದಕ್ಕಿಂತ ಮಕ್ಕಳಿಗೆ ನಾಟಕ ಕಲಿಸಿದ್ದೇ ಹೆಚ್ಹು. ಒಂದುದಿನ ವಿದ್ಯಾ ಇಲಾಖೆಯ ಇನ್ಸ್ಪೆಕ್ಟರ್ ಶಾಲೆಗೆ ಬಂದಾಗ, ಪಾಠ ಮಾಡುವ ಬದಲು ಮಕ್ಕಳಿಗಾಗಿ ನಾಟಕ ಕಲಿಸುತ್ತಿದ್ದ ಪಂತುಲು ಅವರನ್ನು ಕಂಡು ಕೆಂಡಾಮಂಡಲವಾದರು. ಇನ್ನೊಮ್ಮೆ ಹೀಗಾದರೆ ವಜಾಮಾಡುವೆನೆಂದು ನೋಟೀಸ್ ಜಾರಿ ಮಾಡಿದರು. ಇದರಿಂದ ನೊಂದ ಪಂತುಲು ಶಿಕ್ಷಕ ವ್ರತ್ತಿಗೆ ರಾಜೀನಾಮೆ ನೀಡಿ ಕಲೆಯಲ್ಲಿಯೇ ಬದುಕನ್ನು ಅರಸುತ್ತ ಬೆಂಗಳೂರಿಗೆ ಬಂದು ಅವರ ಹಿರಿಯರಾದ ಪಾಪಯ್ಯನವರಿದ್ದ ಮಹಮ್ಮದ್ ಪೀರ್ ಅವರ ‘ಚಂದ್ರಕಲಾ ನಾಟಕ ಮಂಡಳಿ’ಗೆ ಸೇರಿದರು. ಮುಂದೆ ಇವರಿಗೆ ಹೆಚ್ ಎಲ್ ಎನ್ ಸಿಂಹ ಮತ್ತು ಮಹಮದ್ ಪೀರ್ ಅವರ ಗೆಳೆತನ ಬಣ್ಣದಲೋಕದ ನಂಟನ್ನು ತಂದಿತು. ಪಂತುಲು ಅವರ ಮಗ ರವಿಶಂಕರ್ ಕೆಲ ಕಾಲ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದರು. ಮಗಳು ಬಿ.ಆರ್.ವಿಜಯಲಕ್ಷ್ಮಿ ಛಾಯಾಗ್ರಾಹಕಿಯಾಗಿ ಹೆಸರು ಮಾಡಿದ್ದರು.

