ರಾಜಕೀಯ
ಬಳ್ಳಾರಿ ಲೋಕಸಭಾ ಉಪ ಚುನಾವಣೆ; ಸೋಲಿನ ಹೊಣೆ ಹೊತ್ತ ಶ್ರೀರಾಮುಲು
ಸುದ್ದಿದಿನ ಬೆಂಗಳೂರು: ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಅವರ ಸೋಲಿನ ಹೊಣೆಯನ್ನು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಹೊಣೆ ಹೊತ್ತುಕೊಂಡಿದ್ದು, ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಳ್ಳಾರಿ ಲೋಕಸಭಾ ಉಪ ಚುನಾಬಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ 5,15,179 ಮತ ಪಡೆದು ಗೆಲುವು ಕಂಡಿದ್ದು, ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಅವರು 3,16,872 ಸೋಲುಂಡಿದ್ದಾರೆ. ಈ ಸೋಲಿನ ಹೊಣೆಯನ್ನು ಶ್ರೀರಾಮುಲು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಬಿಜೆಪಿಗೆ ಟೀಕೆ ಮಾಡಿದ್ದು, ಬಳ್ಳಾರಿಯಲ್ಲಿ ನರಕ ಚತುರ್ದಶಿಯ ಅರ್ಥಪೂರ್ಣ ಆಚರಣೆ ಆಗುತ್ತಿದೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ ಸಾಗುತ್ತಿದೆ ಎಂದು ಆರೋಪಿಸಿದರು.