Connect with us

ಲೈಫ್ ಸ್ಟೈಲ್

ಲಾಲ್ ಬಾಗ್ ಬಗ್ಗೆ ನಿಮಗೆ ಗೊತ್ತಿರದ ಅಚ್ಚರಿ ಸಂಗತಿಗಳು..!

Published

on

ಲಾಲ್‍ಬಾಗ್ ಎಂದರೆ ಎಲ್ಲರಿಗೂ ನೆನಪಾಗುವುದು ಅಲ್ಲಿನ ಗಾಜಿನಮನೆ, ದೊಡ್ಡ ಗಡಿಯಾರ, ವಿಧವಿಧ ಹೂವಿನ ಗಿಡಗಳ ತೋಟ, ಹಳೆದಾದ ಮರಗಳು ಹಾಗೂ ಸುಂದರವಾದ ಕೆರೆ ಮತ್ತು ಸುತ್ತಮುತ್ತಲಿನ ಪರಿಸರ. ಇನ್ನೂ ಹೆಚ್ಚಾಗಿ ನೆನಪಾಗುವುದು, ಪ್ರತಿ ವರ್ಷ ಸ್ವಾತಂತ್ರೋತ್ಸವ ಹಾಗೂ ಗಣರಾಜ್ಯ ದಿನೋತ್ಸವದ ಸಂದರ್ಭಗಳಲ್ಲಿ ಏರ್ಪಡಿಸಲಾಗುವ ಫಲಪುಷ್ಪ ಪ್ರದರ್ಶನಗಳು.

ಈ ಬಾರಿಯ ಫಲಪುಷ್ಪ ಪ್ರದರ್ಶನದ ಬಗ್ಗೆ ತಿಳಿಯುವ ಮುನ್ನ ಲಾಲ್‍ಬಾಗ್ ಬಗ್ಗೆ ಸ್ವಲ್ಪ ತಿಳಿಯೋಣ.

ಲಾಲ್‍ಬಾಗ್, ಬೆಂಗಳೂರಿನ ಹೃದಯ ಭಾಗದಲ್ಲಿ ಇದೆ. 240 ಎಕರೆ ಪ್ರದೇಶದ ಲಾಲ್‍ಬಾಗ್‍ನಲ್ಲಿ ಸುಮಾರು 1,854 ಬಗೆಯ ಗಿಡಗಳು ಇವೆ. ಹೈದರಾಲಿಯು ಇದನ್ನು 1760 ರಲ್ಲಿ ನಿರ್ಮಿಸಲು ಸೂಚಿಸುತ್ತಾನೆ. ಆದರೆ, ಇದನ್ನು ಈತನ ಮಗ ಟಿಪ್ಪು ಸುಲ್ತಾನ್ ಕಾಲದಲ್ಲಿ ಪೂರ್ಣಗೊಳಿಸಲಾಯಿತು. ಈ ಉದ್ಯಾನವನ್ನು ಅಭಿವೃದ್ಧಿಪಡಿಸಲು, ಹಲವಾರು ದೇಶಗಳಿಂದ ಸಸ್ಯಗಳು ಮತ್ತು ಮರಗಳನ್ನು ಆಮದು ಮಾಡಿಕೊಳ್ಳಲಾಗಿದೆ. ಇದನ್ನು ಮೊಘಲ್ ಉದ್ಯಾನಗಳ ಮಾದರಿಯಲ್ಲಿ ಈ ಉದ್ಯಾನವನ್ನು ನಿರ್ಮಿಸಲು ನಿರ್ಧರಿಸಿದ್ದರು. ತುಮಕೂರು ಜಿಲ್ಲೆಯ, ಶಿರಾ ತಾಲ್ಲೂಕಿನಲ್ಲಿರುವ ಮೊಘಲ್ ಉದ್ಯಾನವು ಲಾಲ್‍ಬಾಗ್‍ನ ವಿನ್ಯಾಸಕ್ಕೆ ಮೂಲವಾಗಿದೆ.

ಲಾಲ್‍ಬಾಗ್‍ಗೆ, ಲಾಲ್‍ಬಾಗ್ ಎಂದು ಹೆಸರು ಬರಲು ಮೂರು ಕಾರಣಗಳಿವೆ ಎಂದು ಹೇಳಲಾಗುತ್ತದೆ. ಮೊದಲನೆಯದಾಗಿ, ಇತಿಹಾಸಕಾರ ಮನ್ಸೂರ್ ಅಲಿ ಹೇಳುವ ಪ್ರಕಾರ, ಶ್ರೀರಂಗಪಟ್ಟಣದಲ್ಲಿ ಇರುವ ಲಾಲ್‍ಮಹಲ್ ಅರಮನೆಯ ಹತ್ತಿರ ಇರುವ ತೋಟ, ಇದೇ ಮಾದರಿಯಲ್ಲಿ ಇರುವುದು. ಎರಡನೆಯದು ಹೈದರಾಲಿಯ ತಾಯಿ ಲಾಲ್‍ಬಾಯಿ ಅವರ ಹೆಸರು ಎಂದೂ ಕೆಲವರು ಹೇಳುತ್ತಾರೆ. ಮೂರನೆಯದಾಗಿ, ಲಾಲ್‍ಬಾಗ್‍ನಲ್ಲಿ ಬೆಳೆದಂತಹ ಕೆಂಪು ಗುಲಾಬಿಗಳಿಂದ ಆ ಹೆಸರು ಬಂದಿತು ಎನ್ನುತ್ತಾರೆ.

ಲಾಲ್ ಬಾಗ್‍ನಲ್ಲಿ ಪ್ರಮುಖವಾಗಿ ನೋಡಬೇಕಾಗಿರುವುದು

• ಗಾಜಿನ ಮನೆ-ಇದನ್ನು ಲಂಡನ್ನಿನ ಕ್ರಿಸ್ಟಲ್ ಪಾಲೇಸ್ ಮಾದರಿಯಲ್ಲಿದೆ. ಇದಕ್ಕೆ ರಾಜಕುಮಾರ ಅಲ್ಬರ್ಟ್ ವಿಕ್ಟರ್ ಅವರು ನವಂಬರ್ 30, 1898 ರಂದು ಅಡಿಗಲ್ಲು ಹಾಕಿದರು. ನಂತರದ ಮೇಲ್ವಿಚಾರಕ ಜೇಮ್ಸ್ ಕ್ಯಾಮರಾನ್ ಇದನ್ನು ನಿರ್ಮಿಸಿದರು.

• ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರ ಪ್ರತಿಮೆ.

• ಭಾರತದ ಮೊದಲ ಹುಲ್ಲಿನ ಗಡಿಯಾರ.

• ನೂರಾರು ವರ್ಷ ಅಪರೂಪದ ಹಳೆಯ ಮರಗಳ ದೊಡ್ಡದಾದ ಸಂಗ್ರಹ.

• 20 ಮಿಲಿಯನ್ ವರ್ಷ ಹಳೆಯ ಕೋನಿಫೆರಸ್ ಮರದ ಪಳವಳಿಕೆ.

• ಪರ್ಷಿಯಾ, ಅಫ್ಘಾನಿಸ್ತಾನ ಮತ್ತು ಪ್ರಾನ್ಸ್‍ನ ಹಲವಾರು ಅಪರೂಪದ ಸಸ್ಯಗಳು.

• 3000 ವರ್ಷಕ್ಕೂ ಹಳೆಯದಾದ ಬೃಹದಾಕಾರದ ಬಂಡೆ.

• ಸುಂದರವಾದ ಕೆರೆ.

ಫಲಪುಷ್ಪ ಪ್ರದರ್ಶನ

ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಪ್ರದರ್ಶನವನ್ನು 1912 ರಲ್ಲಿ ಜಿ.ಹೆಚ್. ಕೃಂಬಿಗಲ್ ರವರು ಪ್ರಥಮವಾಗಿ ಪ್ರಾರಂಭಿಸಿದರು. ಈ ಸಾಲಿನಲ್ಲಿ ಹಮ್ಮಿಕೊಂಡಿರುವ ಫಲಪುಷ್ಪ ಪ್ರದರ್ಶನವು 208ನೇ ಪ್ರದರ್ಶನವಾಗಿದೆ.

ಈ ಬಾರಿ ಮುಖ್ಯವಾಗಿ ರಾಷ್ಟ್ರದ ಯೋಧರಿಗೆ ನಮನ ಸಲ್ಲಿಸಲು, ಭಾರತದ ಸಮಗ್ರ ರಕ್ಷಣಾ ವ್ಯವಸ್ಥೆಯನ್ನು 36 ಸದಸ್ಯರ ತಂಡ 9 ದಿನಗಳಲ್ಲಿ ಅನಾವರಣಗೊಳಿಸಿದೆ ಅಲ್ಲದೇ, ಕನ್ನಡ ಚಿತ್ರರಂಗಕ್ಕೆ 85 ವರ್ಷ ತುಂಬಿದ ಸವಿನೆನಪಿಗಾಗಿ ಗೌರವವನ್ನೂ ಸಹ ಸಲ್ಲಿಸಲಾಗಿದೆ.

ಗಾಜಿನ ಮನೆ ಪ್ರವೇಶಿಸುತ್ತಿದ್ದಂತೆಯೇ, ದೆಹಲಿಯ ಇಂಡಿಯಾ ಗೇಟ್ ಬಳಿಯಿರುವ ಯುದ್ಧ ಸ್ಮಾರಕ ‘ಅಮರ್ ಜವಾನ್ ಜ್ಯೋತಿ’ ಯ ಪ್ರತಿಕೃತಿಯನ್ನು ಇರಿಸಲಾಗಿದೆ. ಅದರ ಹಿಂಭಾಗದಲ್ಲಿ ಸಮುದ್ರ ಮಟ್ಟದಿಂದ 5753 ಮೀಟರ್ ಎತ್ತರದಲ್ಲಿರುವ ಸಿಯಾಚಿನ್ ಹಿಮಪರ್ವತವನ್ನು ಹೋಲುವ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ.

ಆ ಪರ್ವತದ ಮುಂಭಾಗದಲ್ಲಿ, ಭೂ ಸೇನೆಯ ಯುದ್ಧ ಟ್ಯಾಂಕರ್, ವಾಯುಸೇನೆಯ ಯುದ್ಧ ವಿಮಾನ, ಹೆಲಿಕಾಪ್ಟರ್, ಫೈಟರ್ ಜೆಟ್‍ಗಳು, ನೌಕಾದಳದ ಸಮರ ನೌಕೆ, ದೇಶದ ಗಡಿ ರಕ್ಷಣಾ ಪಡೆಗೆ ಸಂಬಂಧಿಸಿದ ಮಾದರಿಗಳನ್ನು ಭತ್ತದ ಹುಲ್ಲು, ಥರ್ಮೋಕೋಲ್ ಮತ್ತು ಸಾವಿರಾರು ಹೂವುಗಳಿಂದ ಸಿಂಗರಿಸಲಾಗಿದೆ. ಹಾಗೆಯೇ ಸಿಯಾಚಿನ್‍ನಲ್ಲಿ ಸೇನೆಯ ಕಾರ್ಯಾಚರಣೆ ಬಗ್ಗೆ, ಕೊರೆಯುವ ಚಳಿಯಲ್ಲಿ ಸೈನಿಕರು ಕರ್ತವ್ಯ ನಿರತರಾಗಿರುವ ಬಗ್ಗೆ, ಹಿಮದಿಂದ ಕೂಡಿರುವ ಬೆಟ್ಟವನ್ನು ಸೈನಿಕರು ಹತ್ತುತ್ತಿರುವ ಮಾದರಿಗಳು ಎಲ್ಲರನ್ನೂ ಆಕರ್ಷಿಸುತ್ತಿದೆ.

ದೇಶ ಕಾಯುವ ಸಂದರ್ಭದಲ್ಲಿ, ಹಿಮದಡಿಯಲ್ಲಿ ಸಿಲುಕಿ ಮರಣ ಹೊಂದಿದ ವೀರ ಕನ್ನಡಿಗ, ಹನುಂತಪ್ಪ ಕೊಪ್ಪದ್ ರವರ ಧಾನ್ಯಗಳಿಂದ ರಚಿಸಲ್ಪಟ್ಟ ಭಾವಚಿತ್ರ ಹಾಗೂ ಅಕ್ಕಿಯಿಂದ ರಚಿಸಿರುವ ಭಾರತದ ತ್ರಿವರ್ಣ ಧ್ವಜವು ಎಲ್ಲರ ಕಣ್ಸೆಳೆಯುತ್ತದೆ. ಮುಂದುವರೆದು, ಶೌರ್ಯ ಚಕ್ರಗಳ ಬಗ್ಗೆ, ಸೈನಿಕರ ಸುಭಾಷಿತಗಳು ಹಾಗೂ ಇನ್ನಿತರೆ ಮಾಹಿತಿಗಳ ಫಲಕಗಳನ್ನೂ ಸಹ ಪ್ರದರ್ಶಿಸಲಾಗಿದೆ.

ಬೆಟ್ಟದ ಹಿಂಭಾಗದಲ್ಲಿ, ಕನ್ನಡ ಚಿತ್ರರಂಗಕ್ಕೆ 85 ವರ್ಷ ತುಂಬಿರುವುದರಿಂದ ಅದಕ್ಕೆ ಗೌರವ ಸಮರ್ಪಿಸಲು ಕೆಂಪು, ಬಿಳಿ, ಕೇಸರಿ ಗುಲಾಬಿಗಳನ್ನು ಹೆಚ್ಚಾಗಿ ಬಳಸಿ ಬೃಹತ್ ಗಾತ್ರದ ಕ್ಯಾಮರಾ, ಫಿಲ್ಮ್‍ರೋಲ್, ಕ್ಲಾಪ್ ಬೋರ್ಡ್ ಇನ್ನೂ ಮುಂತಾದುವುಗಳನ್ನು ನೋಡುಗರಿಗೆ ಆಕರ್ಷಿಸುವಂತೆ ನಿರ್ಮಿಸಲಾಗಿದೆ. ಚಿತ್ರೋದ್ಯಮದಲ್ಲಿ ತೆರೆಯ ಹಿಂದೆ ಕಾರ್ಯನಿರ್ವಹಿಸುವ ಎಲ್ಲಾ ತಂತ್ರಜ್ಞರಿಗೆ ನಮನ ಸಲ್ಲಿಸಲಾಗಿದೆ.

ಬೆಟ್ಟದ ಎಡಭಾಗದಲ್ಲಿ 12 ಅಡಿ ಎತ್ತರದ, 25 ಸಾವಿರ ಸೇವಂತಿಗೆ ಮತ್ತು ಕಾರ್ನೆಷಿಯ ಹೂವುಗಳನ್ನು ಬಳಸಿ ಬೃಹತ್ ಗಾತ್ರದ ಸಿಂಹದ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ. ಈ ಸಿಂಹವು ಎಲ್ಲರಿಗೂ ಸೆಲ್ಫಿ ತೆಗೆದುಕೊಳ್ಳುವ ನೆಚ್ಚಿನ ತಾಣವಾಗಿದೆ. ಈ ಸಿಂಹದ ಹಿಂಭಾಗದಲ್ಲಿ ಊಟಿಯ ಫರ್ನ್ ಹಿಲ್‍ನ ಆರ್ಕಿಡ್ ಹೂವಿನ ಪರಿಮಳ ಹಾಗೂ ಸೌಂದರ್ಯ ಎಲ್ಲರ ಮನಸನ್ನು ಸೂರೆಗೊಳ್ಳುತ್ತದೆ.

ಗಾಜಿನ ಮನೆ ಒಳಗೆ ಸುತ್ತಲೂ ಬಾಲ್ಲ್‍ಮ್, ಸ್ಪೈದರ್ ಪ್ಲಾಂಟ್, ಆಂಟೋರಿಯನಂ, ಲಂಟಾನ್, ಅಸ್ಟರ್, ಕೆಲೆಂಡುಲಾ, ಸಾಲ್ವಿಯಾ, ಲಾಕ್ರ್ಸ್‍ಪರ್, ಡಯಾಂತನಿ, ಹೈಡ್ರಾಂಜಿಯಾ, ಜೆನಿಯಾ, ಚೆಂಡು ಹೂವು, ಹೀಗೆ ಹಲವು ಬಗೆಯ ಗಿಡಗಳು ಎಲ್ಲರ ಗಮನ ಸೆಳೆಯುತ್ತವೆ. ಹಿಮ್ಮೇಳದಲ್ಲಿ ಕೇಳುತ್ತಿದ್ದ, ಲಘು ಸಂಗೀತವು ಎಲ್ಲರ ಮನಸ್ಸಿಗೆ ಮೊದ ನೀಡುತ್ತದೆ.

ಗಾಜಿನ ಮನೆಯ ಸುತ್ತಲೂ 4 ವಿಭಾಗಗಳಲ್ಲಿ ಯುದ್ಧ ಟ್ಯಾಂಕರ್, ಕ್ಷಿಪಣಿ, ಸಮರ ನೌಕೆ, ಜೆಟ್ ಯುದ್ಧ ವಿಮಾನಗಳ ಮಾದರಿಯನ್ನು ಭತ್ತದ ಹುಲ್ಲಿನಿಂದ ಬೃಹದಾಕಾರವಾಗಿ ನಿರ್ಮಿಸಲಾಗಿದೆ.

