ದಿನದ ಸುದ್ದಿ
ಆರು ತಿಂಗಳಲ್ಲಿ ರಾಜ್ಯದ ಪ್ರತಿಯೊಬ್ಬ ಅರ್ಹರಿಗೂ ಆಯುಷ್ಮಾನ್ ಕಾರ್ಡ್ : ಸಚಿವ ಡಾ. ಕೆ. ಸುಧಾಕರ್
ಸುದ್ದಿದಿನ, ಚಿಕ್ಕಬಳ್ಳಾಪುರ : ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಅಡಿ ಇನ್ನು 6 ತಿಂಗಳಲ್ಲಿ ರಾಜ್ಯದ ಪ್ರತಿಯೊಬ್ಬ ಅರ್ಹರಿಗೂ ಆಯುಷ್ಮಾನ್ ಕಾರ್ಡ್ ನೀಡಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಡಳಿತ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಶನಿವಾರದಿಂದ ಆರಂಭಗೊಂಡ ಎರಡು ದಿನಗಳ ಆರೋಗ್ಯ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಆಯುಷ್ಮಾನ್ ಭಾರತ್ ಯೋಜನೆ ಅಡಿ ಇಡೀ ದೇಶದಲ್ಲಿ ಸುಮಾರು 80 ಕೋಟಿ ಜನರಿಗೆ ಈ ಯೋಜನೆ ದೊರೆಯಲಿದೆ ಎಂದು ತಿಳಿಸಿದರು.
ಇತ್ತೀಚೆಗಷ್ಟೇ ರಾಜ್ಯದ 165ತಾಲ್ಲೂಕುಗಳಲ್ಲಿ ಒಂದು ವಾರ ಕಾಲ ಆರೋಗ್ಯ ಮೇಳ ಮತ್ತು ಸಪ್ತಾಹವನ್ನು ಯಶಸ್ವಿಯಾಗಿ ಪೂರೈಸಲಾಗಿದೆ. ಚಿಕ್ಕಬಳ್ಳಾಪುರದ ಆರೋಗ್ಯ ಮೇಳಕ್ಕೆ ಆನ್‌ಲೈನ್‌ನಲ್ಲೇ ಒಂದೂವರೆ ಲಕ್ಷ ನೋಂದಣಿಯಾಗಿರುವುದು ಅಚ್ಚರಿಯ ಸಂಗತಿ ಎಂದು ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243