ಪಂತುಲು ಅವರು 1936ರಲ್ಲಿ ‘ಸಂಸಾರ ನೌಕೆ’ ಚಲನಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ‘ರಾಧಾ ರಮಣ’ ಚಲನಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದರು. 1955ರಲ್ಲಿ ಪಂತುಲು ಅವರು ಪ. ನೀಲಕಂಠನ್ ಸಹಯೋಗದೊಂದಿಗೆ ಪದ್ಮಿನಿ ಪಿಕ್ಚರ್ಸ್ ಸಂಸ್ಥೆ ಸ್ಥಾಪಿಸಿ ‘ಮೊದಲ ತೇದಿ’ ಎಂಬ ಚಿತ್ರ ನಿರ್ಮಿಸಿದರು. ಎರಡನೆ ಚಿತ್ರ ‘ಶಿವಶರಣೆ ನಂಬೆಕ್ಕ’. 1957ರಲ್ಲಿ ಕುತೂಹಲಭರಿತ ‘ರತ್ನಗಿರಿ ರಹಸ್ಯ’ ಎಂಬ ಚಿತ್ರವನ್ನು ನಿರ್ಮಿಸಿದರು. ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಸಾಹಿತ್ಯ, ಟಿ ಜಿ ಲಿಂಗಪ್ಪ ಅವರ ಸಂಗೀತ ಈ ಚಿತ್ರಕ್ಕೆ ಅಪಾರ ಯಶಸ್ಸನ್ನು ತಂದುಕೊಡುವಲ್ಲಿ ನೆರವಾದವು. ಕನ್ನಡ ಚಿತ್ರರಂಗದಲ್ಲೇ ಮೊದಲ ಬಾರಿಗೆ ರಜತೋತ್ಸವ ಆಚರಿಸಿದ ಸಾಮಾಜಿಕ ಚಿತ್ರವೆಂದು ಖ್ಯಾತಿ ಪಡೆದ ‘ಸ್ಕೂಲ್ ಮಾಸ್ಟರ್’ ಚಿತ್ರವನ್ನು 1958ರಲ್ಲಿ ನಿರ್ಮಿಸಿದರು. ಅನಂತರ ಅವರ ಪದ್ಮಿನಿ ಪಿಕ್ಚರ್ಸ್‌‍ನಲ್ಲಿ ಕಿತ್ತೂರು ಚೆನ್ನಮ್ಮ, ಮಕ್ಕಳ ರಾಜ್ಯ, ಗಾಳಿ ಗೋಪುರ, ಚಿನ್ನದ ಗೊಂಬೆ, ಎಮ್ಮೆ ತಮ್ಮಣ್ಣ, ಬೀದಿ ಬಸವಣ್ಣ, ಅಮ್ಮ, ಶ್ರೀ ಕೃಷ್ಣದೇವರಾಯ, ಮಾಲತಿ ಮಾಧವ, ಒಂದು ಹೆಣ್ಣಿನ ಕಥೆ ಮುಂತಾದ ಅಮೋಘ ಚಿತ್ರಗಳು ನಿರ್ಮಾಣವಾದವು. ಇವುಗಳಲ್ಲಿ ‘ಸ್ಕೂಲ್ ಮಾಸ್ಟರ್’ ಮತ್ತು ‘ಕಿತ್ತೂರು ಚೆನ್ನಮ್ಮ’ ಚಿತ್ರಗಳು ರಾಷ್ಟ್ರಪ್ರಶಸ್ತಿ ಪಡೆದವು.”ಶ್ರೀ ಕೃಷ್ಣದೇವರಾಯ” ಚಿತ್ರಕ್ಕೆ ಫಿಲಂ ಫೇರ್ ಪ್ರಶಸ್ತಿ ದೊರಕಿತು. ಇದೇ ಚಿತ್ರದಲ್ಲಿ ಬಿ.ಆರ್.ಪಂತುಲು ಅವರು ನಿರ್ವಹಿಸಿದ ‘ತಿಮ್ಮರಸು’ ಪಾತ್ರಕ್ಕೆ ಶ್ರೇಷ್ಥ ನಟ ಪ್ರಶಸ್ತಿ ದೊರೆಯಿತು. ಶ್ರೀ ಕೃಷ್ಣದೇವರಾಯ ಚಿತ್ರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಬಿ.ಆರ್. ಪಂತುಲು ನಿರಾಕರಿಸಿದ್ದರು. ಆ ಸಿನಿಮಾದ ಅತ್ಯುತ್ತಮ ಅಭಿನಯಕ್ಕಾಗಿ ರಾಜ್‌ಕುಮಾರ್ ಅವರಿಗೆ ಪ್ರಶಸ್ತಿ ನೀಡಬೇಕಿತ್ತು ಎನ್ನುವುದು ಅವರ ವಾದವಾಗಿತ್ತು.

