ದಿನದ ಸುದ್ದಿ
ಶತಾವರಿ ಗಿಡಮೂಲಿಕೆಗಳ ರಾಣಿ
ಬೇರು ಶತಾವರಿಯು ಆಯುರ್ವೇದದ ಒಂದು ಬಹುಮುಖ್ಯ ಗಿಡಮೂಲಿಕೆಯಾಗಿದೆ. ಆಯುರ್ವೇದದಲ್ಲಿ ಶತಾವರಿಯ ಔಷಧಿ ಗುಣಗಳ ಬಗ್ಗೆ ವಿವರಿಸಲಾಗಿದೆ.
ಇದನ್ನು ಆಯುರ್ವೇದದಲ್ಲಿ ವಿವಿಧ ಔಷಧಿ ಮತ್ತು ಸೌಂದರ್ಯವರ್ಧಕಗಳ ಉತ್ಪನ್ನಗಳ ತಯಾರಿಕೆಯಲ್ಲಿ ಉಪ ಯೋಗಿಸಲಾಗುತ್ತದೆ. ಈ ಗಿಡ ಮೂಲಿಕೆಯು ನಮ್ಮ ಶರೀರವನ್ನು ಪೋಷಿಸುತ್ತದೆ. ಸಂತಾನೋತ್ಪತ್ತಿ ಅಂಗಗಳನ್ನು ಪುನಶ್ವೇತನಗೊಳಿಸುತ್ತದೆ. ಸ್ತ್ರೀ ಹಾರ್ಮೋನು ವ್ಯವಸ್ಥೆಗಳನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಬಾಣಂತಿಯರಲ್ಲಿ ಎದೆ ಹಾಲು ಹೆಚ್ಚುವುದರಲ್ಲಿ ಸಹಾಯವಾಗು ವುದರಿಂದ ಇದಕ್ಕೆ ಮಕ್ಕಳ ತಾಯಿ ಬೇರು ಎನ್ನುವರು.
ಸ್ತ್ರೀಯರ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸುವಲ್ಲಿ ಹೆಚ್ಚು ಉಪಯುಕ್ತವಾಗುವುದರಿಂದ ಇದಕ್ಕೆ ಸ್ತ್ರೀಯರ ಆರೋಗ್ಯ ಟಾನಿಕ್ (Female Health Tonic) ಎನ್ನುತ್ತಾರೆ. ಆಯುರ್ವೇದದಲ್ಲಿ ಶತಾವರಿಯನ್ನು (Glutathione) ಕೆಲಸ ಆಮ್ಲಪಿತ್ತ, ಗ್ರಹಣಿ, ರಕ್ತಪಿತ್ತ, ಶುಕ್ತಕ್ಷಯ, ರಕ್ತಪ್ರದರ, ಸ್ತನ್ಯಕ್ಷಯ, ಮೂತ್ರ ವಿಕಾರ, ಆರ್ಶ, ಮಸ್ತಿಷ್ಕ ದೌರ್ಬಲ್ಯ, ಕ್ಷಯ ರೋಗ, ಶಿರೋರೋಗ, ಹೃದಯ ರೋಗ ತ್ತದೆ. ಇತ್ಯಾದಿ ರೋಗಗಳ ಚಿಕಿತ್ಸೆಯಲ್ಲಿ ಉಪಯೋಗಿಸಲಾಗುತ್ತದೆ.
ಪರ್ಯಾಯ ಹೆಸರುಗಳು
ಶತಾವರಿ: ನೂರು (ಶತ್ರ) ರೋಗಗಳನ್ನು ನಿವಾರಿಸುವ ಶಕ್ತಿ ಇದರಲ್ಲಿ ಇರುವದರಿಂದ ಇದಕ್ಕೆ ಶತಾವರಿ ಎನ್ನುವರು.
ಶತಮೂಲಿ: ನೂರು (ಶತ) ಬೇರುಗಳನ್ನು ಹೊಂದಿರುವುದರಿಂದ ಶತಮೂಲಿ ಎಂದು ಕರೆಯುವರು.
