ರಾಜಕೀಯ

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಕುರಿತು ನಿಮಗಿಷ್ಟು ಗೊತ್ತಿರಲೇ ಬೇಕು

Published

on

ಸುದ್ದಿದಿನ ವಿಶೇಷ: ಭಾರತೀಯ ರಾಜಕೀಯ ಕ್ಷೇತ್ರದಲ್ಲಿ ಅಜಾತ ಶತ್ರು ಎಂದು ಖ್ಯಾತಿ ಪಡೆದಿದ್ದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ನಾಲ್ಕು ದಶಗಳ ಕಾಲ ಭಾರತೀಯ ಸಂಸತ್ ಸದಸ್ಯರಾಗಿದ್ದರು.

ಲೋಕಸಭೆ, ಕೆಳಮನೆ, ಮೇಲ್ಮನೆಗೆ ಹತ್ತು ಬಾರಿ ಹಾಗೂ ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದ ಅವರು ಸ್ವಚ್ಛ ರಾಜಕೀಯದ ಪ್ರತೀಕವಾಗಿದ್ದರು.

2009 ರವರೆಗೆ ಉತ್ತರ ಪ್ರದೇಶದ ಲಖನೌದ ಸಂಸತ್ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆರೋಗ್ಯದ ಕಾರಣದಿಂದಾಗಿ ಅವರು ಹಲವು ವರ್ಷಗಳಿಂದ ಸಕ್ರಿಯ ರಾಜಕೀಯದಿಂದ ನಿವೃತ್ತರಾಗಿದ್ದರು.

1968 ರಿಂದ 1972 ರವರೆಗೂ ಅವರು ನೇತೃತ್ವ ವಹಿಸಿದ್ದ ಹಿಂದಿನ ಭಾರತೀಯ ಜನ ಸಂಘದ ಸಂಸ್ಥಾಪಕ ಸದಸ್ಯರಲ್ಲಿ ವಾಜಪೇಯಿ ಒಬ್ಬರಾಗಿದ್ದರು.

ಪ್ರಧಾನಿ ಮೊರಾರ್ಜಿ ದೇಸಾಯಿಯ ಕ್ಯಾಬಿನೆಟ್ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ವಿದೇಶಾಂಗ ಸಚಿವರಾಗಿದ್ದರು. ಜನತಾ ಸರ್ಕಾರ ಕುಸಿದುಬಿದ್ದಾಗ, ವಾಜಪೇಯಿ ಜನಸಂಘವನ್ನು 1980 ರಲ್ಲಿ ಭಾರತೀಯ ಜನತಾ ಪಕ್ಷವಾಗಿ ಪುನರ್ ರಚಿಸಿದರು.

ಕಾಂಗ್ರೆಸ್ ಪಕ್ಷದ ನಂತರ ಐದು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪಕ್ಷದ ಮೊದಲ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆ ಗಳಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ 93ನೇ ವಯಸ್ಸಿನಲ್ಲಿ ಭಾರತದ ಅತ್ಯುನ್ನತ ಗೌರವ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. 2014 ರಲ್ಲಿ ರಾಷ್ಟ್ರಪತಿ ಯವಯರು ಭಾರತದ ಅತ್ಯುನ್ನತ ನಾಗರೀಕ ಗೌರವವಾದ ಭಾರತ ರತ್ನವನ್ನು ಪ್ರಧಾನ ಮಾಡಿದರು.

ವಾಜಪೇಯಿ ಅವರ ಹುಟ್ಟುಹಬ್ಬ ಡಿಸೆಂಬರ್ 25 ರಂದು ಗುಡ್ ಗವರ್ನನ್ಸ್ ಡೇ ಎಂದು ಗುರುತಿಸಲಾಗುವುದು ಎಂದು 2014 ರಲ್ಲಿ ಮೋದಿ ಸರ್ಕಾರ ಘೋಷಿಸಿತು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version