ಬಿ.ಆರ್.ಪಂತುಲು ಸುಮಾರು ಇಪ್ಪತ್ತೈದು ವರ್ಷಗಳ ಕಾಲ, ನಾಲ್ಕು ಭಾಷೆಗಳಲ್ಲಿ ಐವತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿ, ಚಿತ್ರೋದ್ಯಮಕ್ಕಾಗಿ ತಮ್ಮನ್ನೇ ತಾವು ತೇದುಕೊಂಡ ಮಹಾಪರುಷ. ಇವರು ಉದ್ಯಮಕ್ಕೆ ಕಾಲಿಟ್ಟಾಗ ಕನ್ನಡ ಚಿತ್ರರಂಗವಿನ್ನೂ ಕುಂಟುತ್ತಿತ್ತು. ಮದ್ರಾಸಿನಿಂದ ತಯಾರಾಗುತ್ತಿದ್ದ ಕನ್ನಡ ಚಿತ್ರಗಳಲ್ಲಿ ಕನ್ನಡತನವನ್ನು ಹುಡುಕಬೇಕಾಗಿತ್ತು. ಇದನ್ನ ಮನಗಂಡ ಪಂತುಲು ತಮಿಳರೊಂದಿಗೆ ಕಲೆತು ಮೊಟ್ಟಮೊದಲಿಗೆ `ಮೊದಲ ತೇದಿ’ ಚಿತ್ರ ನಿರ್ಮಿಸಿದರು. ಇದು ಸರ್ಕಾರಿ ನೌಕರನ ಬದುಕಿನ ಬವಣೆಯ ಸುತ್ತಲಿನದು. ಅಂದಿನ ಸಾಮಾಜಿಕ ಸ್ಥಿತಿಗತಿಯನ್ನು ಪ್ರತಿಬಿಂಬಿಸುವಂಥಾದ್ದು. ಚಿತ್ರ ಹಿಟ್ ಆಯ್ತು. ಧೈರ್ಯ ಬಂತು. ತಮಿಳಿನ ಒಡನಾಟದಲ್ಲಿದ್ದುಕೊಂಡೇ ಕನ್ನಡ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದರು. ರಾಜ್ ಕುಮಾರ್, ನರಸಿಂಹರಾಜು, ಚಿ.ಉದಯಶಂಕರ್, ಪುಟ್ಟಣ್ಣ ಕಣಗಾಲರಂತಹ ಪ್ರತಿಭಾವಂತರನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟರು. ರಾಜ್ ಕುಮಾರ್ ಅವರಿಗಾಗಿಯೇ ಗಾಳಿಗೋಪುರ, ಸಾಕುಮಗಳು, ಎಮ್ಮೆ ತಮ್ಮಣ್ಣ, ಬೀದಿ ಬಸವಣ್ಣ, ಅಮ್ಮ, ಗಂಡೊಂದು ಹೆಣ್ಣಾರು ಚಿತ್ರಗಳನ್ನು ಮಾಡಿದ ಪಂತುಲು, ನರಸಿಂಹರಾಜು ಅವರಿಗಾಗಿಯೇ ಪ್ರತ್ಯೇಕ ಪಾತ್ರ ಸೃಷ್ಟಿಸಿ ಹಾಸ್ಯದ ಹೊಸ ಟ್ರ್ಯಾಕೊಂದನ್ನು ಅನಿವಾರ್ಯವಾಗಿ ಚಿತ್ರದಲ್ಲಿರುವಂತೆ ನೋಡಿಕೊಂಡರು. ಹಾಗೆಯೇ ಇವರ ಸರಿಸುಮಾರು ಎಲ್ಲಾ ಚಿತ್ರಗಳಿಗೂ ಟಿ.ಜಿ.ಲಿಂಗಪ್ಪ ಸಂಗೀತ ನಿರ್ದೇಶಕರಾಗಿದ್ದುದು ಒಂದು ವಿಶೇಷ.

ಪಂತುಲು ಅವರು ‘ಕಾಲೇಜು ರಂಗ’ ಚಿತ್ರದ ಸಿದ್ಧತೆಯಲ್ಲಿದ್ದಾಗ, ಅಕ್ಟೋಬರ್ 8, 1974ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದರು. ಅವರ ಪಟ್ಟ ಶಿಷ್ಯ ಪುಟ್ಟಣ್ಣ ಕಣಗಾಲರು ಈ ಚಿತ್ರವನ್ನು ಪೂರ್ತಿ ಮಾಡಿ, ಗುರುಕಾಣಿಕೆಯಾಗಿ ಅರ್ಪಿಸಿದರು. ಇದು ಪದ್ಮಿನಿ ಪಿಕ್ಚರ್ಸ್‌ ಅವರ ಕೊನೆಯ ಚಿತ್ರವಾಯಿತು. ಆ ಮೂಲಕ ಭಾರತೀಯ ಚಿತ್ರರಂಗದ ಸುವರ್ಣ ಅಧ್ಯಾಯವೊಂದು ಕೊನೆಗೊಂಡಿತು.