ಶತಾವರಿ ಪ್ರಯೋಜನಗಳು ;
ಬಾಹ್ಯ ಉಪಯೋಗ (External Use)
ಮುಖದ ಮೇಲಿನ ಸುಕ್ಕು (Face Wrinkles, Age lines):
ಶತಾವರಿ ಬೇರಿನ ಪಡಿಯನ್ನು ಗುಲಾಬಿ ಜಲದ ಜೊತೆ ಮಿಶ್ರಣ ಮಾಡಿ ಪೇಸ್ಟನ್ನು ಮುಖದ ಮೇಲೆ ದಿನಕ್ಕೆ ಒಂದು ಸಲ ಹಚ್ಚಿ ಹತ್ತರಿಂದ ಇಪ್ಪತ್ತು ನಿಮಿಷ ಬಿಟ್ಟು ಒಣಗಿದ ಮೇಲೆ ಮುಖವನ್ನು ನೀರಿನಿಂದ ತೊಳೆದುಕೊಳ್ಳಬೇಕು, ಶತಾವರಿ ಆಂಟಿಆಕ್ಸಿಡೆಂಟ್ ಗುಣಗಳನ್ನು ಹೊಂದಿರುವುದರಿಂದ ವಯಸ್ಸಾಗುವಿಕೆಯನ್ನು ತಡೆಗಟ್ಟುತ್ತದೆ. ಮುಖದ ಚರ್ಮದ ಮೇಲೆ ಕಾಣಿಸಿಕೊಳ್ಳುವ ಸುಕ್ಕುಗಳನ್ನು ತಡೆಯುತ್ತದೆ.
Pigmentation): ಶತಾವರಿ ಬೇರಿನ ಪುಡಿಯನ್ನು ಹಾಲಿನಲ್ಲಿ ಮಿಶ್ರಣ ಮಾಡಿ ಈ ಲೇಪವನ್ನು ಮುಖದ ಮೊಡವೆಗಳ ಮೇಲೆ ದಿನಕ್ಕೆ ಒಂದು ಸಲ ಹಚ್ಚಿ 15 ರಿಂದ 20 ನಿಮಿಷ ಬಿಟ್ಟು ಒಣಗಿದ ಮೇಲೆ ಮುಖವನ್ನು ನೀರಿನಿಂದ ತೊಳೆಯ ಬೇಕು, ಇದರಿಂದ ಮೊಡವೆಗಳು ಕಡಿಮೆಯಾಗಿ ಕಪ್ಪು ಕಲೆಗಳು ವಾಸಿಯಾಗುತ್ತದೆ ಮತ್ತು ಮುಖದ ಕಾಂತಿ ಹೆಚ್ಚಿಸುತ್ತದೆ. ಇದು ಗ್ಲುಟಾಥಿಯೋನ (Glutathione) ಕೆಲಸ ಮಾಡುತ್ತದೆ.
ಗಾಯ (Wounds): ಮೇಲೆ ಶತಾವರಿ ಪೇಸ್ಟನ್ನು ಹಚ್ಚುವುದರಿಂದ ಗಾಯ ಬೇಗನೆ ವಾಸಿಯಾಗುತ್ತದೆ.
ತುಟಿಗಳ ಕಪ್ಪು ಬಣ್ಣ (Black Lips): ತುಟಿಗಳು ಕಪ್ಪು ಬಣ್ಣಕ್ಕೆ ತಿರುಗಿದ್ದರೆ ಶತಾವರಿ ಪಡಿಗೆ ಜೇನುತುಪ್ಪವನ್ನು ಸೇರಿಸಿ ಈ ಪೇಸ್ಟ್ ಅನ್ನು ದಿನಕ್ಕೆ ಒಂದರಿಂದ ಎರಡು ಸಲ ತುಟಿಗಳಿಗೆ ಹಚ್ಚುವುದರಿಂದ ತುಟಿಗಳ ಕಪ್ಪು ಬಣ್ಣ ಕಡಿಮೆಯಾಗುತ್ತದೆ.
ತಲೆಹೊಟ್ಟು ಕೂದಲಿನ ಬೆಳವಣಿಗೆ: ಶತಾವರಿ ಪುಡಿಯನ್ನು ಆಮಲಕಿ (ನೆಲ್ಲಿಕಾಯಿ) ಪುಡಿಯೊಂದಿಗೆ ಮಿಶ್ರಣ ಮಾಡಿ ತಲೆಗೆ (Hair Pack) ಹಚ್ಚಿ ಅರ್ಧ ಗಂಟೆ ನಂತರ ತಲೆ ತೊಳೆಯು ವುದರಿಂದ ತಲೆಹೊಟ್ಟು ಕಡಿಮೆಯಾಗಿ, ಕೂದಲು ಚೆನ್ನಾಗಿ ಬೆಳೆಯುತ್ತದೆ.
