ದಿನದ ಸುದ್ದಿ
ನೆರೆಪರಿಹಾರಕ್ಕೆ ಹಣದ ಕೊರತೆ ಇಲ್ಲ : ಯಡಿಯೂರಪ್ಪ
ಸುದ್ದಿದಿನ,ಬಳ್ಳಾರಿ : ರಾಜ್ಯದಲ್ಲಿ ನೆರೆ ಹಾವಳಿಯಿಂದ ಉಂಟಾಗಿರುವ ಅನಾಹುತದ ಪರಿಹಾರೋಪಾಯದ ಕೆಲಸ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ, ತಕ್ಷಣ ಪರಿಹಾರ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಜದಲ್ಲಿ ಕೃಷ್ಣಾನದಿ ಪ್ರವಾಹದಿಂದ ಉಂಟಾಗಿರುವ ನೆರೆ ಹಾವಳಿಯನ್ನು ವೈಮಾನಿಕ ಪರಿಶೀಲನೆ ನಡೆಸಲು ತೆರಳುವ ಮುನ್ನ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿ ಗಾರರೊಂದಿಗೆ ಮಾತನಾಡಿದರು.
ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಮಳೆ ಆದ ಹಿನ್ನಲೆಯಲ್ಲಿ ಉತ್ತರ ಕರ್ನಾಟ ದಲ್ಲಿ ನೆರೆ ಹಾವಳಿ ಸೃಷ್ಟಿಯಾಗಿದೆ. ಈಗಾಗಲೇ ಈ ಕುರಿತು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದೆ. ತಕ್ಷಣ ಬೇಕಾದ ಪರಿಹಾರದ ಕ್ರಮ ತೆಗೆದು ಕೊಳ್ಳಲು ಸೂಚನೆ ನೀಡಿದ್ದೇನೆ. ಮುಳುಗಡೆ ಬೀತಿ ಎದಿರಿಸುತ್ತಿರುವ ಕೆಲ ಗ್ರಾಮಗಳ ಜನ ಜಾನುವಾರುಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ.ಅಗತ್ಯ ಬಿದ್ದರೆ ಮತ್ತಷ್ಟು ಗ್ರಾಮಗಳ ಸ್ಥಳಾಂತರ ಮಾಡಲು ಸೂಚಿಸಿರುವೆ ಎಂದರು.
ನೆರೆಯಲ್ಲಿ ಸಿಲುಕಿದವರ ರಕ್ಷಣೆಗೆ ರೆಸ್ಕ್ಯೂ ಆಪರೇಷನ್ ಗೆ ಸೇನೆ ಬಳಕೆ ಮಾಡಿಕೊಳ್ಳಲಾಗುತ್ತಿದೆ.
ರಾಜ್ಯದಲ್ಲಿ ಒಂದೆಡೆ ನೆರೆ ಮತ್ತೊಂದೆಡೆ ಬರಗಾಲ ಆವರಿಸಿ ವಿಪರ್ಯಾಸದ ಸನ್ನಿವೇಶ ಏರ್ಪಟ್ಟಿದೆ.ಬಳ್ಳಾರಿ ಭಾಗದಲ್ಲಿ ಮತ್ತು ಮಲೆನಾಡಿನ ಶಿವಮೊಗ್ಗದ ಭಾಗದಲ್ಲಿ ಮಳೆ ಇಲ್ಲವಾಗಿದೆ. ಮತ್ತೊಂದೆಡೆ ನೆರೆಹಾವಳಿ ಉಂಟಾಗಿದೆ. ಈ ಎರಡು ಸನ್ನಿವೇಶಗಳನ್ನು ನಿರ್ವಹಿಸಲು ಸರಕಾರ ಬದ್ದವಾಗಿದೆ ಎಂದರು.
ನೆರೆಯಿಂದ ಈ ವರೆಗೆ ಯಾವುದೇ ರೀತಿಯ ಅನಾಹುತಗಳಾಗಿಲ್ಲ. ಅನಾಹುತಗಳನ್ನು ತಡೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮತ್ತು ಪರಿಹಾರ ತಂಡಗಳು ಮತ್ತು ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆಂದು ತಿಳಿಸಿದರು. ಇಂದು ವೈಮಾನಿಕ ಸಮೀಕ್ಷೆ ನಡೆಸುವೆ.ನಂತರ ದೆಹಲಿಗೆ ತೆರಳುತ್ತಿರುವೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವೆ. ನೆರೆ ಪರಿಹಾರಕ್ಕೆ ಹೆಚ್ಚನ ನೆರವು ಕೊಡುವಂತೆ ಕೇಂದ್ರ ಸರಕಾರವನ್ನು ಕೋರುವುದಾಗಿ ತಿಳಿಸಿದರು.
ಇದಕ್ಕೂ ಮುನ್ನಅವರು ಬಳ್ಳಾರಿ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲೆಯ ಬರ ಹಾಗೂ ಇನ್ನೀತರ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿ ಮತ್ತು ಮಾಹಿತಿಯನ್ನು ಪಡೆದುಕೊಂಡರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243