ಪುಟ್ಟಣ್ಣ ಕಣಗಾಲರ ಪ್ರಕಾರ ಜನಸಾಮಾನ್ಯರನ್ನು ಚಿತ್ರಮಂದಿರಗಳತ್ತ ತರುವಂತೆ ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿದ್ದು ಬಿ.ಆರ್. ಪಂತುಲು. ಅವರು ಅಭಿನಯ-ನಿರ್ದೇಶನ-ನಿರ್ಮಾಣ ಈ ಮೂರೂ ಕಲೆಗಳನ್ನು ಕರಗತ ಮಾಡಿಕೊಂಡು ಕನ್ನಡ ಚಿತ್ರರಂಗವನ್ನು ಅತ್ಯುತ್ತಮ ಗುಣಮಟ್ಟದ ಚಿತ್ರಗಳಿಂದ ಶ್ರೀಮಂತಗೊಳಿಸಿದವರು. 1957ರಿಂದ 1972ರವರೆಗೆ ಅವರು ಕನ್ನಡದಲ್ಲಿ ನಿರ್ಮಿಸಿದ ಚಿತ್ರಗಳು, ಕನ್ನಡ ಚಿತ್ರರಂಗದತ್ತ ಇಡೀ ಭಾರತೀಯ ಚಿತ್ರರಂಗವೇ ನೋಡುವಂಥ ಇತಿಹಾಸವನ್ನು ನಿರ್ಮಿಸಿತ್ತು. ಅವರ ಶೇಕಡಾ 90ರಷ್ಟು ಚಿತ್ರಗಳಲ್ಲಿ ಡಾ. ರಾಜ್‌ಕುಮಾರ್ ನಾಯಕನಟರಾಗಿ ಅಭಿನಯಿಸಿರುವುದೊಂದು ವಿಶೇಷ. ಜೊತೆಗೆ ಸ್ವತಃ ಬಿ.ಆರ್.ಪಂತುಲುರವರೂ ಒಂದು ಮುಖ್ಯ ಪೋಷಕ ಪಾತ್ರದಲ್ಲಿದ್ದು ತಂದೆಯಂತೆ ಆ ಇಡೀ ಚಿತ್ರದ ಏಳಿಗೆಗೆ ಕಾರಣವಾಗುತ್ತಿದ್ದುದು ಆ ಚಿತ್ರಗಳ ಮತ್ತೊಂದು ಸುವಿಶೇಷ.

