ದಿನದ ಸುದ್ದಿ
ಕನಸು ಮಾರಾಟ ಮಾಡಿ ಲಾಭ ಮಾಡಿಕೊಳ್ಳಲು ಡಿಜಿಟಲ್ ಮಾಧ್ಯಮ ಅತ್ಯುತ್ತಮ ವೇದಿಕೆ : ಈಗಲ್ಸ್ ಫೋರ್ಡ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಆರ್ಯನ್ ಕುಂದರ್
ಸುದ್ದಿದಿನ,ದಾವಣಗೆರೆ : ಇದು ಕನಸನ್ನು ಮಾರಾಟ ಮಾಡುವ ಕಾಲ. ನಿಮ್ಮ ಕನಸನ್ನು ಮಾರಾಟ ಮಾಡಿ ಲಾಭ ಮಾಡಿಕೊಳ್ಳಲು ಡಿಜಿಟಲ್ ಮಾಧ್ಯಮ ಅತ್ಯುತ್ತಮ ವೇದಿಕೆಯಾಗಿದೆ. ಪತ್ರಿಕೋದ್ಯಮ ವಿದ್ಯಾರ್ಥಿಗಳು ಮಾಧ್ಯಮಕ್ಷೇತ್ರದ ಲಾಭ ಪಡೆಯಲು ಮುಂದಾಗಬೇಕು ಎಂದು ಈಗಲ್ಸ್ ಫೋರ್ಡ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಆರ್ಯನ್‍ಕುಂದರ್ ಸಲಹೆ ನೀಡಿದರು.
ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ವತಿಯಿಂದ ಶುಕ್ರವಾರ ಡಿಜಿಟಲ್ ಮಾಧ್ಯಮ ವೇದಿಕೆ ಮತ್ತು ಮಾರುಕಟ್ಟೆ ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತನ್ನಲ್ಲಿರುವಕಲ್ಪನೆ, ಆಲೋಚನೆ, ಕನಸುಗಳನ್ನು ಹಂಚಿಕೊಂಡು ತಂತ್ರಜ್ಞಾನದ ಕೌಶಲದ ಮೂಲಕ ಆರ್ಥಿಕವಾಗಿ ಭದ್ರನಾಗುತ್ತಿದ್ದಾನೆ. ಅದಕ್ಕೆ ಡಿಜಿಟಲ್ ವೇದಿಕೆ ಉತ್ತಮ ಬುನಾದಿಯಾಗಿದೆ ಎಂದರು.
ಮಾಧ್ಯಮಕ್ಷೇತ್ರ ಸಾಕಷ್ಟು ವಿಸ್ತಾರವಾಗಿದೆ. ಪ್ರಸ್ತುತ ಮಾರುಕಟ್ಟೆ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಪತ್ರಕರ್ತನಾಗಿದ್ದಾನೆ. ಹಾಗೆಯೇ ವ್ಯಾಪಾರಿಯೂ ಆಗಿದ್ದಾನೆ. ವೃತ್ತಿ ಕೌಶಲಗಳನ್ನು ರೂಢಿಸಿಕೊಂಡು ಡಿಜಿಟಲ್ ಹಾಗೂ ಸ್ಯಾಟ್‍ಲೈಟ್ ವೇದಿಕೆಗಳಲ್ಲಿರುವ ಅವಕಾಶ ಸದ್ಬಳಕೆ ಮಾಡಿಕೊಂಡರೆ ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.
ಬದಲಾಗುತ್ತಿರುವ ಮಾಧ್ಯಮಕ್ಷೇತ್ರದ ವ್ಯವಸ್ಥೆಗೆ ತಕ್ಕಂತೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ವೃತ್ತಿಪರತೆಯನ್ನು ರೂಢಿಸಿಕೊಳ್ಳಬೇಕು.ತಂತ್ರಜ್ಞಾನ, ಆವಿಷ್ಕಾರ, ಸಂಶೋಧನೆಗಳ ಜೊತೆಗೆ ತಮ್ಮಲ್ಲಿರುವ ಸಾಮಥ್ರ್ಯ ಹಾಗೂ ಕೌಶಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಬೌದ್ಧಿಕ ವಿಚಾರಗಳನ್ನು ವ್ಯಾಪಾರ ಮಾಡಿ ಆದಾಯ ಗಳಿಸುವ ಮಾರ್ಗಗಳನ್ನು ಕಂಡುಕೊಳ್ಳಬೇಕು.ಆ ನಿಟ್ಟಿನಲ್ಲಿ ಯೋಚನೆ ಮಾಡಿದಾಗ ಮಾತ್ರ ಆರ್ಥಿಕವಾಗಿ ಸಬಲತೆ ಪಡೆಯಲು ಸಾಧ್ಯ ಎಂದು ನುಡಿದರು.
ಇದನ್ನೂ | ದಾವಣಗೆರೆ | ವಯೋಶ್ರೇಷ್ಟ ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಾಧ್ಯಮಕ್ಷೇತ್ರದಲ್ಲಿ ಹಿಂದೆ ಜನಪರ ಸೇವೆಗೆ ಮಾತ್ರ ಬೆಲೆ ಇತ್ತು. ಆದರೆ ಈಗಿನ ಬದಲಾದ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಬದುಕನ್ನೂ ಕಟ್ಟಿಕೊಳ್ಳಬೇಕು.ಅದಕ್ಕಾಗಿ ಯಾವುದೇ ಒಂದು ಸಂಸ್ಥೆ ಮೇಲೆ ಅವಲಂಬಿತರಾಗದೆ ಲಭ್ಯವಿರುವ ಇನ್ನಿತರ ಅವಕಾಶಗಳತ್ತ ಗಮನ ಹರಿಸಬೇಕು. ಬಂಡವಾಳ ಹೂಡದೇ ಲಾಭ ಗಳಿಸುವ ಹಲವಾರು ಅವಕಾಶಗಳು ಡಿಜಿಟಲ್ ಮಾಧ್ಯಮಕ್ಷೇತ್ರದಲ್ಲಿ ತೆರೆದುಕೊಂಡಿದ್ದು, ಅವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
‘ನಿಮ್ಮ ಸುತ್ತ ಮುತ್ತ ನಡೆಯುವ ಘಟನೆ, ವಿಶೇಷಗಳನ್ನೇ ಆಯ್ದುಕೊಂಡು, ಅದಕ್ಕೊಂದು ರೂಪಕೊಟ್ಟು, ಕ್ಯಾಮೆರಾದಲ್ಲಿ ಸೆರೆ ಹಿಡಿದು ತಂತ್ರಜ್ಞಾನದ ಮೂಲಕ ಮಾರುಕಟ್ಟೆಗೆ ಬಿಟ್ಟರೆ ಅದೇ ಉತ್ಪನ್ನವಾಗಿ ಮಾರಾಟವಾಗುತ್ತದೆ. ಇಲ್ಲಿ ನೋಡುಗರಿಂದಲೇ ವ್ಯಾಪಾರ ಕುದುರುತ್ತದೆ. ಅದಕ್ಕೆ ಮಾರಾಟದ ಕಲೆ ಅತ್ಯವಶ್ಯವಾಗಿದೆ ಎಂದು ಹೇಳಿದರು.
ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಡಾ.ಶಿವಕುಮಾರ ಕಣಸೋಗಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ತಂತ್ರಜ್ಞಾನದ ಆವಿಷ್ಕಾರಗಳು ಅವಕಾಶದ, ಆರ್ಥಿಕತೆಯ ಅವಕಾಶಗಳನ್ನು ಬಿಚ್ಚಿಟ್ಟುಕೊಂಡಿದೆ. ಯಾರು ಯಾವರೀತಿ, ಹೇಗೆ ಅದನ್ನು ಉಪಯೋಗಿಸಿಕೊಂಡು ಲಾಭ ಗಳಿಸುತ್ತಾರೆ ಎಂಬುದರ ಮೇಲೆ ಅವರ ಭವಿಷ್ಯ ನಿಂತಿದೆ. ಇದೊಂದು ಮಾಧ್ಯಮ ಬಜಾರ್ ಇಲ್ಲಿ ತಂತ್ರಜ್ಞಾನ, ಕೌಶಲ ಹಾಗೂ ಕನಸುಗಳಿಗೆ ಬೆಲೆ ಹೆಚ್ಚು ಎಂದು ಹೇಳಿದರು.
ಸಹಾಯಕ ಪ್ರಾಧ್ಯಾಪಕಿ ಡಾ.ಚಂದ್ರಲೇಖಾಜೆ.ಎಸ್, ಬೋಧಕ ಸಹಾಯಕರಾದ ಲಾವಣ್ಯ, ವೆಂಕಟೇಶ್, ಗಂಗಾಧರ್ ಉಪಸ್ಥಿತರಿದ್ದರು.ಸಹಾಯಕ ಪ್ರಾಧ್ಯಾಪಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

