Connect with us

ಲೈಫ್ ಸ್ಟೈಲ್

ಬಣ್ಣಗಳನ್ನೇ ಬದುಕಾಗಿಸಿಕೊಂಡ ಯುವ ಕಲಾವಿದ ‘ಪರಶುರಾಮ ಲಮಾಣಿ’

Published

on

  • ಅರುಣ್

ಪರಶುರಾಮ ಲಮಾಣಿ ಮೂಲತಃ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಲಂಬಾಣಿ ಸಮುದಾಯದ ಮತ್ತು ಗ್ರಾಮೀಣ ಹಿನ್ನೆಲೆಯಿಂದ ಬೆಳೆದುಬಂದ ಪರಶುರಾಮ್ ರವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಣವನ್ನು ಗುಂಡೇನಹಳ್ಳಿ ಗ್ರಾಮದಲ್ಲಿ ಪೂರ್ತಿಗೊಳಿಸಿದರು.

ಚಿಕ್ಕ ವಯಸ್ಸಿನಲ್ಲಿ ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದ ಪರಶುರಾಮ್ ರವರು ಅದನ್ನೇ ಮುಂದುವರಿಸಿಕೊಂಡು ದೃಶ್ಯಕಲಾ ಮೂಲ ಎರಡು ವರ್ಷಗಳ ಕಲಿಕಾ ಅವಧಿಯನ್ನು ಧಾರವಾಡದಲ್ಲಿ ಪೂರ್ತಿಗೊಳಿಸಿ ನಂತರ ದೃಶ್ಯ ಕಲಾ ಮಹಾವಿದ್ಯಾಲಯ ದಾವಣಗೆರೆಯಲ್ಲಿ ಕಲಿಕೆಯನ್ನು ಮುಂದುವರೆಸಿ ಸ್ನಾತಕೋತ್ತರ ಪದವಿಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ದೃಶ್ಯಕಲಾ ವಿಭಾಗ ಗೊಟಗೋಡಿಯಲ್ಲಿ ಪ್ರಸ್ತುತವಾಗಿ ಕಲಿಕೆಯನ್ನು ಪೂರ್ಣಗೊಳಿಸಿದ್ದಾರೆ.

ಇವರ ಮುಂದಿನ ಹಂತದ ಬೆಳವಣಿಗೆಗೆ ಸರ್ಕಾರದಿಂದ ಹಾಗೂ ಇಲಾಖೆಯ ವತಿಯಿಂದ ಸಹಕಾರ ಮತ್ತು ಪ್ರೋತ್ಸಾಹ ದೊರಕಿದ್ದೇ ಆದಲ್ಲಿ ಚಿತ್ರಕಲಾ ಮಾಧ್ಯಮದಲ್ಲಿ ಮತ್ತಷ್ಟು ಮಗದಷ್ಟು ಸಾಧನೆಯನ್ನು ಮಾಡುವ ಆಶಯ ಪರಶುರಾಮ ರವರದ್ದಾಗಿದೆ.

ಕಲಾಕೃತಿಗಳು

ಪರಶುರಾಮ್ ರವರು ಹೆಚ್ಚು ಆಸಕ್ತಿಯಿಂದ ರಚಿಸುವ ಕಲಾಕೃತಿಗಳಲ್ಲಿ ಭಾವ ಚಿತ್ರಗಳು. ಲಂಬಾಣಿ ಸೊಗಡನ್ನು ಬಿಂಬಿಸುವ ಚಿತ್ರಗಳು. ಜಲವರ್ಣ ಕಲೆ. ದೃಶ್ಯಕಲಾ ಜನಪದ. ಹಸೆ ಚಿತ್ರಕಲೆ. ಇನ್ನು ಮುಂತಾದ ಚಿತ್ರಕಲಾ ವಿಭಾಗದಲ್ಲಿ ವಿಷಯಗಳನ್ನು ಆಯ್ದುಕೊಂಡು ಅದರಲ್ಲಿ ತಮ್ಮ ಕೈಚಳಕವನ್ನು ತೋರಿಸುತ್ತಾ ಅತಿಸುಂದರವಾಗಿ ಬಿಂಬಿಸುವ ಕಲೆ ಪರಶುರಾಮ ಅವರದ್ದು.

