ದಿನದ ಸುದ್ದಿ
ಬಿ.ಎಸ್.ಯಡಿಯೂರಪ್ಪ ಅವರ ಸಿಎಂ ಕುರ್ಚಿ ಮೇಲೆ ವರಿಷ್ಠರ ಕಣ್ಣು ; ದನಿಯೆತ್ತಲಿದೆಯೇ ಲಿಂಗಾಯತ ಸಮುದಾಯ
ಸುದ್ದಿದಿನ,ಬೆಂಗಳೂರು: ಸದ್ಯ ರಾಜ್ಯದಲ್ಲಿ ‘ಮುಖ್ಯಮಂತ್ರಿ’ ಬದಲಾವಣೆ ಕುರಿತ ಚರ್ಚೆಗಳು ನಡೆಯುತ್ತಿವೆ. ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರ ಬದಲಿಗೆ ಬೇರೆವರಿಗೆ ಅವಕಾಶ ಮಾಡಿಕೊಡಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ ಎಂಬ ವದಂತಿಗಳು ದೃಶ್ಯ ಮಾಧ್ಯಮದಲ್ಲಿ ಜೋರಾಗಿ ಸದ್ದು ಮಾಡುತ್ತಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸುವುದಾಗಿ ಸ್ವತಃ ಬಿ.ಎಸ್.ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ ಎಂಬ ವದಂತಿಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅದೇನೆ ಇರಲಿ ಒಂದು ವೇಳೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ರಾಜ್ಯದ ಪ್ರಬಲ ಲಿಂಗಾಯ ಸಮುದಾಯ ಸುಮ್ಮನಿರುವುದೇ ಎಂಬ ಪ್ರಶ್ನೆಗಳು ಎದ್ದಿವೆ.
ಪದೇಪದೇ ಯಡಿಯೂರಪ್ಪ ಕುರ್ಚಿ ಮೇಲೇಕೆ ಕಣ್ಣು..?
ರಾಜ್ಯದ ಪ್ರಬಲ ನಾಯಕರಲ್ಲಿ ಮುಂಚೂಣಿಯಲ್ಲಿರುವ ಬಿ.ಎಸ್.ಯಡಿಯೂರಪ್ಪ ಹೋರಾಟದಿಂದ ಬಂದವರು. ರಾಜ್ಯದ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಹುತೇಕ ಸಂದರ್ಭಗಳಲ್ಲಿ ಸಂಕಷ್ಟದ ಪರಿಸ್ಥಿತಿಗಳು ಎದುರಾಗಿವೆ. ಆದರೆ ಬಿ.ಎಸ್.ಯಡಿಯೂರಪ್ಪ ಅವುಗಳನ್ನು ಸಮರ್ಥವಾಗಿ ಎದುರಿಸುವ ಕಾರ್ಯ ಮಾಡಿದ್ದಾರೆ. ಇಂತಹ ನಾಯಕನ ಬದಲಾವಣೆಗೆ ಪಕ್ಷದ ಒಳಗಿನಿಂದಲೇ ಹಲವು ಸಲ ಒತ್ತಡಗಳು ಕೇಳಿ ಬರುತ್ತಿವೆ. ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂಬ ಕಾರಣ ನೀಡಿ ಅವರ ಬದಲಾವಣೆ ಕುರಿತ ಸುದ್ದಿಗಳನ್ನು ಹರಿಬಿಡಲಾಗುತ್ತಿದೆ.
ದನಿಯೆತ್ತಲಿದೆಯೇದೇ ಸಮುದಾಯ..?
ರಾಜ್ಯದ ಲಿಂಗಾಯ ಸಮುದಾಯಕ್ಕೆ ಬಿ.ಎಸ್.ಯಡಿಯೂರಪ್ಪ ಅವರೇ ಸರ್ವ ಶ್ರೇಷ್ಠನಾಯಕ. ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವದಲ್ಲಿ ಇರುವುದೇ ಬಿ.ಎಸ್.ಯಡಿಯೂರಪ್ಪ ಅವರ ಶ್ರಮ ಹಾಗೂ ವರ್ಚಸ್ಸಿನಿಂದ ಎಂಬ ಮಾತು ಇದೆ. ಈಗ ಬಿ.ಎಸ್.ಯಡಿಯೂರಪ್ಪ ಅವರನ್ನು ವರಿಷ್ಠರು ಸಿಎಂ ಕುರ್ಚಿಯಿಂದ ಇಳಿಸುವ ಪ್ರಯತ್ನ ಮಾಡಿದರೆ ಲಿಂಗಾಯ ಸಮುದಾಯ ಸುಮ್ಮನಿರುವುದೇ ಎಂಬ ಮಾತು ಕೇಳಿಬರುತ್ತಿವೆ. ಒಂದು ವೇಳೆ ಯಡಿಯೂರಪ್ಪ ಅವರು ತಮ್ಮ ಸ್ಥಾನದಿಂದ ಕೆಳಗಿಳಿದರೆ ಬಿಜೆಪಿ ಮತ ಬ್ಯಾಂಕ್ ಗೆ ದೊಡ್ಡ ನಷ್ಟವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸುದ್ದಿದಿನ.ಕಾಂ | ವಾಟ್ಸಾಪ್ | 9980346243