ಲೈಫ್ ಸ್ಟೈಲ್
ಬಣ್ಣಗಳನ್ನೇ ಬದುಕಾಗಿಸಿಕೊಂಡ ಯುವ ಕಲಾವಿದ ‘ಪರಶುರಾಮ ಲಮಾಣಿ’
- ಅರುಣ್
ಪರಶುರಾಮ ಲಮಾಣಿ ಮೂಲತಃ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಲಂಬಾಣಿ ಸಮುದಾಯದ ಮತ್ತು ಗ್ರಾಮೀಣ ಹಿನ್ನೆಲೆಯಿಂದ ಬೆಳೆದುಬಂದ ಪರಶುರಾಮ್ ರವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಣವನ್ನು ಗುಂಡೇನಹಳ್ಳಿ ಗ್ರಾಮದಲ್ಲಿ ಪೂರ್ತಿಗೊಳಿಸಿದರು.
ಚಿಕ್ಕ ವಯಸ್ಸಿನಲ್ಲಿ ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದ ಪರಶುರಾಮ್ ರವರು ಅದನ್ನೇ ಮುಂದುವರಿಸಿಕೊಂಡು ದೃಶ್ಯಕಲಾ ಮೂಲ ಎರಡು ವರ್ಷಗಳ ಕಲಿಕಾ ಅವಧಿಯನ್ನು ಧಾರವಾಡದಲ್ಲಿ ಪೂರ್ತಿಗೊಳಿಸಿ ನಂತರ ದೃಶ್ಯ ಕಲಾ ಮಹಾವಿದ್ಯಾಲಯ ದಾವಣಗೆರೆಯಲ್ಲಿ ಕಲಿಕೆಯನ್ನು ಮುಂದುವರೆಸಿ ಸ್ನಾತಕೋತ್ತರ ಪದವಿಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ದೃಶ್ಯಕಲಾ ವಿಭಾಗ ಗೊಟಗೋಡಿಯಲ್ಲಿ ಪ್ರಸ್ತುತವಾಗಿ ಕಲಿಕೆಯನ್ನು ಪೂರ್ಣಗೊಳಿಸಿದ್ದಾರೆ.
ಇವರ ಮುಂದಿನ ಹಂತದ ಬೆಳವಣಿಗೆಗೆ ಸರ್ಕಾರದಿಂದ ಹಾಗೂ ಇಲಾಖೆಯ ವತಿಯಿಂದ ಸಹಕಾರ ಮತ್ತು ಪ್ರೋತ್ಸಾಹ ದೊರಕಿದ್ದೇ ಆದಲ್ಲಿ ಚಿತ್ರಕಲಾ ಮಾಧ್ಯಮದಲ್ಲಿ ಮತ್ತಷ್ಟು ಮಗದಷ್ಟು ಸಾಧನೆಯನ್ನು ಮಾಡುವ ಆಶಯ ಪರಶುರಾಮ ರವರದ್ದಾಗಿದೆ.
ಕಲಾಕೃತಿಗಳು
ಪರಶುರಾಮ್ ರವರು ಹೆಚ್ಚು ಆಸಕ್ತಿಯಿಂದ ರಚಿಸುವ ಕಲಾಕೃತಿಗಳಲ್ಲಿ ಭಾವ ಚಿತ್ರಗಳು. ಲಂಬಾಣಿ ಸೊಗಡನ್ನು ಬಿಂಬಿಸುವ ಚಿತ್ರಗಳು. ಜಲವರ್ಣ ಕಲೆ. ದೃಶ್ಯಕಲಾ ಜನಪದ. ಹಸೆ ಚಿತ್ರಕಲೆ. ಇನ್ನು ಮುಂತಾದ ಚಿತ್ರಕಲಾ ವಿಭಾಗದಲ್ಲಿ ವಿಷಯಗಳನ್ನು ಆಯ್ದುಕೊಂಡು ಅದರಲ್ಲಿ ತಮ್ಮ ಕೈಚಳಕವನ್ನು ತೋರಿಸುತ್ತಾ ಅತಿಸುಂದರವಾಗಿ ಬಿಂಬಿಸುವ ಕಲೆ ಪರಶುರಾಮ ಅವರದ್ದು.