ದುಗ್ದಪಾನ (Lactation): ಹತ್ತು ಗ್ರಾಂ ತಾಜಾ ಅಥವಾ ಒಣಗಿದ ಶತಾವರಿ ಬೇರಿನ ಪುಡಿಯನ್ನು 100 ಮಿಲಿ ಹಾಲಿನಲ್ಲಿ ಮಿಶ್ರಣ ಮಾಡಿ 50 ಮಿಲಿ ಬರುವವರೆಗೆ ಕುದಿಸಬೇಕು. ನಂತರ ಈ ಮಿಶ್ರಣವನ್ನು ಶೋಧಿಸಿ (ಫಿಲ್ಟರ್) ಮಾಡಿ ಇದಕ್ಕೆ ರುಚಿಗೆ ತಕ್ಕಷ್ಟು ಸಕ್ಕರೆ ಸೇರಿಸಿ ದಿನಕ್ಕೆ ಎರಡು ಸಲ ಬಾಣಂತಿಯರು ಕುಡಿಯುವುದರಿಂದ ತಾಯಿಯ ಎದೆ ಹಾಲು ಹೆಚ್ಚಾಗುತ್ತದೆ ಮತ್ತು ಮಹಿಳೆಯರ ಆರೋಗ್ಯ ಸುಧಾರಿಸುತ್ತದೆ.
ಪುನರ್ ಯೌವ್ವನ/ನವಚೈತನ್ಯ (Rejuvenation): ದಿನಾಲು ಐದರಿಂದ ಹತ್ತು ಗ್ರಾಂ ಶತಾವರಿ ಬೇರಿನ ಪುಡಿಯನ್ನು ಸಕ್ಕರೆ ಜೊತೆಗೆ ದಿನಕ್ಕೆ ಎರಡು ಸಲ ಸೇವಿಸುವುದರಿಂದ ಆಯಾಸ, ಸುಸ್ತು, ನರ ದೌರ್ಬಲ್ಯತೆಯನ್ನು ಕಡಿಮೆ ಮಾಡುತ್ತದೆ. ಶರೀರ ಚೈತನ್ಯಯುಕ್ತವಾಗುತ್ತದೆ ಮತ್ತು ಶರೀರದ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಇದು ರಸಾಯನ (ಆಂಟಿ ಆಕ್ಸಿಡೆಂಟ್) ಗುಣಗಳನ್ನು ಹೊಂದಿದೆ.
ಮೂತ್ರಕೋಶದ ಸೋಂಕು (Urinary Tract Infection): ದಿನನಿತ್ಯ 5 ಗ್ರಾಂ ಶತಾವರಿ ಬೇರಿನ ಪುಡಿಯನ್ನು ರಾತ್ರಿಯಲ್ಲಿ ಸೇವಿಸುವುದರಿಂದ ಪದೇಪದೇ ಬರುವ ಮೂತ್ರ ಕೋಶದ ಸೋಂಕು, ಉರಿಮೂತ್ರ, ಮೂತ್ರಪಿಂಡದ ಕಲ್ಲು ಕಡಿಮೆಯಾಗಲು ಸಹಾಯವಾಗುತ್ತದೆ.
ರಕ್ತಮೂತ್ರ (Haematuria): ದಿನಾಲೂ 5 ಗ್ರಾಂ ಶತಾವರಿ ಪೌಡರನ್ನು ಸಕ್ಕರೆ ಜೊತೆ ದಿನಕ್ಕೆ ಎರಡು ಸಲ ಊಟದ ನಂತರ ಸೇವಿಸುವುದರಿಂದ ಉರಿಮೂತ್ರ ಮತ್ತು ಮೂತ್ರದಲ್ಲಿ ರಕ್ತ ಬರುವಿಕೆಯನ್ನು ಕಡಿಮೆ ಮಾಡುತ್ತದೆ.
ಅಲ್ಪವೀರ್ಯ(Aligosper mia): ಶತಾವರಿ ಪೌಡರನ್ನ ಅಶ್ವಗಂಧ ಪೌಡರ್ ಮತ್ತು ಕಪಿಕಚ್ಚು ಪೌಡರ್ ಮೂರು ಸಮ ಪ್ರಮಾಣದಲ್ಲಿ ಮಿಶ್ರಣ ಮಾಡಬೇಕು, ಮೂರರಿಂದ ಐದು ಗ್ರಾಂ ಮಿಶ್ರಣದ ಪುಡಿಯನ್ನು ಒಂದು ಕಪ್ಪು ಹಾಲಿನಲ್ಲಿ ಸೇರಿಸಿ ಐದು ನಿಮಿಷ ಕುದಿಸಬೇಕು, ನಂತರ ಇದನ್ನು ಶೋಧಿಸಿ, ಕಡಿಯುವುದರಿಂದ ವೀರ್ಯ ಪ್ರಮಾಣವನ್ನು ಹೆಚ್ಚಿಸುತ್ತದೆ ಹಾಗೂ ಶರೀರದ ಶಕ್ತಿ ಸುಧಾರಿಸುತ್ತದೆ.
ಶರೀರ ತೂಕ ಹೆಚ್ಚಿಸಲು (Weigh Gain): 5 ಗ್ರಾಂ ಶತಾವರಿ ಪೌಡರನ್ನು ಬಾಳೆಹಣ್ಣಿನ ಮಿಲ್ಕ್ ಶೇಕ್ ಜೊತೆ ಎರಡು ಸಲ ಸೇವಿಸುವುದರಿಂದ ಶರೀರ ತೂಕ ಹೆಚ್ಚಾಗುತ್ತದೆ. ದುರ್ಬಲ ಮತ್ತು ತುಂಬಾ ತೆಳ್ಳನೆ ವ್ಯಕ್ತಿಗಳಿಗೆ ಇದು ಒಳ್ಳೆಯ ಆರೋಗ್ಯ ಟಾನಿಕ್ ಆಗಿದೆ.
ಸ್ತ್ರೀ ಸಂತಾನೋತ್ಪತ್ತಿ ವ್ಯವಸ್ಥೆ (Female Reproductive System): 5 ಗ್ರಾಂ ಶತಾವರಿ ಪೌಡರ್ ಅನ್ನು ನಿಯಮಿತವಾಗಿ ದಿನಕ್ಕೆ ಎರಡು ಸಲ ಸೇವಿಸುವುದರಿಂದ ಮಹಿಳೆಯರಲ್ಲಿ ಕಂಡುಬರುವ ಪಾಲಿಸಿಸಕ್ ಓವರಿನ ಸಿಂಡೋಮ್ (DCOS) ಕಡಿಮೆಯಾಗಲು ಸಹಾಯವಾಗುತ್ತದೆ. ಸ್ತ್ರೀ ಹಾರ್ಮೋನುಗಳನ್ನು ಸವ ತೋಲನದಲ್ಲಿಡುತ್ತದೆ. ಋತುಚಕ್ರದ ಸಮಸ್ಯೆಯನ್ನು ನಿವಾರಿಸುತ್ತದೆ. ಅಂಡೋತ್ಪತ್ತಿ ಚಕ್ರವನ್ನು ಸುಧಾರಿಸುತ್ತದೆ. ಸ್ತ್ರೀಯರಲ್ಲಿ ಗರ್ಭಧಾರಣೆಯ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ. ಮಹಿಳೆಯರಲ್ಲಿ ಮುಟ್ಟುನಿಲ್ಲುವ ಸಮಯದಲ್ಲಿ ಉಂಟಾಗುವ ಸಮಸ್ಯೆಗಳನ್ನು (Menopausal Problems) ಕಡಿಮೆ ಮಾಡಲು ಸಹಾಯವಾಗುತ್ತದೆ.
ಶತಾವರಿಯ ಔಷಧಿ ಗುಣಗಳು:
ಆಂಟಿಆಕ್ಸಿಡೆಂಟ್ (Antioxident), ಆಂಟಿ ಇನ್ಫ್ಲೆಮೆಟರಿ (Antiin flammatary), ಸೂಕ್ಷ್ಮಾಣು ನಾಶಕ (Antimicrobial). ಆಂಟಿ ಕ್ಯಾನ್ಸರ್ (Anticancer) ಈ ಗುಣಗಳನ್ನು ಹೊಂದಿದೆ.
ಶತಾವರಿಯ ಪೋಷಣೆ ಸಂಯೋಜನೆ (Nutritional Composition): Calcium. Magnesium, Potassium. Copper. Zinc. Vit A., Vit C., Cobalt, Selenium, ಶತಾವರಿ ಬೇರನ್ನು ಬಳಸುವ ಮೊದಲು ಆಯುರ್ವೆದ ವೈದ್ಯ/ ತಜ್ಞರನ್ನು ಸಂಪರ್ಕಿಸಿ ಅವರ ಸಲಹೆ ಪಡೆದುಕೊಂಡು ಇದನ್ನು ಉಪಯೋಗಿಸಬೇಕು.
Shatavari Queen of Herbs
Kannada Name: ಮಜ್ಜಿಗೆ ಗಡ್ಡೆ, ಮಕ್ಕಳ ತಾಯಿಬೇರು
Sanskrit Name: ಶತಾವರಿ
English Name: Asparagus
Botanical Name: Aspara- gus Recemousus (ಬರಹ : ಡಾ. ಸ್ವಾತಿ ಸುರೇಶ್, ಕುಂಬಾರ
ಆಯುರ್ವೇದ ವೈದ್ಯರು, ಬೆಂಗಳೂರು) ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ಮುಂದೆ ಮತ್ತಷ್ಟು ಸುಲಭ: ‘ಸಕಾಲ’ ಸೇವೆಗೆ ಭೌತಿಕ ಆರ್ಟಿಐ ಅರ್ಜಿಗಳ ಸೇರ್ಪಡೆ, ಗ್ರಾಮ ಒನ್ನಲ್ಲೂ ಲಭ್ಯ
ಸುದ್ದಿದಿನ,ಬೆಂಗಳೂರು: ನಾಗರಿಕರಿಗೆ ಮಾಹಿತಿ ಹಕ್ಕು (ಆರ್ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ ಎರಡು ಪ್ರಮುಖ ಹಾಗೂ ನೂತನ ನಿರ್ಧಾರಗಳನ್ನು ಕೈಗೊಂಡಿದೆ.
ಭೌತಿಕ ಆರ್ಟಿಐ ಅರ್ಜಿಗಳ ದಾಖಲಾತಿ ಈಗ ‘ಸಕಾಲ’ ಸೇವೆ
ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಭೌತಿಕ (ಕಾಗದದ ರೂಪದ) ಆರ್ಟಿಐ ಅರ್ಜಿಗಳನ್ನು ಸ್ವೀಕರಿಸಿದ ಸಾರ್ವಜನಿಕ ಪ್ರಾಧಿಕಾರವು 2 ದಿನಗಳ ಒಳಗಾಗಿ ಆರ್ಟಿಐ ಆನ್ಲೈನ್ ಪೋರ್ಟಲ್ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು.
ಇದನ್ನು ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ರ ಅಡಿಯಲ್ಲಿ ಖಾತ್ರಿ ಸೇವೆಯಾಗಿ ಅಧಿಸೂಚಿಸಲಾಗಿದೆ. ಇದರಿಂದ ಪ್ರತಿಯೊಬ್ಬ ಅರ್ಜಿದಾರರಿಗೂ ಆನ್ಲೈನ್ ನೋಂದಣಿ ಸಂಖ್ಯೆ ದೊರೆಯಲಿದ್ದು, ಅರ್ಜಿಯ ಸ್ಥಿತಿಗತಿಯನ್ನು (Status) ಯಾವಾಗ ಬೇಕಾದರೂ ಪರಿಶೀಲಿಸಬಹುದು.
ಅರ್ಜಿಗಳು ಕಳೆದುಹೋಗುವ ಅಥವಾ ನಿರ್ಲಕ್ಷ್ಯಕ್ಕೆ ಒಳಗಾಗುವ ಸಾಧ್ಯತೆ ಇರುವುದಿಲ್ಲ. ನಿಯಮಿತ ۲ ದಿನಗಳಲ್ಲಿ ಪೋರ್ಟಲ್ನಲ್ಲಿ ದಾಖಲಿಸದಿದ್ದರೆ ನಾಗರಿಕರು ಸಕಾಲ ಕಾಯ್ದೆಯಡಿ ಪರಿಹಾರ ವೆಚ್ಚ ಪಡೆಯಲು ಅರ್ಹರಾಗಿರುತ್ತಾರೆ ಹಾಗೂ ಸಂಬಂಧಪಟ್ಟ ಅಧಿಕಾರಿಯೇ ಇದಕ್ಕೆ ಹೊಣೆಗಾರರಾಗುತ್ತಾರೆ.
ಎಲ್ಲಾ ಒನ್ ಕೇಂದ್ರಗಳಲ್ಲಿ ಆನ್ಲೈನ್ ಆರ್ಟಿಐ ಸೇವೆ ಲಭ್ಯ
ಇಂಟರ್ನೆಟ್ ಅಥವಾ ಕಂಪ್ಯೂಟರ್ ಬಳಕೆ ತಿಳಿಯದ ಸಾರ್ವಜನಿಕರನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದ ಎಲ್ಲಾ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್ಲೈನ್ ಆರ್ಟಿಐ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ವಿಸ್ತರಿಸಲಾಗಿದೆ.
ನಾಗರಿಕರು ತಮ್ಮ ಸಮೀಪದ ಕೇಂದ್ರಕ್ಕೆ ತೆರಳಿ ಸಿಬ್ಬಂದಿಯ ನೆರವಿನಿಂದ ಅರ್ಜಿ ಸಲ್ಲಿಸಬಹುದು.
ನಿಗದಿತ ಆರ್ಟಿಐ ಶುಲ್ಕ ಮತ್ತು ಕೇಂದ್ರದ ನಾಮಮಾತ್ರ ಸೇವಾ ಶುಲ್ಕವನ್ನು ಪಾವತಿಸಿ, ಸ್ಥಳದಲ್ಲೇ ಆನ್ಲೈನ್ ಸ್ವೀಕೃತಿ (Acknowledgement) ಪಡೆಯಬಹುದು.
ಗ್ರಾಮ ಪಂಚಾಯಿತಿ ಮಟ್ಟದ ‘ಗ್ರಾಮ ಒನ್’ ಕೇಂದ್ರಗಳ ಮೂಲಕ ಈಗ ಹಳ್ಳಿಯ ಪ್ರತಿಯೊಬ್ಬ ನಾಗರಿಕರಿಗೂ ಆನ್ಲೈನ್ ಆರ್ಟಿಐ ಸೌಲಭ್ಯ ತಲುಪಿದೆ.
ಪ್ರಮುಖ ಪ್ರಯೋಜನಗಳು
ಏಕರೂಪದ ವೇದಿಕೆ: ಭೌತಿಕ, ಆನ್ಲೈನ್ ಅಥವಾ ಸೇವಾ ಕೇಂದ್ರಗಳ ಮೂಲಕ ಬರುವ ಎಲ್ಲಾ ಅರ್ಜಿಗಳು ಒಂದೇ ವೇದಿಕೆಯಡಿ ಬರಲಿವೆ. ಪಾರದರ್ಶಕತೆ: ಆರ್ಟಿಐ ಕಾಯ್ದೆ 2005ರ ಕಾಲಮಿತಿಗಳ ಪಾಲನೆಯನ್ನು ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು.
ಇದರಿಂದ ಮಾಹಿತಿ ಅಧಿಕಾರಿಗಳಿಂದಾಗುವ ವಿಳಂಬವನ್ನು ಶೀಘ್ರವಾಗಿ ಗುರುತಿಸಬಹುದು.
ನಾಗರಿಕರಿಗೆ ತಮ್ಮ ಅರ್ಜಿಗಳ ವಿಶ್ವಾಸಾರ್ಹ ದಾಖಲೆ ಲಭ್ಯವಾಗುತ್ತದೆ.
ಸಾರ್ವಜನಿಕರು ನೇರವಾಗಿ ಆನ್ಲೈನ್ನಲ್ಲಾಗಲಿ ಅಥವಾ ತಮ್ಮ ಸಮೀಪದ ಸೇವಾ ಕೇಂದ್ರಗಳ (ಬೆಂಗಳೂರು ಒನ್/ಕರ್ನಾಟಕ ಒನ್/ಗ್ರಾಮ ಒನ್) ಮೂಲಕವಾಗಲಿ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಗರಿಷ್ಠ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆಆರ್.ಐ.ಡಿ.ಎಲ್ ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್ಲೈನ್ ಕೌನ್ಸಿಲಿಂಗ್ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.
ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.
ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


