ದಿನದ ಸುದ್ದಿ
ಬೆಂಗಳೂರು | ಮಳೆಯಿಂದ ಹಾನಿ ; ಸಮೀಕ್ಷೆ ನಡೆಸಿ ಪರಿಹಾರ ನೀಡಲು ಕ್ರಮ : ಬಿಬಿಎಂಪಿ
ಸುದ್ದಿದಿನ, ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿರುವ ಹಾನಿ ಕುರಿತು ಸಮೀಕ್ಷೆ ನಡೆಸಿ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಳೆ ಹಾನಿ ಕುರಿತಂತೆ ಇಂದು ವರ್ಚುಯಲ್ ಸಭೆ ನಡೆಸಿದ ಗೌರವ್ ಗುಪ್ತಾ, ಪಾಲಿಕೆ ವ್ಯಾಪ್ತಿಯಲ್ಲಿ 9 ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, ಮಳೆಗಾಲದ ವೇಳೆ 63ತಾತ್ಕಾಲಿಕ ಕೊಠಡಿಗಳನ್ನು ಸ್ಥಾಪಿಸಲಾಗುತ್ತಿದೆ. ಈ ಪೈಕಿ ಅಗತ್ಯಕ್ಕೆ ಅನುಗುಣವಾಗಿ ವಿಭಾಗೀಯ ಮಟ್ಟದಲ್ಲಿ ಕೂಡಲೇ ತಾತ್ಕಾಲಿಕ ನಿಯಂತ್ರಣ ಕೊಠಡಿ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243