ದಿನದ ಸುದ್ದಿ

ಭೈರುಂಬೆಯ ಕಿರಣ ಭಟ್‌ಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ

Published

on

ಸುದ್ದಿದಿನ ಡೆಸ್ಕ್ : ಆರ್ಯಭಟ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಕೊಡಲ್ಪಡುವ 2020-22 ನೇ ಸಾಲಿನ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆ, ಶಿರಸಿ ತಾಲೂಕಿನ ಭೈರುಂಭೆ ಗ್ರಾಮದ ಕಿರಣ ಭಟ್ ಭಾಜನರಾಗಿದ್ದಾರೆ.

ಗ್ರಾಮೀಣ ಭಾಗದಲ್ಲಿ ಇವರ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಇವರು ವೃತ್ತಿಯಲ್ಲಿ ವಿದ್ಯುತ್ ಗುತ್ತಿಗೆದಾರರಾಗಿದ್ದು ಭೈರುಂಭೆ ಪಂಚಾಯತದ ಹಾಲಿ ಸದಸ್ಯರಾಗಿರುತ್ತಾರೆ.

ಇವರು ಭೈರುಂಭೆಯ ರವೀಂದ್ರ ಭಟ್ ಹಾಗೂ ಉಷಾ ಭಟ್ ರವರ ಪುತ್ರರಾಗಿರುತ್ತಾರೆ. ಈ ಪ್ರಶಸ್ತಿಯನ್ನು ಮೇ 25, 2022 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಧಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಡಾ|| ಎಚ್.ಎಲ್.ಎನ್. ರಾವ್ ತಿಳಿಸಿದ್ದಾರೆ. ಪ್ರಶಸ್ತಿಯನ್ನು ಹೈಕೋರ್ಟ ನ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ ಮತ್ತು ಮಹೇಶ ಜೋಶಿ, ಪ್ರಧಾನ ಮಾಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version