ದಿನದ ಸುದ್ದಿ
ಅಯೋಧ್ಯೆ ವಿವಾದ | ಮಧ್ಯಸ್ಥಿಕೆ ಮೂಲಕ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್ ಆದೇಶ
ಸುದ್ದಿದಿನ ಡೆಸ್ಕ್ : ಅಯೋಧ್ಯೆ ರಾಮ ಜನ್ಮ ಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದವನ್ನ ಮಧ್ಯಸ್ಥಿಕೆ ಮೂಲಕ ಇತ್ಯರ್ಥ ಪಡಿಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯಿ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠ ಈ ಆದೇಶ ನೀಡಿದೆ. ಕೋರ್ಟ್ ಮೇಲ್ವಿಚಾರಣೆ ಹಾಗೂ ನಿಯಂತ್ರಣದಲ್ಲಿ ಮಧ್ಯಸ್ಥಿಕೆ ನಡೆಯಲಿದೆ. ಮಧ್ಯಸ್ಥಿಕೆ ಮೂಲಕ ವಿವಾದ ಬಗೆಹರಿಸುವ ಪ್ರಸ್ತಾವವನ್ನು ಮುಸ್ಲಿಂ ಸಂಘಟನೆಗಳು ಸ್ವಾಗತಿಸಿದ್ದವು. ಆದ್ರೆ ಹಿಂದೂ ಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು.
ನಿವೃತ್ತ ನ್ಯಾಯಮೂರ್ತಿ ಖಲೀಫ್ ಉಲ್ಲಾ, ಶ್ರೀ ಶ್ರೀ ರವಿಶಂಕರ್ ಹಾಗೂ ಹಿರಿಯ ವಕೀಲ ಶ್ರೀರಾಮ್ ಪಂಚು ಈ ಮಧ್ಯಸ್ಥಿಕೆಯ ನೇತೃತ್ವ ವಹಿಸಲಿದ್ದಾರೆ. ಮಧ್ಯಸ್ಥಿಕೆ ಪ್ರಕ್ರಿಯೆ ಫೈಜಾಬಾದ್ನಲ್ಲಿ ನಡೆಯಲಿದ್ದು, ಮಾಧ್ಯಮಗಳಲ್ಲಿ ಪ್ರಕ್ರಿಯೆಯನ್ನು ವರದಿ ಮಾಡುವುದಕ್ಕೆ ನಿಷೇಧವಿರಲಿದೆ ಎಂದು ಕೋರ್ಟ್ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401