ದಿನದ ಸುದ್ದಿ

ವಾಷಿಂಗ್ಟನ್ ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 105 ಪ್ರಯಾಣಿಕರು

Published

on

ಸುದ್ದಿದಿನ,ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಅಮೇರಿಕಾದ(ಯು.ಎಸ್.ಎ.) ವಾಷಿಂಗ್ಟನ್‌ ನಿಂದ ಇಂದು (ಮೇ 30) ಬೆಳಗಿನ ಜಾವ 3.15 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ಮೂರನೇ ಏರ್ ಇಂಡಿಯಾ ವಿಮಾನದಲ್ಲಿ 105 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 105 ಮಂದಿ ಪ್ರಯಾಣಿಕರಲ್ಲಿ ಎರಡು ಮಕ್ಕಳು ಸೇರಿದಂತೆ 54 ಪುರುಷರು ಮತ್ತು 49 ಮಹಿಳೆಯರು ಇದ್ದಾರೆ.

ನಂತರ ಏರ್ ಇಂಡಿಯಾ ವಿಮಾನವು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು.

ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 105 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.

105 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version