1955ರಲ್ಲಿ ಪದ್ಮಿನಿ ಪಿಕ್ಚರ್ಸ್‌ ಲಾಂಛನದಡಿಯಲ್ಲಿ ಪಂತುಲುರವರು ತಮ್ಮ ಚಿತ್ರ ನಿರ್ಮಾಣವನ್ನು ಆರಂಭಿಸಿದರಾದರೂ, ಅವರ ಚಿತ್ರಗಳನ್ನು “ಪಂತುಲು ಚಿತ್ರಗಳು” ಎಂದು ಕರೆಯುವುದೇ ವಾಡಿಕೆ. ‘ಸ್ಕೂಲ್ ಮಾಸ್ಟರ್’ ಚಿತ್ರದ ಧ್ಯಾನದ ಆರಂಭವಾದ “ಸ್ವಾಮಿ ದೇವನೆ” ಎಂಬ ಒಂದು ಹಾಡು ಸಾಕು, ಪಂತುಲು ಅವರು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಪ್ರಾತಃ ಸ್ಮರಣೀಯರಾಗಲು. ಸೋಸಲೆ ಅಯ್ಯಾ ಶಾಸ್ತ್ರಿಗಳ ಈ ಗೀತೆಯನ್ನು ಕಣಗಾಲ್ ಪ್ರಭಾಕರ ಶಾಸ್ತ್ರಿಗಳು ಒಂದಷ್ಟು ಬದಲಾವಣೆಯಿಂದ ಚಿತ್ರಗೀತೆಯಾಗಿ ಅಳವಡಿಸಿದ್ದರು. ಈ ಹಾಡು ನಮ್ಮ ನಿಮ್ಮೆಲ್ಲರ ಪ್ರೈಮರಿ ಶಾಲೆಯ ಮಗ್ಗಿ ಪುಸ್ತಕದ ಮೊದಲ ಪುಟದ ಪ್ರಾರ್ಥನಾ ಗೀತೆ ಯಾಗಿ ಸೇರಿಕೊಂಡು ಸಿನಿಮಾ ಹಾಡೆಂಬ ಪ್ರತ್ಯೇಕತೆಯ ರಿಯಾಯಿತಿಯಿಲ್ಲದಂತೆ ನಮ್ಮಲ್ಲಿ ಉತ್ಸಾಹ ತರುವ ಪ್ರಾರ್ಥನೆಯೇ ಆಗಿ ಹೋಗಿತ್ತು. ಇಂದೂ ಬಹಳಷ್ಟು ಶಾಲೆಗಳು ಇದನ್ನು ಪ್ರಾರ್ಥಣೆಯಾಗಿ ಬಳಸುತ್ತಿವೆ. ‘ಸ್ಕೂಲ್‌ಮಾಸ್ಟರ್’ ಚಿತ್ರದಲ್ಲಿ ಮೇಷ್ಟ್ರರಾಗಿ ಸ್ವತಃ ಪಂತುಲುರವರ ಮನೋಜ್ಞ ಅಭಿನಯ-ಹಾವಭಾವ ಅಪ್ರತಿಮವಾದದ್ದು. ಮೇಷ್ಟ್ರರ ಹೆಂಡತಿಯಾಗಿ ಅವರ ನಿಜ ಜೀವನದ ಪತ್ನಿಯೂ ಆಗಿದ್ದ ಎಂ.ವಿ. ರಾಜಮ್ಮನವರು ಪಂತುಲುವಿಗೆ ತಕ್ಕಂತೆ ಅಭಿನಯಿಸಿದ್ದರು.

ರತ್ನಗಿರಿ ರಹಸ್ಯ, ಸ್ಕೂಲ್ ಮಾಸ್ಟರ್, ಮಕ್ಕಳ ರಾಜ್ಯ, ಕಿತ್ತೂರು ಚೆನ್ನಮ್ಮ, ಗಾಳಿಗೋಪುರ, ಸಾಕು ಮಗಳು, ಚಿನ್ನದ ಗೊಂಬೆ, ದುಡ್ಡೇ ದೊಡ್ಡಪ್ಪ, ಎಮ್ಮೆ ತಮ್ಮಣ್ಣ, ಗಂಗೆ ಗೌರಿ, ಬೀದಿ ಬಸವಣ್ಣ, ಚಿನ್ನಾರಿ ಪುಟ್ಟಣ್ಣ, ಅಮ್ಮ, ಗಂಡೊಂದು ಹೆಣ್ಣಾರು, ಶ್ರೀ ಕೃಷ್ಣದೇವರಾಯ, ಅಳಿಯ ಗೆಳೆಯ, ಮಾಲತಿ ಮಾಧವ, ಒಂದು ಹೆಣ್ಣಿನ ಕಥೆ ಮುಂತಾದವು ಪಂತುಲು ಅವರ ಕನ್ನಡ ಚಿತ್ರಗಳಾದರೆ, ಕರ್ಣ, ಅಮರ್ ಶಹೀದ್, ವೀರ ಪಾಂಡ್ಯ ಕಟ್ಟಬೊಮ್ಮನ್, ದಶಾವತಾರ ಪಂತುಲು ಅವರು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಿಸಿ ನಿರ್ದೇಶಿಸಿದ ಕೆಲವು ಚಿತ್ರಗಳು. ಈ ಮಹಾನ್ ಚೇತನಕ್ಕೆ ನಮ್ಮ ಹೃತ್ಪೂರ್ವಕ ನಮನಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

777 ಚಾರ್ಲಿ ಚಿತ್ರಕ್ಕೆ ‘ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ’

Published

on

ಸುದ್ದಿದಿನ ಡೆಸ್ಕ್ : 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2021 ಪ್ರಕಟವಾಗಿದ್ದು, ಕನ್ನಡಕ್ಕೆ ನಾಲ್ಕು ಪ್ರಶಸ್ತಿಗಳು ಲಭಿಸಿವೆ.

