ದಿನದ ಸುದ್ದಿ
ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಜಾರಿ : ಸಚಿವ ಡಾ.ಕೆ.ಸುಧಾಕರ್
ಸುದ್ದಿದಿನ,ಬೆಂಗಳೂರು : ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ.
ಮಾರ್ಗಸೂಚಿಗಳಿಗೆ ಸಂಬಂಧಿಸಿ ಇಂದು ನಡೆದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲಿ ಮುಖಗವಸು ಕಡ್ಡಾಯಗೊಳಿಸಲಾಗಿದೆ.
ಪಬ್, ಬಾರ್, ರೆಸ್ಟೋರೆಂಟ್‌ಗಳಲ್ಲಿ ಹೊಸವರ್ಷ ಆಚರಿಸುವ ವೇಳೆ ಮುಖಗವಸು ಕಡ್ಡಾಯಗೊಳಿಸಲಾಗಿದೆ. ಹೊಸ ವರ್ಷದ ಆಚರಣೆಗಳನ್ನು ರಾತ್ರಿ 1 ಗಂಟೆಗೆ ಕೊನೆಗೊಳಿಸಬೇಕು. ಆಚರಣೆಗಳು ನಡೆಯುವ ಸ್ಥಳಗಳಲ್ಲಿ ಅನುಮತಿಸಲಾದ ಸಂಖ್ಯೆಗಿಂತ ಹೆಚ್ಚು ಜನರು ಇರಬಾರದು. ಜನರು ಆತಂಕ ಪಡದೇ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243