ಸಿನಿ ಸುದ್ದಿ

ಅಶ್ವಿನಿ ಪುನೀತ್ ರಾಜ್‍ಕುಮಾರ್ ತಂದೆ ಹೃದಯಾಘಾತದಿಂದ ನಿಧನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು: ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರ ತಂದೆ ರೇವನಾಥ್ (78) ಹೃದಯಾಘಾತದಿಂದ ಭಾನುವಾರ ಮೃತಪಟ್ಟಿದ್ದಾರೆ.

ರೇವನಾಥ್ ಅವರು ಪುನೀತ್ ರಾಜ್‍ಕುಮಾರ್ ಅವರ ನಿಧನ ನಂತರ ತುಂಬಾ ಒತ್ತಡಕ್ಕೆ ಒಳಗಾಗಿದ್ದರು. ಭಾನುವಾರ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಹೃದರ್ಯಾಘಾತದಿಂದ ಸಾವನ್ನಪಿದ್ದಾರೆ.

ಚಿಕ್ಕಮಗಳೂರು ಮೂಲದ ಅಶ್ವಿನಿ ತಂದೆ, ಹಲವು ವರ್ಷಗಳಿಂದ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದರು. ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.

ರೇವನಾಥ್ ಅವರು ಪುನೀತ್ ಸಾವಿನ ಬಳಿಕ ತಮ್ಮ ಪತ್ನಿಯೊಂದಿಗೆ ಮಗಳು ಅಶ್ವಿನಿ ಜತೆ ಸದಾಶಿವನಗರದ ನಿವಾಸದಲ್ಲಿದಲ್ಲೇ ವಾಸವಿದ್ದರು. ಆರೋಗ್ಯವಾಗಿಯೇ ಇದ್ದ ರೇವನಾಥ್ ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version