ಕ್ರೀಡೆ

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್: ಭಾರತದ ಚಿರಾಗ್ ಮತ್ತು ಸಾತ್ವಿಕ್ ಜೋಡಿಗೆ ಸ್ವರ್ಣ ಪದಕ

Published

on

ಸುದ್ದಿದಿನ, ದುಬೈ : ದುಬೈನಲ್ಲಿ ನಡೆದ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ನಿನ್ನೆ ನಡೆದ ಫೈನಲ್ ಪಂದ್ಯದಲ್ಲಿ 8ನೇ ಶ್ರೇಯಾಂಕಿತ ಮಲೇಷ್ಯಾದ ಟಿಯೊ ಇ ಯಿ ಮತ್ತು ಒಂಗ್ ಯೆವ್ ಸಿನ್ ವಿರುದ್ಧ 16-21,21-17ಮತ್ತು 21-19 ಗೇಮ್ ಗಳ ಅಂತರದಿಂದ ಗೆದ್ದು ಇತಿಹಾಸ ನಿರ್ಮಿಸಿದೆ.1965ರಲ್ಲಿ ದಿನೇಶ್ ಖನ್ನಾ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚಿನ್ನ ಗೆದ್ದ ನಂತರ ಭಾರತಕ್ಕೆ ಒಲಿದ ಮೊದಲ ಸ್ವರ್ಣ ಪದಕ ಇದಾಗಿದೆ.

ಭಾರತ ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿರುವ ಚಿರಾಗ್ ಮತ್ತು ಸಾತ್ವಿಕ್ ಜೋಡಿಗೆ ಪ್ರಧಾನಿ ನರೇಂದ್ರ ಮೋದಿ, ಕ್ರೀಡಾ ಸಚಿವ ಹಾಗೂ ಭಾರತ ಬ್ಯಾಡ್ಮಿಂಟನ್ ಸಂಸ್ಥೆ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ನಲ್ಲಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಪುರುಷರ ಡಬಲ್ಸ್ ಜೋಡಿಯಾಗಿರುವ ಸಾತ್ವಿಕ್‌ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿಗೆ ಅಭಿನಂದನೆಗಳು ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version