ದಿನದ ಸುದ್ದಿ
ಗೋಧ್ರಾ ಮಸಿ ಮತ್ತಿಕೊಂಡಾಗಲೂ ಮೋದಿಯನ್ನು ಕ್ಷಮಿಸಿದ್ದ ಅಟಲ್

ಸುದ್ದಿದಿನ ಡೆಸ್ಕ್: ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಈಗಲೂ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಗುಜರಾತ್‍ನ ಗೋದ್ರಾ ಹ್ಯಾಕಾಂಡ ನಡೆದ ನಂತರ ಮೋದಿ ಅವರು ಗುಜರಾತ್‍ನ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವುದರಲ್ಲಿದ್ದರು. ಆ ಕ್ಷಣದಲ್ಲಿ ಮೋದಿ ಅವರಿಗೆ ಕ್ಷಮಾಧಾನ ನೀಡಿ ದೊಡ್ಡ ಮನಸ್ಸಿ ಮಾಡಿದ್ದು ಅಟಲ್ ಬಿಹಾರಿ ವಾಜಪೇಯಿ.
ಗೋಧ್ರಾ ಹತ್ಯಾಕಾಂಡದಿಂದ ಬಿಜೆಪಿ ಕೈಗೆ ಮೆತ್ತಿಕೊಂಡ ರಕ್ತದ ಕಲೆ ಅಳಿಸುವುದು ಹೇಗೆಂದು ಪಕ್ಷದ ದಿಗ್ಗಜರಿಗೆ ದೊಡ್ಡ ತಲೆನೋವಾಗಿತ್ತು. ಕಮಲ ಪಾಳಯಕ್ಕೆ ಒಂದು ದೊಡ್ಡ ಮಟ್ಟದ ಆಘಾತ ತಂದೊಡ್ಡಿದ್ದ ಈ ಪ್ರಕರಣವು ಮೋದಿ ಹಾಗೂ ಅಮಿತ್ ಶಾ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿತ್ತು.
ಗುಜರಾತ್ ಸರಕಾರವೇ ಹಿಂದೂ ಕಾರ್ಯಕರ್ತರ ಮೇಲೆ ಕೈ ಮಾಡಕೂಡದು ಎಂದು ಪೊಲೀಸರಿಗೆ ಸೂಚನೆ ನೀಡಿತ್ತು ಹಾಗೂ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆಸುವ ದಾಳಿಗಳಿಗೆ ಪ್ರಚೋದನೆ ನೀಡಬೇಕೆಂದು ಹೇಳಿತ್ತು ಎಂಬ ದೊಡ್ಡ ಅಪವಾದವು ಮೋದಿ ಸರಕಾರಕ್ಕೆ ಅಂಟಿಕೊಂಡಿತ್ತು.
ಮೋದಿ ಅವರೇ ಗುಜರಾತ್‍ನ ಮುಖ್ಯಮಂತ್ರಿಯಾಗಿದ್ದರಿಂದ ಪ್ರಕರಣದ ಹೊಣೆ ಹೊತ್ತು ಅವರು ರಾಜೀನಾಮೆ ಕೊಟ್ಟೇಬಿಡುತ್ತಾರೇನೋ ಎಂಬ ಆತಂಕವೂ ಆವರಿಸಿತ್ತು. ಗೋಧ್ರಾ ಹತ್ಯಾಕಾಂಡದ ಬಿಸಿ ಮುಟ್ಟುತ್ತಲೇ ಆಗ ಪ್ರಧಾನಿಯಾಗಿದ್ದ ವಾಜಪೇಯಿ ಅವರಿಂದ ಮೋದಿಗೆ ಒಂದು ಬುಲಾವ್ ಬಂತು.
ಎಲ್ ಕೆ ಆಡ್ವಾಣಿ ಅವರು ಮೋದಿ ಅವರನ್ನು ವಾಜಪೇಯಿ ಅವರ ಬಳಿ ಕರೆದುಕೊಂಡು ಹೋದರು. ಆ ದಿನ ಅಟಲ್ ಅವರು ಮೋದಿಯಿಂದ ರಾಜೀನಾಮೆ ಪಡೆಯಬೇಕೆಂದು ನಿಶ್ಚಯಿಸಿದ್ದರು. ಆಡ್ವಾಣಿ ಅವರ ಮಧ್ಯಸ್ಥಿಕೆಯಲ್ಲಿ ನಡೆದ ಒಂದು ಸಭೆಯು ಫಲಪ್ರದವಾಗಿ ಮೋದಿ ಅವರನ್ನು ಅಟಲ್ ಕ್ಷಮಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 2022ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಪ್ರಶಸ್ತಿಯು 51 ಸಾವಿರ ರೂಪಾಯಿ ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಮಿತಿ ಅನುಮೋದಿಸಿದೆ.
ಸಾಮಾನ್ಯ ದರ್ಜೆ ಭತ್ತಕ್ಕೆ ಕ್ವಿಂಟಲ್‌ಗೆ 2 ಸಾವಿರದ 40 ರೂಪಾಯಿಯಿಂದ 2ಸಾವಿರದ 183 ರೂಪಾಯಿಗೆ ಹಾಗೂ ’ಎ’ ದರ್ಜೆ ಭತ್ತಕ್ಕೆ 2 ಸಾವಿರದ 60 ರಿಂದ 2 ಸಾವಿರದ 203 ರೂಪಾಯಿಗೆ ಹೆಚ್ಚಿಸಲಾಗಿದೆ.
ರಾಗಿಗೆ ಪ್ರತಿ ಕ್ವಿಂಟಲ್‌ಗೆ 3 ಸಾವಿರದ 578 ರೂಪಾಯಿಯಿಂದ 3 ಸಾವಿರದ 846 ರೂಪಾಯಿಗೆ ಹೆಚ್ಚಿಸಲಾಗಿದೆ. ತೊಗರಿಗೆ ಪ್ರತಿ ಕ್ವಿಂಟಲ್‌ಗೆ 6 ಸಾವಿರದ 600 ರಿಂದ 7 ಸಾವಿರ ರೂಪಾಯಿಗೆ, ಹೆಸರು ಕಾಳಿಗೆ ಪ್ರತಿ ಕ್ವಿಂಟಲ್‌ಗೆ 7 ಸಾವಿರದ 755 ರಿಂದ 8 ಸಾವಿರದ 558 ರೂಪಾಯಿಗೆ, ಪ್ರತಿ ಕ್ವಿಂಟಲ್ ಉದ್ದಿಗೆ 6 ಸಾವಿರದ 600 ರಿಂದ 6 ಸಾವಿರದ 950 ರೂಪಾಯಿಗೆ ಹೆಚ್ಚಿಸಲಾಗಿದೆ.
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ 2022-23ನೇ ಸಾಲಿಗೆ 330.5 ದಶಲಕ್ಷ ಟನ್‌ನಷ್ಟು ಆಹಾರ ಧಾನ್ಯ ಉತ್ಪಾದನೆ ಅಂದಾಜಿಸಲಾಗದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ6 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ಲೈಫ್ ಸ್ಟೈಲ್4 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ6 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ6 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ6 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