ದಿನದ ಸುದ್ದಿ
ಮುಖ್ಯ ಮಾಹಿತಿ ಆಯುಕ್ತರಾಗಿ ಎನ್ ಸಿ ಶ್ರೀನಿವಾಸ ಪ್ರಮಾಣ ವಚನ
ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಕಾನೂನು ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಎನ್ ಸಿ ಶ್ರೀನಿವಾಸ್ ಅವರು ಕರ್ನಾಟಕ ಮಾಹಿತಿ ಅಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಶ್ರೀನಿವಾಸ್ ಅವರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಎಸ್ ಎಂ ಸೋಮಶೇಖರ ಮತ್ತು ಕೆ ಪಿ ಮಂಜುನಾಥ ಅವರು ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243