ನಟ ರಕ್ಷಿತ್ ಶೆಟ್ಟಿ ಅಭಿನಯಿಸಿರುವ ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಜೇಕಬ್ ವರ್ಗೀಸ್ ನಿರ್ದೇಶನದ ಸಾಕ್ಷ್ಯಚಿತ್ರ ಆಯುಷ್ಮಾನ್‌ಗೆ ಅತ್ಯುತ್ತಮ ಅನ್ವೇಷಣಾ ಚಿತ್ರ ಪ್ರಶಸ್ತಿ ಲಭಿಸಿದೆ.

ಅನಿರುಧ್ ಜತ್ಕರ್ ನಿರ್ದೇಶನದ ಬಾಳ ಬಂಗಾರ ಸಾಕ್ಷ್ಯಚಿತ್ರ ತೀರ್ಪುಗಾರರ ವಿಶೇಷ ಉಲ್ಲೇಖ ಪಡೆದಿದೆ. ಸಿನಿಮಾ ವಿಮರ್ಶೆ ವಿಭಾಗದಲ್ಲಿ ಹಿರಿಯ ಪತ್ರಕರ್ತ ಬಿ.ಎನ್.ಸುಬ್ರಹ್ಮಣ್ಯ ತೀರ್ಪುಗಾರರ ವಿಶೇಷ ಉಲ್ಲೇಖಕ್ಕೆ ಭಾಜನರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶ್ರೀಲಂಕಾದಲ್ಲಿ ಕನ್ನಡ ಚಲನಚಿತ್ರೋತ್ಸವ

Published

on

ಸುದ್ದಿದಿನ, ಕೊಲೊಂಬೋ : ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿನ ತರಂಗಿಣಿ ಸಿನಿಮಾ ಹಾಲ್‌ನಲ್ಲಿ ಏರ್ಪಡಿಸಿದ್ದ ಕನ್ನಡ ಚಲನಚಿತ್ರೋತ್ಸವಕ್ಕೆ ಮಂಗಳವಾರ ಚಾಲನೆ ದೊರೆಯಿತು.

ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಗೋಪಾಲ್ ಬಾಗ್ಳೆ, ಶ್ರೀಲಂಕಾದ ಬಹು ಮಾಧ್ಯಮ ಖಾತೆ ಸಚಿವ ಡಾ. ಬಂದೂಲ ಗುಣವರ್ಧನೆ ಹಾಗೂ ಸಂಸ್ಕೃತಿ ಖಾತೆ ಸಚೆವ ವಿಧುರವಿಕ್ರಮ ನಾಯಕ್ ಮುಂತಾದವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ, ಕನ್ನಡ ಚಲನಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತರ ಮಾತನಾಡಿದ ಸಚಿವ ಡಾ.ಗುಣವರ್ಧನೆ, ಉಭಯ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ, ಚಲನಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಮನರಂಜನಾ ಮಾಧ್ಯಮವು ಅತ್ಯಂತ ಜನಪ್ರಿಯ ಮಾಧ್ಯಮವಾಗಿದ್ದು, ಪ್ರಾದೇಶಿಕ ಚಲಚಿನಚಿತ್ರಗಳು, ಅದರಲ್ಲಿಯೂ ಭಾರತದ ಚಲನಚಿತ್ರ ಸಂಸ್ಕೃತಿಯ ಜೊತೆಗೆ ದೇಶದ ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುತ್ತಿದೆ. ಸಾಮಾಜಿಕ ವಲಯದಲ್ಲಿ ಪ್ರಾದೇಶಿಕ ಬಾಷೆಯಲ್ಲಿ ಬರುವ ಚಿತ್ರಗಳು, ಚಿತ್ರ ಪ್ರೇಮಿಗಳಿಗೆ ಅದರಲ್ಲಿಯೂ ವಿದ್ಯಾರ್ಥಿಗಳಿಗೆ, ಪಠ್ಯಕ್ರಮದ ಭಾಗವಾಗಿ ಹಲವು ಪ್ರದೇಶಗಳಲ್ಲಿ ಅಧ್ಯಯನಕ್ಕೂ ಅನುಕೂಲವಾಗಿದೆ. ಇತ್ತೀಚೆಗೆ ಶ್ರಿಲಂಕಾದ ವಿದ್ಯಾರ್ಥಿಗಳು ಇದರ ಅನುಭವವನ್ನು ಪಡೆದುಕೊಳ್ಳಲು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಮಾರ್ಗದರ್ಶನ ಅನುಕೂಲವಾಗಿದೆ ಎಂದು ಅವರು ಹೇಳಿದರು.

ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 250 ರಿಂದ 300 ಚಲನಚಿತ್ರಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಿದೆ. ಕಳೆದ ವರ್ಷ ನಾಲ್ಕನೇ ಬಹುದೊಡ್ಡ ಕಾರ್ಯಗಾರ ಆಯೋಜಿಸಲಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶ್ರೀಲಂಕಾ ವಿದ್ಯಾರ್ಥಿಗಳಿಗೆ, ಚಲನಚಿತ್ರರಂಗದ, ತರಬೇತಿ, ವೀಕ್ಷಣೆ ಹಾಗೂ ನಿರ್ಮಾಣದ ಬಗ್ಗೆ ಹಲವು ರೀತಿ ಪ್ರಾತ್ಯಕ್ಷಿಕೆ ಮೂಲಕ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವರ್ಷ ಅಮೆರಿಕ-ಅಮೆರಿಕ, ಇಷ್ಠಕಾಮ್ಯ, ಮಾತಾಡ್ ಮಾತಾಡ್ ಮಲ್ಲಿಗೆ ಹಾಗೂ ಕೊಟ್ರೇಶಿ ಕನಸು ಚಿತ್ರಗಳನ್ನು ಪ್ರದರ್ಶಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏನಿದು ವಿಚಿತ್ರ | ನಟಿಯ ಡೈವೋರ್ಸ್ ಫೋಟೋಶೂಟ್..!

Published

on

ಸುದ್ದಿದಿನ ಡೆಸ್ಕ್ : ನಟಿ ಶಾಲಿನಿ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಜನಮನಗೆದ್ದಿದ್ದಾರೆ. ಮೊದಲ ಮದುವೆಯ ವಿಚ್ಛೇದನದ ನಂತರ ಆಕೆ ಮೊಹಮ್ಮದ್‌ ಎಂಬುವವರನ್ನು ಮದುವೆಯಾಗಿದ್ದರು. ಆ ದಾಂಪತ್ಯದಲ್ಲಿ ಹಲವು ಸಮಸ್ಯೆಗಳಿಂದ ವಿಚ್ಛೇದನ ಪಡೆದರು. ಅದನ್ನು ಸಂಭ್ರಮಿಸಲು ಫೋಟೋಶೂಟ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.

ಮದುವೆಗೂ ಮುನ್ನ ತೆಗೆದಿರುವ ಫೋಟೋಶೂಟ್​​ಗಳು ಬಹಳಷ್ಟು ಬಂದಿವೆ. ಆದರೆ ವಿಚಿತ್ರ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಕ್ಕಾಗಿಯೇ ನಟಿ ಶಾಲಿನಿಫೋಟೋಗಳು ವೈರಲ್ ಆಗಿವೆ. ಡೈವೋರ್ಸ್ ಆಗಿದ್ದನ್ನೂ ಸಂಭ್ರಮಿಸುವ ಕಾರಣಕ್ಕಾಗಿ ಮಾಡಿದ ಈ ಫೋಟೋಶೂಟ್​ ಈಗ ಹಲವರ ಗಮನ ಸೆಳೆದಿದೆ.

