Connect with us

ಭಾವ ಭೈರಾಗಿ

ಆ ಪ್ರಾಯಶ್ಚಿತ್ತ ಕಾಡಿದರಷ್ಟೇ ನಾವು ಮನುಷ್ಯರಾಗೋದಲ್ವಾ..!

Published

on

ನಾವು ನೀವು ತುಂಬಾ ಸಲ ಹಾಗೆ ಮಾಡಿರುತ್ತೇವೆ. ದಾರಿಯಲ್ಲೆಲ್ಲೋ ಸಿಕ್ಕಿದ್ದು ತಿಂದುಕೊಂಡು ಅಡ್ಡಾಡಿಕೊಂಡಿದ್ದ ಬೆಕ್ಕಿನಮರಿಯನ್ನು ತುಂಬಾ ಆಸ್ಥೆಯಿಂದ ಹಿಡಿದುತಂದಿರುತ್ತೇವೆ, ಅದು ಬರಲೊಲ್ಲದು ನಾವು ಬಿಡಲೊಲ್ಲೆವು, ಎಷ್ಟೇ ತಪ್ಪಿಸಿಕೊಂಡರೂ ಬಿಡದೆ ಹಿಡಿದಿರುತ್ತೇವೆ. ‘ಒಮ್ಮೆ ನನ್ನ ಮನೆಗೆ ಬಾ ಆ ನಂತರ ನಾನೇ ಆಚೆ ತಳ್ಳಿದರೂ ನೀನು ಹೋಗುವುದಿಲ್ಲ ಹಾಗೆ ನೋಡಿಕೊಳ್ತೇನೆ’ ಎಂದು ಮನದಲ್ಲೇ ಆ ಬೆಕ್ಕಿನ ಮರಿಗೆ ಮಾತುಕೊಟ್ಟಿರುತ್ತೇವೆ.

ನಮ್ಮಿಂದ ತಪ್ಪಿಸಿಕೊಳ್ಳಲು ತನ್ನ ಶಕ್ತಿ ಮೀರಿ ಹೋರಾಡಿ ಇನ್ನು ನನ್ನಿಂದಾಗದು ಎಂದು ತಿಳಿದ ನಂತರ ಬೆಕ್ಕಿನ ಮರಿ ನಮಗೆ ಶರಣಾಗಿರುತ್ತದೆ. ಕೊನೆಗೂ ಸಿಕ್ಕಿಬಿಟ್ಟೆಯಲ್ಲಾ ಮುದ್ದಿನ ಮರಿಯೇ ಬಾ ಎಂದು ಮನೆಗೆ ತರುತ್ತೇವೆ. ಅಂದು ಆ ಬೆಕ್ಕಿನ ಮರಿಗೆ ಜೀವನದಲ್ಲಿ ಎಂದೂ ಕಾಣದಷ್ಟು ಬೂರಿ ಭೋಜನ. ತಿನ್ನಿಸಿ ಆ ಬಿಳೀ ಬೆಕ್ಕಿನ ಕೊರಳಿಗೊಂದು ಕೆಂಪು ಟೇಪು ಕಟ್ಟಿ ಮುದ್ದುಮಾಡಿ ಅಂಗಳದಲ್ಲಿ ಆಡಲು ಬಿಡುತ್ತೇವೆ.


ಅಷ್ಟೇ ಅದೆಲ್ಲಿತ್ತೋ ಯಮರೂಪಿ ನಾಯಿಯೊಂದು ಬೀದಿಯ ಅದ್ಯಾವುದೋ ಮೂಲೆಯಿಂದ ಮಿಂಚಿನವೇಗದಲ್ಲಿ ಬಂದು ನೋಡನೋಡುತ್ತಿದ್ದಂತೆಯೇ ನಮ್ಮೆದುರೇ ಆ ಮುದ್ದಿನಮರಿಯ ಕುತ್ತಿಗೆಗೆ ಬಾಯಿಹಾಕಿ ವಾಯುವೇಗದಲ್ಲಿ ಕಣ್ಮರೆಯಾಗುತ್ತದೆ. ನಾವೋ ಕೈಲಾದಷ್ಟೂ ಜೋರಾಗಿ ಕೂಗುತ್ತಾ ಅದರ ಹಿಂದೆ ಬೀದಿಯ ಕೊನೆಯವರೆಗೂ ಓಡುತ್ತೇವೆ. ಆದರೆ ಹಿಡಿದೆವಾ? ಬೆಕ್ಕಿನಮರಿಯ ಜೀವ ಉಳಿಸಿದೆವಾ? ಖಂಡಿತಾ ಇಲ್ಲ. ಹಿಡಿದು ತರುವ ಮುನ್ನ, ಮತ್ತು ತಂದಾದಮೇಲೂ ಆ ಬೆಕ್ಕಿನ ಮರಿಯ ಕಣ್ಣಲ್ಲಿ ನಾವು ಕಂಡಿದ್ದ ಆ ಮುಗ್ದತೆ ಅಸಹಾಯಕತೆಯೂ ಹೌದು ಎಂಬುದು ನಮಗೀಗ ಅರ್ಥವಾಗತೊಡಗುತ್ತದೆ.

