Connect with us

ಸಿನಿ ಸುದ್ದಿ

HaPpY BiRtHdAy | ಕಭೀ ಕಭೀ ಮೇರೆ ದಿಲ್ ಮೇ| ಗಾನ ಕೋಗಿಲೆ ಮುಖೇಶ್ ಬಗ್ಗೆ ನೀವಿಷ್ಟು ಓದಲೇ ಬೇಕು

Published

on

ಫೋಟೋ ಮೇಲಿನ ಸಹಿ ಮುಖೇಶ್ ಅವರದ್ದು

ಭಾರತೀಯ ಚಿತ್ರರಂಗದ ಅಮರ ಗಾಯಕರಲ್ಲೊಬ್ಬರಾದ ಮುಖೇಶ್ ಅವರು ಜನಿಸಿದ್ದು ಜುಲೈ 22, 1923ರಲ್ಲಿ. 1950ರ ದಶಕದಿಂದ ಎಪ್ಪತರ ದಶಕದಲ್ಲಿ ಅವರ ಕಂಠದಿಂದ ಹರಿದ ಗಾನ ಸುಧೆ ತಣಿಸದ ಕಿವಿಗಳೇ ಇಲ್ಲ. ತಟ್ಟದ ಹೃದಯಗಳಿಲ್ಲ. ಒಂದಷ್ಟು ನಟನಾಗಿ ಸಿನಿಮಾ ಗಾಯಕನಾಗಿ ಮತ್ತು ಭಕ್ತಿಗೀತೆಗಳ ಹಾಡುಗಾರನಾಗಿ ಮುಖೇಶ್ ಮಾಡಿದ ಮೋಡಿ ಮೋಹಕವಾದದ್ದು.

ಸಂಗೀತ ಶಿಕ್ಷಕರೊಬ್ಬರು ತಮ್ಮ ಸೋದರಿಗೆ ಕಲಿಸಲು ಬರುತ್ತಿದ್ದಾಗ ಅದನ್ನು ಪಕ್ಕದ ಕೋಣೆಯಿಂದ ಆಲಿಸಿ ಹಾಡಲು ಪ್ರಾರಂಭಿಸಿದ ಮುಖೇಶ್ ಮುಂದೆ ಬೆಳೆದ ರೀತಿ ಮಹೋನ್ನತವಾದದ್ದು. ‘ನಿರ್ದೋಷ್’ ಎಂಬ ಚಿತ್ರದಲ್ಲಿ ಗಾಯಕ ನಟನಾಗಿ ಚಿತ್ರಜೀವನ ಪ್ರಾರಂಭಿಸಿದ ಮುಖೇಶ್ ಸುಮಾರು ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ತಮ್ಮ ಗಾನಸುಧೆ ಹರಿಸಿದರು.

ಕೆಲವು ವರ್ಷಗಳ ಕಾಲ ಯುಗಳಗೀತೆಗಳನ್ನು ಹಾಡಿದ ಮುಖೇಶ್ 1945ರಲ್ಲಿ ಪಹಲೀ ನಜರ್ ಚಿತ್ರದಲ್ಲಿ ಮೊದಲ ಬಾರಿಗೆ ‘ದಿಲ್ ಜಲ್‌ತಾ ಹೈ ತೋ ಜಲ್‌ನೇ ದೇ’ಹಾಡನ್ನು ಹಾಡಿದರು. ಅದು ಯಶಸ್ವಿಯಾಯಿತು. ಮುಂದೆ ನೌಶಾದ್ ಅವರ ಸಂಗೀತ ನಿರ್ದೇಶನದಲ್ಲಿ ಹಾಡಿದ ‘ಅಂದಾಜ್’ ಚಿತ್ರದಲ್ಲಿ ಹಾಡಿದ ‘ತೂ ಕಹೇ ಅಗರ್…’, ‘ಝೂಮ್ ಝೂಮ್ ಕೇ ನಾಚೇ ಆಜ್…’ , ‘ಹಮ್ ಆಜ್ ಕಹೀಂ ದಿಲ್ ಖೋ ಬೈಠೇ…’ ಮತ್ತು ‘ಟೂಟೇ ನ ದಿಲ್ ಟೂಟೇ ನ…’ ಹಾಡುಗಳಲ್ಲಿ ಮುಖೇಶರ ಸ್ವಂತಿಕೆ ಎದ್ದು ತೋರುತ್ತವೆ