ಜೀ ತಮಿಳು ಶೋ ಸೂಪರ್ ಮಾಮ್ ರಿಯಾಲಿಟಿ ಶೋನಲ್ಲಿ ಮಗಳೊಂದಿಗೆ ಶಾಲಿನಿ ಭಾಗವಹಿಸಿದ್ದರು. ಖುಷ್ಬು ಅಭಿನಯದ ಮೀರಾ ತಮಿಳು ಧಾರಾವಾಹಿಯಲ್ಲಿ ಕೂಡ ಆಕೆ ನಟಿಸಿದ್ದಾರೆ. ಈ ಧಾರಾವಾಹಿಯ ಮೂಲಕ ನಟಿ ಖುಷ್ಪು ಹಲವು ವರ್ಷಗಳ ನಂತರ ಕಿರುತೆರೆಯಲ್ಲಿ ನಟಿಸಿದ್ದಾರೆ.

ಮಹಿಳೆಯೊಬ್ಬರು ‘ಡೈವೋರ್ಸ್ಡ್’ ಎಂಬ ಫಲಕ ಹಿಡಿದ, ಪತಿಯೊಂದಿಗೆ ಇದ್ದ ಫೋಟೋದಲ್ಲಿನ ಪತಿಯ ಮುಖದ ಭಾಗವನ್ನು ಹರಿದು ಪ್ರತ್ಯೇಕಿಸಿದ, ಪತಿ-ಪತ್ನಿ ಇಬ್ಬರೂ ಜೊತೆಗಿದ್ದ ಫೋಟೋವನ್ನು ಚಪ್ಪಲಿ ಕಾಲಿನಲ್ಲಿ ತುಳಿದು ಹೊಸಕಿ ಹಾಕಿದಂಥ ಫೋಟೋಗಳು ಈ ಫೋಟೋಶೂಟ್​ನ ಪ್ರಮುಖ ಆಕರ್ಷಣೆ ಎನಿಸಿಕೊಂಡಿವೆ. ಅಲ್ಲದೆ, ‘ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!’ ಎಂಬ ಫಲಕವನ್ನು ಹಿಡಿದು ಸಂತಸದಿಂದ ಬೀಗುವಂಥ ಫೋಟೋ ಮೂಲಕ ‘ಪತಿ ಎಂಬ ಒಂದು ಸಮಸ್ಯೆಯನ್ನು ನಿವಾರಿಸಿಕೊಂಡಿದ್ದೇನೆ’ ಎಂಬ ಸಂದೇಶವನ್ನೂ ಈಕೆ ಸಾರಿದ್ದಾರೆ.

ಶಾಲಿನಿ ಇನ್ಸ್ಟಾ ಅಕೌಂಟ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://instagram.com/shalu2626?igshid=YmMyMTA2M2Y=

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 days ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ1 week ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ2 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ2 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ2 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ2 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

ದಿನದ ಸುದ್ದಿ2 weeks ago

ರಿಯಾಯಿತಿ ದರದಲ್ಲಿ ಲಿಡಕರ್ ವಸ್ತುಗಳ ಮಾರಾಟ

ಸುದ್ದಿದಿನ,ದಾವಣಗೆರೆ : ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡಕರ್) ನಿಗಮದ ವತಿಯಿಂದ ಗಣೇಶ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 20 ರವರೆಗೆ ಅಪ್ಪಟ ಚರ್ಮದ...

ದಿನದ ಸುದ್ದಿ2 weeks ago

ಸೆಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹಗಳ ಮಾರಾಟ ನಿಷೇಧ

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿ ಅಂಗವಾಗಿ ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಮಾರಾಟ ಮಾಡಿದ್ದಲ್ಲಿ ಕಾನೂನು...

ದಿನದ ಸುದ್ದಿ3 weeks ago

ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ...

ದಿನದ ಸುದ್ದಿ3 weeks ago

ಇಂದು ತೆಂಗು ವಿಶ್ವ ದಿನ

ಸುದ್ದಿದಿನ ಡೆಸ್ಕ್ : ಇಂದು ತೆಂಗಿನ ವಿಶ್ವ ದಿನ. ತೆಂಗು ಬೆಳೆಗಾರರ ಹಿತ ರಕ್ಷಣೆ ಹಾಗೂ ತೆಂಗಿನ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಚಿಂತಿಸಲು, ಈ ದಿನಾಚರಣೆ ಮೀಸಲು. ಹೊಸ...

Trending