ದಿನದ ಸುದ್ದಿ
ಕನ್ನಡಿಗರ ಹಿತರಕ್ಷಣೆಗೆ ಸರ್ಕಾರ ಬದ್ಧ : ಯಡಿಯೂರಪ್ಪ
ಸುದ್ದಿದಿನ,ಬೆಂಗಳೂರು : “ನಮ್ಮ ಸರ್ಕಾರ ಕನ್ನಡ ಹಾಗೂ ಕನ್ನಡಿಗರ ಹಿತರಕ್ಷಣೆಗೆ ಬದ್ಧವಾಗಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಿನ್ನೆ ನಡೆದ ಘಟನೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಹೊರತು ಕನ್ನಡ ಪರ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
“ನಾನು ರೈತರ ಪರ ಇರುವುದು ಎಷ್ಟು ಸತ್ಯವೋ, ಕನ್ನಡಿಗರ ಪರ ಇರುವುದೂ ಅಷ್ಟೇ ಸತ್ಯ. “ಸರ್ವೇಜನಾಃ ಸುಖಿನೋಭವಂತು” ಎನ್ನುವುದೇ ನನ್ನ ಮೂಲಮಂತ್ರ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243