‘ರಾಜ್ ಕಪೂರರ ಗಾಯನ ಸ್ವರ ಮುಖೇಶ್’ ಎಂಬ ಪ್ರಸಿದ್ಧವಾದ ಮಾತು 1948ರಲ್ಲಿ ರಾಜ್ ಕಪೂರ್ ನಿರ್ಮಿಸಿ ನಟಿಸಿದ ‘ಆಗ್’ ಚಿತ್ರದಿಂದ ಆರಂಭವಾಯಿತು. ರಾಜ್ ಕಪೂರರ ‘ಆವಾರಾ’ ಮತ್ತು ‘ಶ್ರೀ 420’ ಚಿತ್ರಗಳಲ್ಲಿ ಮುಖೇಶ್ ಹಾಡಿದ ಹಾಡು ಎಲ್ಲೆಲ್ಲೂ ಪ್ರಸಿದ್ಧವಾಗಿಬಿಟ್ಟವು.

ಹಲವು ಚಿತ್ರಗಳಲ್ಲಿ ಅಭಿನಯ ಮತ್ತು ನಿರ್ಮಾಣ ಮಾಡಲು ಹೋಗಿ ಸೋಲು ಕಂಡ ಮುಖೇಶ್, 1953ರಲ್ಲಿ ಬಿಡುಗಡೆಯಾದ ರಾಜ್ ಕಪೂರರ ಆಹ್ ನಲ್ಲಿ ‘ಛೋಟಿಸೀ ಯಹ್ ಜಿಂದ್‌ಗಾನೀರೇ…’ ಎಂಬ ಹಾಡನ್ನು ಟಾಂಗೇವಾಲನಾಗಿ ಹಾಡಿ ಅಭಿನಯಿಸಿದ ನಂತರ ಅಭಿನಯಕ್ಕೆ ವಿದಾಯ ಹೇಳಿ ಗಾಯನಕ್ಕಷ್ಟೇ ತಮ್ಮನ್ನು ಮುಡಿಪಿಟ್ಟರು.

1958ರಲ್ಲಿ ದಿಲೀಪ್ ಕುಮಾರ್ ಅಭಿನಯದ ಯಹೂದಿ ಚಿತ್ರದ ‘ಯೆಹ್ ಮೇರಾ ದೀವಾನಾಪನ್ ಹೈ…’ ಹಾಡು ಬಿಡುಗಡೆಯಾದಾಗ ಹಲವುಕಾಲ ನಿಧಾನವಾಗಿ ಹರಿದ ಮುಖೇಶ್ ಅವರ ಬದುಕಿಗೆ ಮತ್ತೊಂದು ಮಿನುಗು ನಕ್ಷತ್ರವಾಯಿತು. ದಿಲೀಪ್ ಕುಮಾರರ ಆ ವರ್ಷದ ಇನ್ನೊಂದು ಚಿತ್ರ ಬಿಮಲ್ ರಾಯ್ ನಿರ್ದೇಶನದ ಮಧುಮತಿ ಚಿತ್ರದಲ್ಲಿ ಸಲಿಲ್ ಚೌಧುರಿ ಸಂಗೀತ ನಿರ್ದೇಶನದಲ್ಲಿ ಹಾಡಿದ ಎಲ್ಲವೂ ಜನಪ್ರಿಯವಾದವು. ಅಲ್ಲದೆ ‘ಪರ್ವರಿಶ್’ ಹಾಗೂ ಮರುವರ್ಷದ ‘ಫಿರ್ ಸುಬಹ್ ಹೋಗೀ’ ಚಿತ್ರಗಳ ಹಾಡುಗಳ ಜತೆಗೆ 1960ರಿಂದ 1976ರ ವರೆಗಿನ ಸಮಯದಲ್ಲಿ ಅತ್ಯಂತ ಹೃದಯಂಗಮ ಹಾಡುಗಳಿಂದ ಮುಖೇಶ್ ರಸಿಕರನ್ನು ರಂಜಿಸಿದರು. ನಾಲ್ಕು ಬಾರಿ ಫಿಲ್ಮ್ ಫೇರ್ ಪ್ರಶಸ್ತಿ ಮತ್ತು ಒಮ್ಮೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಶ್ರೇಷ್ಠ ಹಿನ್ನೆಲೆ ಗಾಯನಕ್ಕಾಗಿ ಪಡೆದರು.