ಭಾಗವಹಿಸಿದ ಸ್ಪರ್ಧಾ ವೇದಿಕೆಗಳು
ಸೋಲೋ ಶೋ
- ಪಿಕಾಕ್ ಆರ್ಟ್ ಗ್ಯಾಲರಿ ಮಿರಾಜ್ ( ಎಂಎಸ್)
ಗ್ರೂಪ್ ಶೋ
- 2014- ಧಾರವಾಡ ಜಿಲ್ಲಾ ಉತ್ಸವ ಧಾರವಾಡ.
- 2015- ಗೋರ್ಮೆಂಟ್ ಆರ್ಟ್ ಗ್ಯಾಲರಿ ಧಾರವಾಡ.
- 16-17 ಚಿತ್ರೋತ್ಸವ ಯುನಿವರ್ಸಿಟಿ ಕಾಲೇಜ್ ಆಫ್ ವಿಜುವಲ್ ಆರ್ಟ್ ದಾವಣಗೆರೆ.
- 2019- ಕಲಾ ಪಯಣ-01 ಆರ್ಟ್ ಗ್ಯಾಲರಿ ಧಾರವಾಡ.
- 2020 -ಕರ್ನಾಟಕ ಕಲಾ ವೈಭವ ರಾಣೇಬೆನ್ನೂರು.
- 2013-14 ಚಿತ್ರಕಲಾ ಸಂತೆ ಕರ್ನಾಟಕ ಚಿತ್ರಕಲಾ ಪರಿಷತ್ ಬೆಂಗಳೂರು.
- 2014- ಶಿರಸನಗಿ ಕಲಿಕಾ ದೇವಿ ಮಹೋತ್ಸವ ಆರ್ಟ್ ಪ್ರದರ್ಶನ ಶಿರಸನಗಿ.
- 2016- ಮೈಸೂರು ದಸರಾ ಆರ್ಟ್ ಪ್ರದರ್ಶನ ಮೈಸೂರು.
- 2017 – 46th ಅನುವಲ್ ಆರ್ಟ್ ಪ್ರದರ್ಶನ ಮಂಡ್ಯ ಆಯೋಜಿಸಿದವರು ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು.
- 2018- ಟ್ರೆಡಿಷನಲ್ ಪೇಂಟಿಂಗ್ ಕಾಂಪಿಟೇಶನ್ ಬೆಂಗಳೂರು GAFX-2018.
ವರ್ಕ್ ಶಾಪ್ಸ್
- 2016 – ಹಸೆ ಚಿತ್ತಾರ ಕಲಾ ಕಮ್ಮಟ ಆಯೋಜಿಸಿದವರು ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು.
- 2017 – ನಿಪಾತ್ಯ ಕಲಾ ಕಮ್ಮಟ ಆಯೋಜಿಸಿದವರು ಕರ್ನಾಟಕ. ಲಲಿತಕಲಾ ಅಕಾಡೆಮಿ ಬೆಂಗಳೂರು.
- 2019- ಅಂಬಾಮತ ಆರ್ಟ್ ಕ್ಯಾಂಪ್ ಆಯೋಜಿಸಿದವರು ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು.
ಶಿಬಿರಗಳು
- 2013- ಆರ್ಟಿಸ್ಟ್ ಕ್ಯಾಂಪ ಕರ್ನಾಟಕ ಯುನಿವರ್ಸಿಟಿ ಧಾರವಾಡ.
- 2016 – ಬಯಲುಸೀಮೆ ಆರ್ಟಿಸ್ಟ್ ಕ್ಯಾಂಪ್ ಆಯೋಜಿಸಿದವರು ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು.
- 2020 – ಕರ್ನಾಟಕ ಕಲಾ ವೈಭವ ಆರ್ಟ್ ಕ್ಯಾಂಪ್ ಆಯೋಜಿಸಿದವರು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ.
ಲಭಿಸಿರುವ ಪ್ರಶಸ್ತಿ
- ಪ್ರಜಾವಾಣಿ ಯುವ ಸಾಧಕರ ಪ್ರಶಸ್ತಿ 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.
http://Visit : www.suddidina.com
3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?
ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.
ಉದಾಹರಣೆ:
ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.
ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!
ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.
ಖಾತೆದಾರರು ಏನು ಮಾಡಬೇಕು?
1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.
2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.
3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.




