ದಿನದ ಸುದ್ದಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಕೆಲವೊಂದು ವಿಶ್ವವಿದ್ಯಾಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೊಂದಾಣಿ ಸಂಖ್ಯೆಯನ್ನು ಒದಗಿಸಿರದ ಕಾರಣ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ.
ಹಾಗೂ ಕೋವಿಡ್-19 ಹಿನ್ನೇಲೆಯಲ್ಲಿ ಮೇ.24 ರವರೆಗೆ ರಾಜ್ಯದಂತ ಲಾಕ್‍ಡೌನ್ ಘೋಷಣೆಯಾಗಿರುವ ಕಾರಣ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿರುವುದರಿಂದ ವಿದ್ಯಾರ್ಥಿಗಳು ಇ-ಅಟೆಷ್ಟೆಷನ್ ಮಾಡಿಸುವುದು ಕಷ್ಟ ಸಾಧ್ಯವಾಗಿರುತ್ತದೆ. ಅದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ಮೇ.31 ರವರೆಗೆ ವಿಸ್ತರಿಸಲಾಗಿದೆ.
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ವೆಬ್ ಸೈಟ್ www.ssp.postmatric.karnataka.gov.in | https://bcwd.karnataka.gov.in | ಅಥವಾ ಇಮೇಲ್ bcwd.scholarship@karnataka.gov.in | ಇಲಾಖಾ ಸಹಾಯವಾಣಿಯ ದೂ.ಸಂ8050770005/8050770004 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243