ದಿನದ ಸುದ್ದಿ

ಅತ್ತಿಬೆಲೆ ಪಟಾಕಿ ದುರಂತ : ಸಿಐಡಿ ತನಿಖೆಗೆ ಆದೇಶ

Published

on

ಸುದ್ದಿದಿನ ಡೆಸ್ಕ್ : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಯಿಂದ ನಡೆಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಮೃತರ ಕುಟುಂಬಕ್ಕೆ ತಲಾ ೫ ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಅವರು ತಿಳಿಸಿದರು. ಗೋದಾಮಿನ ಸ್ಥಳ ಬಹಳ ಕಿರಿದಾಗಿದ್ದು, ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ.

ಎಲ್ಲರೂ ತಮಿಳುನಾಡಿನ ಕೃಷ್ಣಗಿರಿ ಮತ್ತು ಧರ್ಮಪುರಿಯವರು. ಅವರಲ್ಲಿ ಬಹುತೇಕರು ಯುವಕರಾಗಿದ್ದಾರೆ. ಘಟನೆ ಕುರಿತಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಭೈರತಿ ಸುರೇಶ್, ಶಾಸಕರಾದ ಶಿವಣ್ಣ, ಎಸ್.ಟಿ.ಸೋಮಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಈ ಮಧ್ಯೆ ತಮಿಳುನಾಡು ಸರ್ಕಾರ ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version