ದಿನದ ಸುದ್ದಿ
ಮಂಗಳವಾರದಿಂದ ಪೂರ್ಣ ಲಾಕ್ ಡೌನ್
ಸುದ್ದಿದಿನ,ಬೆಂಗಳೂರು :ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರವು ಇಂದು ಮತ್ತೆ 1 ವಾರ ಕಾಲ ಲಾಕ್ ಡೌನ್ ಘೋಷಿಸಿ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಾತ್ರವೇ ಜು.14ರ ರಾತ್ರಿ 8 ಗಂಟೆಯಿಂದ 23ರವರೆಗೆ ಸಂಪೂರ್ಣ ಲಾಕ್ ಡೌನ್ ಇರಲಿದೆ.
ಈ ವೇಳೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮತ್ತು ಪದವಿ, ಸ್ನಾತಕೋತ್ತರ ಪದವಿಗಳ ಪರೀಕ್ಷೆಗಳಿಗೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243