Connect with us

ದಿನದ ಸುದ್ದಿ

ವಿಧಾನಸಭಾ ಚುನಾವಣೆ : ಅಂತಿಮ ಕಣದಲ್ಲಿರೋ ಅಭ್ಯರ್ಥಿಗಳೆಷ್ಟು ಗೊತ್ತಾ..?

Published

on

ಸುದ್ದಿದಿನ ಡೆಸ್ಕ್ : ಮುಂದಿನ ತಿಂಗಳ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಅಂತಿಮ ಕಣದಲ್ಲಿ 2 ಸಾವಿರದ 613 ಅಭ್ಯರ್ಥಿಗಳಿದ್ದಾರೆ.

ಬಿಜೆಪಿ-224, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 223 , ಜೆಡಿಎಸ್-207, ಎಎಪಿ-209, ಬಿಎಸ್‌ಪಿ-133, ಸಿಪಿಐಎಂ-4, ಜೆಡಿಯು-8, ಎನ್‌ಪಿಪಿ-2, ನೋಂದಾಯಿತ ರಾಜಕೀಯ ಪಕ್ಷ-685 ಹಾಗೂ ಪಕ್ಷೇತರಾಗಿ-918 ಅಭ್ಯರ್ಥಿಗಳು ಸೇರಿದಂತೆ ಅಂತಿಮ ಕಣದಲ್ಲಿ 2 ಸಾವಿರದ 613 ಅಭ್ಯರ್ಥಿಗಳಿದ್ದಾರೆ.

ಇವರ ಪೈಕಿ 2 ಸಾವಿರದ 427ಪುರುಷ, 184 ಮಹಿಳೆಯರು ಇತರೆ ಇಬ್ಬರು ಅಭ್ಯರ್ಥಿಗಳಿದ್ದಾರೆ ಎಂದು ಆಯೋಗದ ಮೂಲಗಳು ತಿಳಿಸಿವೆ. ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು 24 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ.

ಯಮಕನಮರಡಿ, ದೇವದುರ್ಗ, ತೀರ್ಥಹಳ್ಳಿ, ಕುಂದಾಪುರ, ಕಾಪು, ಮಂಗಳೂರು, ಭಂಟ್ವಾಳ ಮತಕ್ಷೇತ್ರಗಳಲ್ಲಿ ಅತಿ ಕಡಿಮೆ ಐವರು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಿಂದ ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ, ಮೈಸೂರು ಜಿಲ್ಲೆಯ ವರುಣ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚನ್ನಪಟ್ಟಣದಿಂದ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಸ್ಪರ್ಧೆಗಿಳಿದಿದ್ದಾರೆ.

ಉಮೇದುವಾರಿಕೆ ಹಿಂಪಡೆಯುವ ಪ್ರಕ್ರಿಯೆ ಮುಗಿದಿದ್ದು, ಕೊನೆಯ ದಿನ- 517ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 60 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 56, ಹಾವೇರಿ-60, ರಾಮನಗರ ಜಿಲ್ಲೆಯ-4 ವಿಧಾನಸಭಾ ಕ್ಷೇತ್ರಗಳಿಂದ-59, ದಾವಣಗೆರೆ-61, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಟ್ಟು 70 ಅಭ್ಯರ್ಥಿಗಳು ಕಣದಲ್ಲಿದಾರೆ.

ಸುದ್ದಿದಿನ. ಕಾಂ | ವಾಟ್ಸಾಪ್ | 9980346243

ದಿನದ ಸುದ್ದಿ

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

Published

on

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ‌ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆ‌ಎಸ್‌ಟಿ‌ಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending