ದಿನದ ಸುದ್ದಿ
ನಾಳೆ ಮೋದಿ ರೋಡ್ ಶೋ ; ಕಾರ್ಯಕ್ರಮದಲ್ಲಿ ಬದಲಾವಣೆ
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ ಮೂಲಕ ಮತಯಾಚನೆ ಚುರುಕುಗೊಳಿಸಿದ್ದಾರೆ.
ನೀಟ್ ಪರೀಕ್ಷೆ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ದುರೀಣ ಪ್ರಧಾನಿ ನರೇಂದ್ರ ಮೋದಿ ಅವರ ನಾಳಿನ ರೋಡ್ ಶೋ ಕಾರ್ಯಕ್ರಮದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ ಎಂದು ರಾಜ್ಯ ಚುನಾವಣಾ ಸಮಿತಿಯ ಸಂಚಾಲಕಿ ಶೋಭಾ ಕರಂದ್ಲಾಜೆ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.
ತುಮಕೂರು ಪ್ರವಾಸದ ನಂತರ ರಾಜಧಾನಿ ಬೆಂಗಳೂರಿಗೆ ಆಗಮಿಸಲಿರುವ ಭೇಟಿ ಹಿನ್ನೆಲೆಯಲ್ಲಿ ಸಂಜೆ 5ಗಂಟೆಯಿಂದ 7 ಗಂಟೆಯವರೆಗೆ ಹಳೇ ವಿಮಾನ ನಿಲ್ದಾಣ ರಸ್ತೆಯಿಂದ ರಾಜಭವನದ ಮಾರ್ಗದಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243