Connect with us

ದಿನದ ಸುದ್ದಿ

ರಾಸಾಯನಿಕ ದುರಂತ ತಡೆಗೆ ಅರಿವು ಅಗತ್ಯ : ಉಪವಿಭಾಗಾಧಿಕಾರಿ ದುರ್ಗಶ್ರೀ

Published

on

ಸುದ್ದಿದಿನ,ದಾವಣಗೆರೆ : ರಾಸಾಯನಿಕ ದುರಂತಗಳು ಸಂಭವಿಸಿದಾಗ ಇದರ ತಡೆಯ ಬಗ್ಗೆ ಅರಿವಿದ್ದಲ್ಲಿ ಹೆಚ್ಚಿನ ಅನಾಹುತ ತಪ್ಪಿಸಬಹುದಾಗಿದೆ ಎಂದು ದಾವಣಗೆರೆ        (Davanagere) ಉಪವಿಭಾಗಾಧಿಕಾರಿ ದುರ್ಗಶ್ರೀ (Durgashree) ತಿಳಿಸಿದರು.

ಅವರು ಜುಲೈ 29 ರಂದು ಜಗಳೂರು ತಾಲ್ಲೂಕಿನ (Jagaluru ) ಸಂತೇಮುದ್ದಾಪುರದ ಬಳಿಯ ಗೇಲ್ ಕಂಪನಿಯ ಅವರಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಏರ್ಪಡಿಸಲಾದ ರಾಸಾಯನಿಕ ವಿಪತ್ತು ನಿರ್ವಹಣೆ ಕುರಿತ ಅಣಕು ಪ್ರದರ್ಶನದಲ್ಲಿ ವೀಕ್ಷಕರಾಗಿ ಭಾಗವಹಿಸಿ ಮಾತನಾಡಿದರು.

ರಾಸಾಯನಿಕ ದುರಂತದಿಂದ ಸಾಕಷ್ಟು ನಷ್ಟ ಉಂಟಾಗುತ್ತದೆ. ಇಂತಹ ವಿಪತ್ತು ಸಂಭವಿಸಿದಾಗ ಯಾವ ರೀತಿ ಇದನ್ನು ತಡೆಗಟ್ಟಬಹುದೆಂದು ಎಲ್ಲರೂ ತಿಳಿದಿರಬೇಕಾಗುತ್ತದೆ. ಈ ನಿಟ್ಟಿನಲ್ಲಿ ಗೇಲ್ ಇಂಡಿಯಾ ಕಂಪನಿಯವರು ಅನೇಕ ಅಣುಕು ಪ್ರದರ್ಶನದ ಮೂಲಕ ತಿಳಿಸಿದ್ದಾರೆ. ಅನಿಲ ದುರಂತದ ವೇಳೆ ಬ್ರಾಸ್ ಸಲಕರಣೆಯನ್ನು ಬಳಸಬೇಕು. ಲೋಹದ ಸಲಕರಣೆಗಳನ್ನು ಬಳಸಿದಲ್ಲಿ ಸ್ಪಾರ್ಕ್ ಬರುತ್ತದೆ, ಇಂತಹ ಅನೇಕ ವಿಷಯಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದರು.

ಈ ವೇಳೆ ಗೇಲ್ ಕಂಪನಿಯ ಜನರಲ್ ಮ್ಯಾನೇಜರ್ ಎನ್.ಎನ್.ತೋಪನ್ನವರ್ ಮಾತನಾಡಿ, ಗೇಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಕೇಂದ್ರ ಸರ್ಕಾರದ ಕಂಪನಿಯಾಗಿದ್ದು, ನೈಸರ್ಗಿಕ ಕೊಳವೆ ಮಾರ್ಗವನ್ನು ಅಳವಡಿಸಿದೆ. ಎಲ್ಲರೂ ಮುನ್ನೆಚ್ಚರಿಕೆಯಿಂದ ಅನಿಲ ಕೊಳವೆ ಮಾರ್ಗವನ್ನು ರಕ್ಷಿಸುವುದು ಅತ್ಯಂತ ಮಹತ್ವವಾಗಿದೆ. ಇದು ವಿಷಾನಿಲವಲ್ಲ, ಅತ್ಯಧಿಕ ಉರಿಯುವ ಅನಿಲವಾಗಿದೆ. ಸೋರಿಕೆ ಸಮಯದಲ್ಲಿ ಬೆಂಕಿಯನ್ನು ಆಕರ್ಷಿಸುತ್ತದೆ. ಅದಕ್ಕಾಗಿ ಕೊಳವೆ ಮಾರ್ಗದಲ್ಲಿ ಯಾವುದೇ ತರಹದ ನಿರ್ಮಾಣ ಕಾಮಗಾರಿ, ಗಿಡೆನೆಡುವ ಕೆಲಸ ಮಾಡಬಾರದು. ಈ ಮಾರ್ಗವನ್ನು ತಿಳಿದು, ತಿಳಿಯದೇ ಹಾಳು ಮಾಡುವುದು ಸಹ ಅಪರಾಧವಾಗುತ್ತದೆ. ಈ ಮಾರ್ಗವು 30 ಮೀಟರ್ ವ್ಯಾಪ್ತಿ ಹೊಂದಿದ್ದು, ಕಂಪನಿಗೆ ತಿಳಿಯದೇ ಯಾವುದೇ ಕಾಮಗಾರಿಯನ್ನು ಕೈಗೊಳ್ಳುವಂತಿಲ್ಲ ಎಂದರು.

