ದಿನದ ಸುದ್ದಿ
ಅಸಾನಿ ಚಂಡಮಾರುತ ; ಕರ್ನಾಟಕದ 27 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಸುದ್ದಿದಿನ ಡೆಸ್ಕ್ : ಕುಸಿತದಿಂದಾಗಿ ಅಸಾನಿ ಚಂಡಮಾರುತ ರೂಪುಗೊಂಡಿದ್ದು, ಪಶ್ಚಿಮ ಬಂಗಾಳದ ದಕ್ಷಿಣ ಕರಾವಳಿ, ಒಡಿಶಾ ಮತ್ತು ಆಂಧ್ರಪ್ರದೇಶದ ಉತ್ತರ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಭಾರೀ ವರ್ಷಧಾರೆ ನಿರೀಕ್ಷಿಸಿದ್ದು, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಹೊರತುಪಡಿಸಿ 27 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243