ದಿನದ ಸುದ್ದಿ
ಕನ್ನಡಿಗರ ಬಗೆಗೆ ಮಲತಾಯಿ ಧೋರಣೆ ಅನುಸರಿಸುವ ಸರ್ಕಾರ ಬೇಕೇ? : ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಕಿಡಿ
ಸುದ್ದಿದಿನ ಡೆಸ್ಕ್ : ಮಹದಾಯಿ ನದಿ ನೀರನಲ್ಲಿ ಕನ್ನಡಿಗರಿಗೆ ನ್ಯಾಯಯುತವಾಗಿ ಸಿಗಬೇಕಾಗಿದ್ದ ಪಾಲನ್ನು ಸಿಗುವಂತೆ ಮಾಡಲು ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ.
ಈ ಸಮಸ್ಯೆಯನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಿಕೊಳ್ಳಲು ಕರ್ನಾಟಕ ಆಸಕ್ತಿ ತೋರುತ್ತಿದ್ದರೂ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸುವ ಪ್ರಯತ್ನವನ್ನೇ ಕೇಂದ್ರ ಸರ್ಕಾರ ಮಾಡಿಲ್ಲ. ಕಷ್ಟಕಾಲದಲ್ಲಿ ಕರ್ನಾಟಕದ ನೆರವಿಗೆ ಬಾರದೆ ತಾರತಮ್ಯ ಮಾಡುವ ಸರ್ಕಾರ ನಮಗೆ ಬೇಕೇ? ಎಂದಿದ್ದಾರೆ.
ಲಿಂಕ್ ಮೇಲೆ ಕ್ಲಿಕ್ ಮಾಡಿ
https://m.facebook.com/story.php?story_fbid=327744041264420&id=325691224803035
ಸುದ್ದಿದಿನ.ಕಾಂ|ವಾಟ್ಸಾಪ್|9986715401