ಅಫ್‌ಸಾನಾ ಚಿತ್ರದ ‘ಕಿಸ್‌ಮತ್ ಬಿಗ್‌ಡೀ, ದುನಿಯಾ ಬದ್‌ಲೀ’, ಯಹೂದೀ ಚಿತ್ರದ ‘ಯೆಹ್ ಮೇರಾ ದೀವಾನಾಪನ್ ಹೈ’, ದೇವರ್ ಚಿತ್ರದ ‘ಬಹಾರೋಂ ನೆ ಮೇರಾ ಚಮನ್ಈ ಚಿತ್ರದ ‘ಕಹಿಂ ದೂರ್ ಜಬ್ ದಿನ್ ಡಲ್ ಜಾಏ…’ ಕಭೀ ಕಭೀ ಚಿತ್ರದ ‘ಕಭೀ ಕಭೀ ಮೇರೆ ದಿಲ್ ಮೇ’, ಮುಂತಾದ ಹಾಡುಗಳಲ್ಲಿ ಹಾಡಿನಲ್ಲಿ ಮಾಧುರ್ಯದ ಜತೆ ದುಃಖದ ಒಳತೋಟಿಯೊಂದು ಹರಿಯುವದನ್ನು ಅನುಭವಿಸಬಹುದು.

ರಾಜ್ ಕಪೂರರ ಸಂಗೀತಸ್ವರವೆಂದು ಗುರುತಿಸಲ್ಪಟ್ಟ ಮುಖೇಶ್ ಮನೋಜ್ ಕುಮಾರನಿಗೇ ಹೆಚ್ಚು ಹಾಡಿದರಲ್ಲದೆ, ಶಂಕರ್-ಜೈಕಿಶನರ ಸಂಗೀತ ನಿರ್ದೇಶನಕ್ಕಿಂತ ಅಧಿಕವಾಗಿ ಕಲ್ಯಾಣ್‌ಜೀ-ಆನಂದ್‌ಜೀಯವರ ನಿರ್ದೇಶನದಲ್ಲಿ ಹಾಡಿದರು. ರಾಜ್ ಕಪೂರರ ಸತ್ಯಮ್ ಶಿವಮ್ ಸುಂದರಮ್ ಚಿತ್ರದಲ್ಲಿ ಲಕ್ಷ್ಮೀಕಾಂತ್-ಪ್ಯಾರೇಲಾಲರ ಸಂಗೀತ ನಿರ್ದೇಶನದಲ್ಲಿ ಧ್ವನಿಮುದ್ರಿಸಲ್ಪಟ್ಟ ‘ಚಂಚಲ್, ಶೀತಲ್, ನಿರ್ಮಲ್, ಕೋಮಲ್ ಸಂಗೀತ್ ಕೀ ದೇವೀ ಸ್ವರ್ ಸಜ್‌ನೀ’ ಹಾಡು ಕೊನೆಯದಾಯಿತು. ನಂತರ ಲತಾ ಜತೆಗೂಡಿ ಅಮೆರಿಕಾ ಸಂಯುಕ್ತ ಸಂಸ್ಥಾನಗಳಲ್ಲಿ ಸಂಗೀತ ಪರ್ಯಟನೆಗೆ ಹೋದ ಅವರು ಆ ಪ್ರವಾಸದ ಸಮಯದಲ್ಲಿ ನಿಧನರಾದರು. ಕೇವಲ 53ವರ್ಷ ಜೀವಿಸಿದ್ದ ಮುಖೇಶ್ ತಮ್ಮ ಧ್ವನಿಯಲ್ಲಿ ಉಳಿಸಿಹೋದ ಮಾಧುರ್ಯದ ಹಾಡುಗಳು ಚಿರಂತನವಾಗುಳಿದಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending