ದಿನದ ಸುದ್ದಿ

ಕೋವಿಡ್ ಹಿನ್ನೆಲೆ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆ ನಿರ್ಬಂಧ

Published

on

ಸುದ್ದಿದಿನ,ದಾವವಣಗೆರೆ : ಆ.1 ರಂದು ಬಕ್ರೀದ್ ಹಬ್ಬ ಆಚರಣೆ ಇದ್ದು ಕೋವಿಡ್ 19 ರ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆಯನ್ನು (ನಮಾಜ್) ಈದ್ಗಾಗಳಲ್ಲಿ ನಿರ್ಬಂಧಿಸಲಾಗಿದೆ.

ಸಾಮೂಹಿಕ ಪ್ರಾರ್ಥನೆಗೆ ಮಸೀದಿಗಳಲ್ಲಿ ಮಾತ್ರ ಅವಕಾಶ ನೀಡಲಾಗಿದ್ದು ದಿ: 06-06-2020 ರ ಸುತ್ತೋಲೆಯ ಆದೇಶದಂತೆ ವಕ್ಫ್ ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಯವರು ಕೇವಲ 50 ಜನರಿಗೆ ಮಾತ್ರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ರೀತಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲು ವ್ಯವಸ್ಥೆ ಮಾಡುವುದು. ಹೆಚ್ಚು ಜನರು ಸೇರಿದರೆ ಅವರಿಗೆ ಪ್ರತ್ಯೇಕವಾಗಿ 2 ರಿಂದ 3 ಬ್ಯಾಚ್‍ಗಳನ್ನು ಮಾಡಿ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸುವುದು.

ಮಸೀದಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಸ್ಥಳಗಳಲ್ಲಿ ಸಭಾಂಗಣ, ಸಮುದಾಯ ಭವನ, ಶಾದಿಮಹಲ್ ಮತ್ತಿತರೆ ತೆರೆದ ಜಾಗಗಳಲ್ಲಿ ಬಕ್ರೀದ್ ಸಾಮೂಹಿಕ ಪ್ರಾರ್ಥನೆಯನ್ನು ಆಚರಿಸುವಂತಿಲ್ಲ ಎಂದು ಸರ್ಕಾರ ಆದೇಶಿಸಿದ್ದು ಈ ನಿಯಮಗಳನ್ನು ಪಾಲಿಸಬೇಕೆಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version