ದಿನದ ಸುದ್ದಿ
ಹಿಂದುಳಿದ ಪ್ರವರ್ಗ 3ಬಿ ಲಿಂಗಾಯತ, ಉಪಜಾತಿಗಳಿಗೆ ಕೊಳವೆ ಬಾವಿ ಸೌಲಭ್ಯ: ಅರ್ಜಿಯ ಅವಧಿ ವಿಸ್ತರಣೆ
ಸುದ್ದಿದಿನ,ಬಳ್ಳಾರಿ : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ 2021-22ನೇ ಸಾಲಿನಲ್ಲಿ ಜೀವಜಲ ಸಾಮೂಹಿಕ/ವೈಯಕ್ತಿಕ ಕೊಳವೆ ಬಾವಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿದಾರರು ವೆಬ್‍ಸೈಟ್ www.dbcdc.karnataka.gov.in ನಲ್ಲಿ ಜೀವ ಜಲ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ದಿನಾಂಕದಿಂದ ಮೇ.10ರವರೆಗೆ ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದುಳಿದ ಪ್ರವರ್ಗ 3ಬಿ ಲಿಂಗಾಯತ ಹಾಗೂ ಇದರ ಉಪಜಾತಿಗಳಿಗೆ ಒಳಪಡುವ ಅರ್ಹರು ಮಾತ್ರ ಅರ್ಜಿ ಸಲ್ಲಿಸಬಹುದು.
(ವಿಶ್ವಕರ್ಮ, ಉಪ್ಪಾರ ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ಹಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳು, ಒಕ್ಕಲಿಗ, ಮರಾಠ, ಕುರುಬ, ಈಡಿಗ, ಕುಂಬಾರ, ನೇಕಾರ ಮತ್ತು ಇದರ ಉಪ ಸಮುದಾಯಗಳು ಇವುಗಳನ್ನು ಹೊರತುಪಡಿಸಿ)
ಅರ್ಹತೆಗಳು
ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದು, ವಾರ್ಷಿಕ ವರಮಾನ 40ಸಾವಿರ ರೂ.ಗಳ ಮಿತಿಯಲ್ಲಿರಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕುಮಾರಸ್ವಾಮಿ ದೇವಸ್ಥಾನದ ಎದುರು, ಕ್ಲಬ್ ರೋಡ್‍ನ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಮತ್ತು ನಿಗಮದ ದೂ.08392-267038 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


