ಕ್ರೀಡೆ

ಬೆಂಗಳೂರಿನಲ್ಲಿ ನಾಳೆ ಖೇಲೋ ಇಂಡಿಯಾ ವಿಶ್ವವಿದ್ಯಾಲಯಗಳ ಕ್ರೀಡಾಕೂಟ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಖೇಲೋ ಇಂಡಿಯಾ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2021ಕ್ಕೆ ಚಾಲನೆ ದೊರೆಯಲಿದೆ. ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಈ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ರಾಜ್ಯಪಾಲ ಥಾವರ್‌ಚೆಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕ್ರೀಡಾಕೂಟದ ಸ್ಮರಣಾರ್ಥ ಅಂಚೆಚೀಟಿಯೊಂದನ್ನು ಬಿಡುಗಡೆ ಮಾಡಲಾಗುತ್ತದೆ.

ಮೇ2ರಂದು ಜೈನ್ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಲಿದ್ದಾರೆ. ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದ ಎರಡನೇ ಆವೃತ್ತಿಯಲ್ಲಿ 200ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ನಾಲ್ಕೂವರೆ ಸಾವಿರ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. 20 ವಿವಿಧ ವಿಭಾಗಗಳಲ್ಲಿ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಈ ಸಂದರ್ಭದಲ್ಲಿ ಕೋವಿಡ್ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಒತ್ತು ನೀಡಲಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version