ಗಾಜಿನ ಮನೆಯ ಹೊರಾಂಗಣದಲ್ಲಿ ಹೂವಿನಿಂದ ಮಾಡಿದ ಜಲಪಾತ, ನವಿಲು, ಹೃದಯಾಕಾರದ ಕಮಾನು, ಹೂವುಗಳ ತೂಗು ಗುಚ್ಛ ಕಣ್ಣಿಗೆ ಆನಂದವನ್ನು ನೀಡುತ್ತವೆ.

ಈ ಬಾರಿ ಇನ್ನೊಂದು ವಿಶೇಷವೆಂದರೆ ಲಾಲ್‍ಬಾಗ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗಿದೆ.

ಒಟ್ಟಾರೆ 2 ಕೋಟಿ ರೂ.ವೆಚ್ಚದಲ್ಲಿ, 1 ಲಕ್ಷ 20 ಸಾವಿರಕ್ಕೂ ಅಧಿಕ ಹೂಗಳನ್ನು ಬಳಸಿ ಗಾಜಿನ ಮನೆಯಲ್ಲಿ ಪುಷ್ಪ
ಪ್ರದರ್ಶನವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ.

ಈ ಪ್ರದರ್ಶನವು ಆಗಸ್ಟ್ 4 ರಂದು ಪ್ರಾರಂಭಗೊಂಡಿದ್ದು, ಆಗಸ್ಟ್ 15 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದ್ದು, ಆಸಕ್ತರು ಒಮ್ಮೆ ಭೇಟಿ ನೀಡಿ ಆನಂದ ಹೊಂದಬಹುದಾಗಿದೆ.

-ಸೌಮ್ಯ ಅಶೋಕ್
ಬೆಂಗಳೂರು

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.

54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

Published

on

ಸುದ್ದಿದಿನ,ಬೆಂಗಳೂರು:ಆರ್‌ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್‌ ರೆಸ್ಟೋರೆಂಟ್‌ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.

ಬೆಂಗಳೂರಿನ #NativeCooks ಫುಡ್‌ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್‌ಸಿಬಿ ಅಭಿಮಾನಿಗಳ ಮನ ಗೆದ್ದಿದೆ.

ಹೌದು, ಹೆಬ್ಬಾಳ, ಆರ್‌ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್‌ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್‌ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್‌ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್‌ಬಾಕ್ಸ್‌ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.

ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್‌ ಕುಕ್ಸ್‌ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್‌ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್.‌ ವೆಜ್‌ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್‌ವೆಜ್‌ ಊಟವನ್ನು 135 ರೂಪಾಯಿಗೆ ಹಾಗೂ ಎಕ್‌ ಮೀಲ್‌ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.

ಸದ್ಯಕ್ಕೆ ಹೆಬ್ಬಾಳ, ಆರ್‌ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ13 hours ago

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗಾಗಿ ಜನರಲ್ ಕೆ.ಎಸ್.ತಿಮ್ಮಯ್ಯ ನಗದು...

ಅಂಕಣ3 days ago

ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)

~ ರುದ್ರಪ್ಪ ಹನಗವಾಡಿ ಭದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್‌ಎಸ್ ಹಲವು ಗುಂಪುಗಳಾಗಿ...

ದಿನದ ಸುದ್ದಿ4 days ago

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ...

ದಿನದ ಸುದ್ದಿ4 days ago

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು,...

ದಿನದ ಸುದ್ದಿ5 days ago

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ...

ದಿನದ ಸುದ್ದಿ5 days ago

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ...

ದಿನದ ಸುದ್ದಿ5 days ago

ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ...

ದಿನದ ಸುದ್ದಿ5 days ago

ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಕ್ತ ನಿಧಿ ಅನುದಾನದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗಧಿತ ನಮೂನೆಯ ಅರ್ಜಿಯನ್ನು...

ದಿನದ ಸುದ್ದಿ5 days ago

ಉದ್ಯೋಗ | ಜುಲೈ 15 ರಂದದು ನೇರ ಸಂದರ್ಶನ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ವಾಕ್-ಇನ್-ಇಂಟರ್‍ವೀವ್ ಆಯೋಜಿಸಲಾಗಿದೆ. ವಾಕ್-ಇನ್-ಇಂಟರ್‍ವೀವ್...

ದಿನದ ಸುದ್ದಿ6 days ago

ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೇಲೋಶಿಪ್ ಅಥವಾ ವಿದ್ಯಾರ್ಥಿವೇತನಕ್ಕೆ ಅನ್‍ಲೈನ್ ಮೂಲಕ ಅರ್ಜಿ...

Trending