ಪಾಪ ಅದೆಲ್ಲೋ ಬೇಲಿಬದಿಯಲ್ಲಿ ಕೈಗೆ ಸಿಕ್ಕಿದ್ದು ತಿಂದುಕೊಂಡು ಯಾರಿಗೂ ಕಾಣದಂತೆ ಕದ್ದು ತಿರುಗುತ್ತಾ ತನ್ನ ಜೀವನ ಸಾಗಿಸುತ್ತಿತ್ತು, ನಿನ್ನನ್ನು ರಾಣಿ ಮಾಡುತ್ತೇನೆ ಬಾ ಎಂದು ಕರೆತಂದು ಸಾವಿನದವಡೆಗೆ ನೂಕಿಬಿಟ್ಟಿದ್ದೇವೆ, ಕೊನೆಯಬಾರಿ ನಾಯಿ ಅದರ ಕೊರಳಿಗೆ ತನ್ನ ಚೂಪಾದ ಹಲ್ಲುನೆಟ್ಟು ಕುತ್ತಿಗೆಯನ್ನು ಬಾಯಲಿ ಬಿಗಿಹಿಡಿದಾಗ ವ್ಯಾಂವ್,,,,, ಎಂದದ್ದು ಮತ್ತೆ ಮತ್ತೆ ಕಿವಿಯಲ್ಲಿ ಗುಯ್ ಗುಟ್ಟು ಕರುಳು ಕಿತ್ತು ಬರುತ್ತದೆ. ನಮಗಾದರೂ ಏನು ಗೊತ್ತಿತ್ತು ನಾ ಕೊಡುವ ಪ್ರೀತಿ ಹೀಗೆ ಸಾವಿನ ರೂಪ ಪಡೆಯುತ್ತದೆ ಎಂದು? ಅಲ್ಲಿ ನಾವೂ ಅಸಹಾಯಕರೇ ಅಲ್ವಾ?

ಒಮ್ಮೆ ನಮ್ಮ ಮನೆಯಲ್ಲಿ ಇಲಿಮರಿಯೊಂದು ಕಾಲಿಗೆ ಪೆಟ್ಟಾಗಿ ಕುಂಟುತ್ತಾ ಹೋಗುತ್ತಿತ್ತು, ಸಿನಿಮಾಗಳಲ್ಲಿ ಪ್ರಾಣಿಪ್ರಿಯ ಮಕ್ಕಳನ್ನು ನೋಡಿ ಇನ್ಸ್ಪೈರ್ ಆಗಿದ್ದ ನಾನು ಆ ಇಲಿಯನ್ನು ಕಷ್ಟಪಟ್ಟು ಹಿಡಿದೆ, ಅದರ ಕೊರಳಿಗೆ ದಾರ ಕಟ್ಟಿ ನಮ್ಮ ಮನೆಯ ಮಂಚದ ಕಾಲಿಗೆ ಕಟ್ಟಿದೆ, ಅದು ಏನೇನು ತಿನ್ನುತ್ತದೆ ಎಂದು ತಿಳಿದುಕೊಂಡು ಅದನ್ನೇ ತಂದು ತಿನ್ನಿಸಿದೆ. ಇಡೀ ರಾತ್ರಿ ಅಲ್ಲೇ ಇದ್ದ ಇಲಮರಿಯನ್ನು ಆಗಾಗ ನೋಡಿ ಸಂತಸ ಪಟ್ಟೆ. ಬೆಳಗ್ಗೆ ಎದ್ದು ಬ್ರಶ್ ಮಾಡಲು ಮಂಚದ ಪಕ್ಕದಲ್ಲೇ ನಡೆದುಹೋಗುವಾಗ ಸರ್ರನೆ ಬಂದ ಇಲಿಮರಿ ನನ್ನ ಕಾಲಿಗೆ ಸಿಕ್ಕಿತ್ತು. ಅಷ್ಟೆ. ನಾನು ಇಟ್ಟ ಹೆಜ್ಜೆಯ ಕೆಳಗೆ ಸಿಕ್ಕು ವಿಲವಿಲ ಒದ್ದಾಡಹತ್ತಿತು.

