ದಿನದ ಸುದ್ದಿ

ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ; ಮೇಲ್ವಿಚಾರಣೆಗೆ ಕಾರ್ಯಪಡೆ ರಚನೆ

Published

on

ಸುದ್ದಿದಿನ ಡೆಸ್ಕ್ : ಭಾರತದಲ್ಲಿ ಮಂಕಿಪಾಕ್ಸ್ (Monkeypox) ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ರೋಗನಿರ್ಣಯ ಸೌಲಭ್ಯಗಳ ವಿಸ್ತರಣೆಯ ಬಗ್ಗೆ ಮೇಲ್ವಿಚಾರಣೆ ಮಾಡಲು ಮತ್ತು ಸರ್ಕಾರಕ್ಕೆ ಮಾರ್ಗದರ್ಶನ ನೀಡಲು ಹಾಗೂ ದೇಶದಲ್ಲಿ ಸೋಂಕಿಗೆ ಲಸಿಕೆ ಹಾಕುವುದನ್ನು ಅನ್ವೇಷಿಸುವ ಸಲುವಾಗಿ ಕೇಂದ್ರ ಸರ್ಕಾರ (Central Government) ನಿನ್ನೆ ಕಾರ್ಯಪಡೆಯೊಂದನ್ನು ರಚಿಸಿದೆ.

ಸಂಪುಟ ಕಾರ್ಯದರ್ಶಿ, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ( Rajesh Bhushan), ಪ್ರಧಾನಮಂತ್ರಿ ಕಾರ್ಯಾಲಯದ ಹೆಚ್ಚುವರಿ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಭಾರತದಲ್ಲಿ ಇದುವರೆಗೆ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ ಮೂರು ಮತ್ತು ದೆಹಲಿಯಲ್ಲಿ ಒಂದು ಪ್ರಕರಣಗಳು ವರದಿಯಾಗಿವೆ. ಮಂಕಿಪಾಕ್ಸ್‌ನಂತಹ ರೋಗಲಕ್ಷಣಗಳನ್ನು ಹೊಂದಿದ್ದ ಕೇರಳದ ಯುವಕನೊಬ್ಬ ಸಾವನ್ನಪ್ಪಿದ್ದಾನೆ, ನಂತರ ಅಲ್ಲಿನ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ | ಇಂದು ಸಂಜೆ ಕೋಲಾರಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಒಂದು ವಾರದ ಹಿಂದೆ, ಡಬ್ಲ್ಯುಎಚ್‌ ಒ (WHO) ವೈರಲ್ ಝೂನೋಟಿಕ್ ಸೋಂಕನ್ನು ಜಾಗತಿಕ ತುರ್ತು ಪರಿಸ್ಥಿತಿ ಎಂದು ಘೋಷಿಸಿತ್ತು. ಸಿಡುಬಿನ ಚಿಕಿತ್ಸೆಗಾಗಿ ಅಭಿವೃದ್ಧಿಪಡಿಸಲಾದ ಆಂಟಿವೈರಲ್ ಏಜೆಂಟ್‌ಗೆ ಮಂಕಿಪಾಕ್ಸ್ ಚಿಕಿತ್ಸೆಗಾಗಿ ಪರವಾನಗಿ ನೀಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version