ದಿನದ ಸುದ್ದಿ
ಆಶಾ ಕಾರ್ಯಕರ್ತೆಯರಿಗೆ ಸಚಿವರಿಂದ ಚೆಕ್ ವಿತರಣೆ
ಸುದ್ದಿದಿನ,ಹಾಸನ: ಜೀವದ ಹಂಗು ತೊರೆದು ಕುಟುಂಬವನ್ನು ಲೆಕ್ಕಿಸದೇ ಹಗಲಿರುಳು ಕೆಲಸ ಮಾಡುತ್ತಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ ರವರು ಮಂಗಳವಾರ ಅಭಿನಂದಿಸಿದರು.
ಚನ್ನರಾಯಪಟ್ಟಣ ತಾಲ್ಲೂಕಿನ ಶ್ರೀನಿವಾಸಪುರದಲ್ಲಿಂದು ಕೊವಿಡ್-19 ವೈರಸ್ ಹರಡುವಿಕೆಯನ್ನು ನಿಯಂತ್ರಣಕ್ಕೆ ತರಲು ಹಗಲಿರುಳೆನ್ನದೆ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್‍ಗಳಾದ ಸುಮಾರು 150 ಆಶಾ ಕಾರ್ಯಕರ್ತೆಯರಿಗೆ ಹೇಮಾವತಿ ಸಕ್ಕರೆ ಕಾರ್ಖಾನೆಯಿಂದ ನೀಡಲಾಗಿದ್ದ 3,000 ರೂ ಮೊತ್ತದ ಗೌರವ ಧನದ ಚೆಕ್‍ಗಳನ್ನೂ ಅವರು ವಿತರಿಸಿದರು.
ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಮತ್ತು ಎಲ್ಲಾ ರೀತಿಯ ಆಡಳಿತಾಧಿಕಾರಿಗಳು ಉತ್ತಮ ಸಹಕಾರ ನೀಡಿ ಸಾಕಷ್ಟು ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಅಭಿನಂದಿಸಿದರು.
ಜಿಲ್ಲೆಯ ಹೆಮ್ಮೆಯ ಪೊಲೀಸ್ ಅಧಿಕಾರಿ ಕಿರಣ್ ಕುಮಾರ್ ಅವರ ಗೌರವಾರ್ಥವಾಗಿ ಮೌನಾಚರಣೆ ಮಾಡಲಾಯಿತು. ಈ ಪ್ರಕರಣದಲ್ಲಿ ಯಾವುದೇ ಪಕ್ಷಬೇಧವಿಲ್ಲದೆ ನಿಷ್ಪಕ್ಷಪಾತವಾದ ತನಿಖೆ ಮಾಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನಿಡಲಾಗಿದೆ ಎಂದು ಸಚಿವರಾದ ಕೆ. ಗೋಪಾಲಯ್ಯ ಅವರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಸಿ.ಎನ್. ಬಾಲಕೃಷ್ಣ, ಜಿಲ್ಲಾಧಿಕಾರಿ ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ. ಪರಮೇಶ್, ಉಪವಿಭಾಗಾಧಿಕಾರಿ ಡಾ. ನವೀನ್ ಭಟ್, ಸಚಿವರ ಆಪ್ತ ಕಾರ್ಯದರ್ಶಿ ಕಾಂತರಾಜ್ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243