ಅಯ್ಯಯ್ಯೋ ಎಂದವನೇ ನೀರು ತಂದು ಬಾಯಿಗೆ ಬಿಡಲು ಹೋಗಿ ಸ್ನಾನ ಮಾಡಿಸಿಬಿಟ್ಟೆ, ಮನೆಯ ಪಕ್ಕದಲ್ಲಿದ್ದ ದೇವಸ್ಥಾನಕ್ಕೆ ಹೋಗಿ ತೀರ್ಥ ತಂದು ಇಲಿಮರಿಗೆ ಪ್ರೋಕ್ಷಣೆ ಮಾಡಿದೆ. ಆದರೆ ಇಲಿಮರಿ ಬದುಕಲಿಲ್ಲ. ಇದೆಲ್ಲ ನಡೆದು ಅರ್ಧಗಂಟೆಯ ಒಳಗೆ ಇಲಿಯ ಸ್ವರ್ಗಾರೋಹಣ ನಡೆದೇ ಹೋಯಿತು. ನಾನು ಪ್ರಾಯಶ್ಚಿತ್ತದಲ್ಲಿ ಬೆಂದು ಹೋದೆ. ಆ ಇಲಿಯನ್ನು ಕೊಂದ ಪಾಪಪ್ರಜ್ಞೆ ಇಂದಿಗೂ ನನ್ನನ್ನು ಕಾಡುತ್ತದೆ.

ಕೇವಲ ಇಲಿ ಬೆಕ್ಕಿನ ವಿಚಾರದಲ್ಲಷ್ಟೆ ಅಲ್ಲ ಮನುಷ್ಯರ ವಿಚಾರದಲ್ಲೂ ಸಾಕಷ್ಟು ಬಾರಿ ಹೀಗೆ ಮಾಡಿರುತ್ತೇವೆ. ಸಂಬಂಧಗಳ ಆರಂಭದಲ್ಲಿ ಕ್ಷಣಕ್ಕೊಂದರಂತೆ ಹೊಸ ಭರವಸೆಗಳ ಹುಟ್ಟಿಗೆ ಕಾರಣರಾಗಿರುತ್ತೇವೆ. ನಂತರ ನಮಗೆ ನಾವೇ ಸಮಾಧಾನಿಸಿಕೊಂಡು ಇನ್ನೂ ಏನು ಮಾಡಬೇಕು ಬಿಡು ಎಂದುಕೊಂಡಿರುತ್ತೇವೆ. ಆಗತಾನೆ ಯೌವನಕ್ಕೆ ಕಾಲಿಟ್ಟು ತಂದೆ ತಾಯಿ ಜೊತೆಗೆ ಮಗುವಂತಿದ್ದ ಪುಟ್ಟ ಹುಡುಗಿಯೊಂದನ್ನು ಮದುವೆಯಾಗಿ ಅವಳ ಕಂಗಳಲ್ಲಿದ್ದ ಸಾವಿರ ಕನಸುಗಳಿಗೆ ಸಮಾಧಿಕಟ್ಟಿ, ಆರಂಭವಾಗುವುದಕ್ಕೂ ಮುಂಚೆಯೇ ಅವಳ ಬದುಕಿಗೆ ಬೇಲಿಹಾಕಿ, ಅವಳ ಜೀವನವನ್ನೇ ನರಕಮಾಡಿರುವ ಅದೆಷ್ಟೋ ಗಂಡಸರನ್ನು ಕಣ್ಣಾರೆ ಕಂಡಿದ್ದೇನೆ.

ಪಾಪ ಮದುವೆಯ ಹೊಸತರಲ್ಲಿ ಒಬ್ಬನೇ ಮಗ, ಸರ್ಕಾರಿ ಕೆಲಸ, ಕೈತುಂಬಾ ಸಂಬಳ ಇನ್ನೇನು ಬೇಕು ತಗೋ ರಾಣಿತರ ಇರ್ತಿಯ ಅಂತ ಅಕ್ಕಪಕ್ಕದ ಮನೆಯವರು ಅವಳನ್ನು ಉಬ್ಬಿಸಿರುತ್ತಾರೆ. ಅವಳೋ ದಿನಕ್ಕತ್ತು ಬಾರಿ ಅವನ ಫೋಟೋ ನೋಡಿ ಇದೇ ಎದೆಯಮೇಲೆ ಮಲಗಬೇಕು, ಗುಂಗುರು ಕೂದಲಿನೊಂದಿಗೆ ಆಟವಾಡಬೇಕು, ಕಂಬಳಿಹುಳದಂತ ಮೀಸೆ ಹಿಡಿದು ತಿರುವಬೇಕು, ಗುಂಡುಗಲ್ಲವ ಕಚ್ಚಿ ಚೇಷ್ಟೆ ಮಾಡಬೇಕು ಹೀಗೆ ಹತ್ತಾರು ಕನಸು ಕಂಡಿರುತ್ತಾಳೆ, ಆದರೆ ಅಸಲಿಗೆ ಅಂಗಾತ ಮಲಗುವುದಕ್ಕಷ್ಟೇ ಸೀಮಿತವಾದಾಗ ಆ ಪುಟ್ಟ ಹೃದಯ ತನ್ನ ಕನಸು ಕೊಂದವರನ್ನು ಯಾಕೆ ಕ್ಷಮಿಸಬೇಕು?