ಇದನ್ನೂ ಓದಿ | ಭಾರತದ ಯುವಕರತ್ತ ಇಡೀ ವಿಶ್ವದ ಚಿತ್ತ : ಪ್ರಧಾನಮಂತ್ರಿ ನರೇಂದ್ರ ಮೋದಿ

ಅನಿಲ ಸೋರಿಕೆ ಸಮಯದಲ್ಲಿ ಬೀಡಿ, ಸಿಗರೇಟ್, ಸ್ಟವ್ ಒಲೆ ಇತ್ಯಾದಿಗಳನ್ನು ಸೋರುವಿಕೆ ಸ್ಥಳದಿಂದ ದೂರವಿರಬೇಕು. ಗಾಳಿಯ ವಿರುದ್ಧ ದಿಕ್ಕನತ್ತ ಓಡಬೇಕು. ಹತ್ತಿರದ ನಿವಾಸಿಗಳಿಗೆ ತಿಳಿಸುತ್ತಾ ಅನಿಲ ಪ್ರಭಾವಿತ ವ್ಯಕ್ತಿಯನ್ನು ಶುದ್ಧ ಗಾಳಿಯಿರುವ ಕಡೆ ಕರೆದುಕೊಂಡು ಹೋಗಿ ಕಣ್ಣುಗಳನ್ನು ನೀರಿನಿಂದ ತೊಳೆಯಬೇಕು ಹಾಗೂ ವೈದ್ಯರ ಸಲಹೆ ಪಡೆಯಬೇಕು. ತುರ್ತು ಸಂದರ್ಭದಲ್ಲಿ 1800118430, 15101 ಗೆ ಕರೆ ಮಾಡಬೇಕೆಂದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲಿಮನಿ ತಿಮ್ಮಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಾರಾಜ್, ಪರಿಸರ ಅಧಿಕಾರಿ ಎಂ.ಎಸ್.ಮಹೇಶ್ವರಪ್ಪ, ಹೆಚ್ಚುವರಿ ರಕ್ಷಣಾಧಿಕಾರಿ ಬಸರಗಿ, ಜಗಳೂರು ತಹಶೀಲ್ದಾರ್ ಸಂತೋಷ್, ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಾಲೋಚಕ ಜಯಣ್ಣ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ತಾರತಮ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹಣವನ್ನು ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ನೀಡುತ್ತಿದ್ದಾರೆ. ಆಂಧ್ರಕ್ಕಿಂತಲೂ ಕಡಿಮೆ ಹಣ ನಮಗೆ ನೀಡಿದ್ದಾರೆ ಎಂದು ಆರೋಪಿಸಿದರು.

ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ

Published

on

ಸುದ್ದಿದಿನಡೆಸ್ಕ್:ಮೈಸೂರು ದಸರಾ ಅಂಗವಾಗಿ ಶನಿವಾರ ವಿಜಯದಶಮಿಯಂದು ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಿದನು. ಈ ಉತ್ಸವವನ್ನು ಸಾವಿರಾರು ಜನರು ಕಣ್ಣು ತುಂಬಿಸಿಕೊಂಡಿದ್ದಾರೆ.

ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.

ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಿದನು. ಈ ಐತಿಹಾಸಿಕ ಕ್ಷಣವನ್ನು ದೇಶ- ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ಣುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದರು.

ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್‌ಕುಮಾರ್ ಪಾರ್ಕ್‌ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ‌ ಮಳೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ. ಇಂದು ಮಧ್ಯಾಹ್ನದಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ.

ಜೊತೆಗೆ ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಡುಗೋಡಿ, K.R.ಮಾರ್ಕೆಟ್, ಕಾರ್ಪೊರೇಷನ್​ ಸರ್ಕಲ್​, ಮೆಜೆಸ್ಟಿಕ್​ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಇಂದಿನಿಂದ ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಹೇಳಿದ್ದಾರೆ.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿಯೇ ಅಬ್ಬರಿಸಲಿದೆ.

ಇದೀಗ ಹವಾಮಾನ ಇಲಾಖೆ ಸೂಚನೆಯೊಂದನ್ನು ನೀಡಿದ್ದು, ಬೆಂಗಳೂರು ಜನರಿಗೆ ಎಚ್ಚರಿಕೆಯಿಂದಿರುವುದು ಒಳ್ಳೆಯದು. ವರದಿ ಪ್ರಕಾರ, ಬೆಂಗಳೂರಿನಲ್ಲಿ ಇನ್ನೂ 7 ದಿ‌ನ ಮಳೆರಾಯ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಂದಿನಿಂದ 1 ವಾರದ ವೆರೆಗೆ ಸಿಟಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending