ದಿನದ ಸುದ್ದಿ

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ.

ಅಗತ್ಯ ಸೇವೆಗಳಾದ ಔಷಧ, ಆಸ್ಪತ್ರೆ, ಹಾಲು, ಪೇಪರ್, ಆಂಬುಲೆನ್ಸ್ ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಉಳಿದಂತೆ ಹೋಟೆಲ್‌ಗಳು, ಇತರೆ ಸಾರಿಗೆ ಸೇವೆಗಳು ಲಭ್ಯವಿರುವುದಿಲ್ಲ. ಬೀದಿಬದಿ ವ್ಯಾಪಾರ, ಶಾಲಾ, ಕಾಲೇಜು, ಬಿಎಂಟಿಸಿ ಬಸ್ ಸಂಚಾರ, ಕೈಗಾರಿಕೆಗಳು, ವಾಣಿಜ್ಯೋದ್ಯಮ, ಕೆಎಸ್‌ಆರ್‌ಟಿಸಿ ಬಸ್, ಮಾರ್ಕೆಟ್‌ಗಳು ಬಂದ್ ಆಗಲಿವೆ.

ಇಂದು ಸಂಪೂರ್ಣ ಸಾರಿಗೆ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ. ಖಾಸಗಿ ಸಾರಿಗೆ ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ. ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. 150 ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್‌ಗೆ ಬೆಂಬಲ ಸೂಚಿಸಿವೆ.

ಬೆಂಗಳೂರು ಬಂದ್‌ಗೆ ಕರೆ ಕೊಟ್ಟಿರುವ ಕನ್ನಡಪರ ಹಾಗೂ ವಿವಿಧ ಸಂಘಟನೆಗಳ ಪ್ರತಿಭಟನೆಗೆ ಯಾವುದೇ ಅವಕಾಶವಿಲ್ಲ ಎಂದು ಪೊಲೀಸ್ ಕಮಿಷನರ್ ಬಿ.ದಯಾನಂದ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರಿಂ ಕೋರ್ಟ್ ಆದೇಶದಂತೆ ಯಾವುದೇ ಬಂದ್‌ಗೆ ಅವಕಾಶ ಇಲ್ಲ. ಬಂದ್‌ನಲ್ಲಿ ಆಸ್ತಿ ಪಾಸ್ತಿ ನಷ್ಟ ಆದರೆ ಆಯೋಜಕರೆ ನೇರ ಹೊಣೆಯಾಗಲಿದ್ದಾರೆ. ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version