ಕ್ಷಮಿಸಿ ಇದನ್ನೆಲ್ಲಾ ಹೇಳಬೇಕೆಂದುಕೊಂಡಿರಲಿಲ್ಲ, ಆದರೆ ಕಥೆಯೊಂದನ್ನು ಹೆಣೆಯುತ್ತಾ ಪಾರ್ಕಿನಲ್ಲಿ ಹೆಜ್ಜೆ ಮೇಲೆಜ್ಜೆ ಇಟ್ಟು ಸುತ್ತುವಾಗ ಅವನೊಬ್ಬ ಅವಳ ಮಾತೇ ಕೇಳದೆ ಮುಂದೆ ಹೋಗುತ್ತಿದ್ದ, ತನ್ನನ್ನು ಬಿಟ್ಟುಹೋಗದಂತೆ ಅವಳು ಅಂಗಲಾಚಿ ಬೇಡುತ್ತಿದ್ದಾಳೆ. ಅಸಲಿಗೆ ಅವರಿಬ್ಬರೂ ಗಂಡಹೆಂಡತಿಯರು. ಮದುವೆಯಾದಾಗಿನಿಂದ ಹೊಂದಾಣಿಕೆಯೇ ಇಲ್ಲ ಅವಳು ಶುದ್ಧ ಚಾಕರಿಯವಳಂತೆ ದುಡಿಯುತ್ತಾಳೆ ಆತನಿಗೆ ಸಮಾಧಾನವೇ ಇಲ್ಲ. ಅದೇನೋ ಸಾಲದು ಅಂತ ಬಿಟ್ಟು ಹೋಗುತ್ತಿದ್ದ ಅವಳು ಅಳುವುದಕಂಡು ನನಗೆ ಇದೆಲ್ಲಾ ನೆನಪಾಯಿತು. ಅವಳಿಗೆ ಮತ್ತೇನೂ ಬೇಡವಾಗಿತ್ತು ಆ ಹಿಡಿಯಷ್ಟಿರುವ ಹೃದಯಕ್ಕೆ ಬೊಗಸೆಯಷ್ಟು ಪ್ರೀತಿಕೊಡದಷ್ಟು ಬಡವನಾಗಿದ್ದ ನನ್ನೆದುರು ನಿಂತಿದ್ದ ಸೊ ಕಾಲ್ಡ್ ಗಂಡಸು…!

-ದರ್ಶನ್ ಆರಾಧ್ಯ
ಬೆಂಗಳೂರು

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕವಿ, ಬರಹಗಾರ, ಪತ್ರಕರ್ತ ದರ್ಶನ್ ಆರಾಧ್ಯ ಹಾಸನ ಜಿಲ್ಲೆಯ ಬೇಲೂರಿನವರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿಎ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋಧ್ಯಮ ವಿಭಾಗದಲ್ಲಿ ಎಂ.ಎ ಪದವಿ ಪಡೆದಿದ್ದಾರೆ. ಪ್ರೀತಿಯ ಪಕಳೆಗಳು ಇವರ ಪ್ರಕಟಿತ ಕವನಸಂಕಲನ. ಮಯೂರ ಸುದ್ದಿವಾಹಿನಿಯಲ್ಲಿ ವಾರ್ತಾ ನಿರ್ಮಾಪಕರು, ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಕನ್ನಡದ ಟಿವಿ೧ ನ್ಯೂಸ್ ನಲ್ಲಿ ರಾಜಕೀಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಫೋನ್:8495980857 Mail: snehajeevidarshan@gmail.com

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂತರಂಗ1 week ago

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು...

ದಿನದ ಸುದ್ದಿ1 week ago

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌...

ದಿನದ ಸುದ್ದಿ3 weeks ago

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ...

ದಿನದ ಸುದ್ದಿ4 weeks ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ4 weeks ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ1 month ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ1 month ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ1 month ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ1 month ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ1 month ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

Trending