ದಿನದ ಸುದ್ದಿ

ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳಿಗೆ ಅಧಿಕಾರಿಗಳೇ ನೇರ ಹೊಣೆ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಬೆಂಗಳೂರಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರವೇ ಸಂಪೂರ್ಣವಾಗಿ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ಜನರು ಕಾನೂನಿನ ಪ್ರಕಾರ ಮನೆಗಳನ್ನು ನಿರ್ಮಿಸಬೇಕೇ ಹೊರತು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಬಾರದೆಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮೊದಲು ಘಟನಾ ಸ್ಥಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ೮ಕ್ಕೇರಿದೆ. ಎಂಟು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರ ಸ್ಥಿತಿ ಗಂಭೀರವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version