ಪರಶುರಾಮ ಲಮಾಣಿ ‘ಕಲಾಕೃತಿಗಳು’

ಭಾಗವಹಿಸಿದ ಸ್ಪರ್ಧಾ ವೇದಿಕೆಗಳು

ಸೋಲೋ ಶೋ

  • ಪಿಕಾಕ್ ಆರ್ಟ್ ಗ್ಯಾಲರಿ ಮಿರಾಜ್ ( ಎಂಎಸ್)

ಗ್ರೂಪ್ ಶೋ

  • 2014- ಧಾರವಾಡ ಜಿಲ್ಲಾ ಉತ್ಸವ ಧಾರವಾಡ.
  • 2015- ಗೋರ್ಮೆಂಟ್ ಆರ್ಟ್ ಗ್ಯಾಲರಿ ಧಾರವಾಡ.
  • 16-17 ಚಿತ್ರೋತ್ಸವ ಯುನಿವರ್ಸಿಟಿ ಕಾಲೇಜ್ ಆಫ್ ವಿಜುವಲ್ ಆರ್ಟ್ ದಾವಣಗೆರೆ.
  • 2019- ಕಲಾ ಪಯಣ-01 ಆರ್ಟ್ ಗ್ಯಾಲರಿ ಧಾರವಾಡ.
  • 2020 -ಕರ್ನಾಟಕ ಕಲಾ ವೈಭವ ರಾಣೇಬೆನ್ನೂರು.
  • 2013-14 ಚಿತ್ರಕಲಾ ಸಂತೆ ಕರ್ನಾಟಕ ಚಿತ್ರಕಲಾ ಪರಿಷತ್ ಬೆಂಗಳೂರು.
  • 2014- ಶಿರಸನಗಿ ಕಲಿಕಾ ದೇವಿ ಮಹೋತ್ಸವ ಆರ್ಟ್ ಪ್ರದರ್ಶನ ಶಿರಸನಗಿ.
  • 2016- ಮೈಸೂರು ದಸರಾ ಆರ್ಟ್ ಪ್ರದರ್ಶನ ಮೈಸೂರು.
  • 2017 – 46th ಅನುವಲ್ ಆರ್ಟ್ ಪ್ರದರ್ಶನ ಮಂಡ್ಯ ಆಯೋಜಿಸಿದವರು ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು.
  • 2018- ಟ್ರೆಡಿಷನಲ್ ಪೇಂಟಿಂಗ್ ಕಾಂಪಿಟೇಶನ್ ಬೆಂಗಳೂರು GAFX-2018.

ವರ್ಕ್ ಶಾಪ್ಸ್

  • 2016 – ಹಸೆ ಚಿತ್ತಾರ ಕಲಾ ಕಮ್ಮಟ ಆಯೋಜಿಸಿದವರು ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು.
  • 2017 – ನಿಪಾತ್ಯ ಕಲಾ ಕಮ್ಮಟ ಆಯೋಜಿಸಿದವರು ಕರ್ನಾಟಕ. ಲಲಿತಕಲಾ ಅಕಾಡೆಮಿ ಬೆಂಗಳೂರು.
  • 2019- ಅಂಬಾಮತ ಆರ್ಟ್ ಕ್ಯಾಂಪ್ ಆಯೋಜಿಸಿದವರು ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು.

ಶಿಬಿರಗಳು

  • 2013- ಆರ್ಟಿಸ್ಟ್ ಕ್ಯಾಂಪ ಕರ್ನಾಟಕ ಯುನಿವರ್ಸಿಟಿ ಧಾರವಾಡ.
  • 2016 – ಬಯಲುಸೀಮೆ ಆರ್ಟಿಸ್ಟ್ ಕ್ಯಾಂಪ್ ಆಯೋಜಿಸಿದವರು ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು.
  • 2020 – ಕರ್ನಾಟಕ ಕಲಾ ವೈಭವ ಆರ್ಟ್ ಕ್ಯಾಂಪ್ ಆಯೋಜಿಸಿದವರು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ.

ಲಭಿಸಿರುವ ಪ್ರಶಸ್ತಿ

  • ಪ್ರಜಾವಾಣಿ ಯುವ ಸಾಧಕರ ಪ್ರಶಸ್ತಿ 2020

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending