ದಿನದ ಸುದ್ದಿ

ನಾಳೆ ವಿಧಾನಸಭೆ ಬಜೆಟ್ ಅಧಿವೇಶನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನ ನಾಳೆ ಆರಂಭಗೊಳ್ಳಲಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ನಂತರ ಇದೇ 13ರಿಂದ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಮತ್ತು ವಂದನಾ ನಿರ್ಣಯದ ಜೊತೆಗೆ ಸದನದ ಕಾರ್ಯಕಲಾಪಗಳು ನಡೆಯಲಿವೆ; ಇದೇ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ರ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಬಜೆಟ್‌ನಲ್ಲಿ ದುಡಿಯುವ ವರ್ಗ, ರೈತರು ಮತ್ತು ಕಾರ್ಮಿಕರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version