Connect with us

ದಿನದ ಸುದ್ದಿ

ವನಿತಾ ಸಾಹಿತ್ಯ ವೇದಿಕೆಯಿಂದ ಬಸವ ಜಯಂತಿ ಹಾಗೂ ತಾಯಂದಿರ ದಿನ

Published

on

ಸುದ್ದಿದಿನ, ದಾವಣಗೆರೆ : ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ ಮತ್ತು ಪ್ರಜ್ಞಾ ವೇದಿಕೆ ವನಿತಾ ಸಮಾಜ ದಾವಣಗೆರೆ ಮತ್ತು ವನಿತಾ ಸಾಹಿತ್ಯ ವೇದಿಕೆ ಹಾಗೂ ಹಿರಿಯ ನಾಗರೀಕರ ಸಹಾಯವಾಣಿ ದಾವಣಗೆರೆ ಇವರ ಸಹಯೋಗದಲ್ಲಿ ಬುಧವಾರ ದಂದು ವನಿತಾ ಹಿರಿಯ ವನಿತೆಯರ ಆನಂದಧಾಮ ಇಲ್ಲಿ ಬಸವಜಯಂತಿ, ತಾಯಂದಿರ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶ್ರೀಮತಿ ಉಷ.ಈ ರವರು “ವಿಶ್ವಗುರು ಬಸವಣ್ಣ” ಎಂಬ ವಿಷಯದ ಕುರಿತು ಉಪನ್ಯಾಸ ನೀಡುತ್ತಾ ಇಂದಿನ ಸಮಾಜಕ್ಕೆ ಬಸವಣ್ಣನವರ ತತ್ವ ವಿಚಾರಗಳ ಪ್ರಸ್ತುತತೆ ಬಗ್ಗೆ ಮಾತನಾಡಿದರು.

ದತ್ತಿ ಉಪನ್ಯಾಸಕರಾಗಿ ಆಗಮಿಸಿದ್ದ ಶ್ರೀಮತಿ ರಾಜೇಶ್ವರಿ ವೈ. ಎಂ. ರವರು ತಾಯಂದಿರ ದಿನದ ಬಗ್ಗೆ ಮಾತನಾಡುತ್ತಾ ತಾಯಂದಿರ ದಿನದ ಹಿನ್ನೆಲೆ ಹಾಗೂ ಭಾರತೀಯ ಪರಂಪರೆಯಲ್ಲಿ ತಾಯ್ತನದ ಮಹತ್ವದ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀಮತಿ ಜಯಮ್ಮ ನೀಲಗುಂದ ರವರು ವನಿತ ಸಮಾಜದ ಸಂಸ್ಥಾಪಕರಲ್ಲಿ ಒಬ್ಬರಾದ ಶ್ರೀಮತಿ ನಾಗಮ್ಮ ಕೇಶವಮೂರ್ತಿ ಇವರನ್ನ ಸ್ಮರಿಸಿ ಅವರ ಬಗ್ಗೆ ಒಂದು ಸ್ವರಚಿತ ಕವನ ವಾಚನ ಮಾಡಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಮಲ್ಲಮ್ಮ ನಾಗರಾಜ್ , ಶ್ರೀ ಷಡಕ್ಷರಪ್ಪ ಎಂ. ಬೇತೂರು ˌ ನಾಗರಾಜ್ ಸಿರಿಗೆರೆ ˌ ಬಾಗಿನಕಟ್ಟೆ ಪರಮೇಶ್ವರಪ್ಪˌ ಶ್ರೀ ಹೆಚ್.ಕೆ. ಪಾಲಾಕ್ಷಪ್ಪ ˌ ಶ್ರೀಮತಿ ಶೈಲಾ ˌ ಶ್ರೀಮತಿ ಶಿವರತ್ನಮ್ಮ ˌ ಮುಂತಾದವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಶ್ರೀಮತಿ ಸುಶೀಲರವರು ನಿರೂಪಿಸಿದರು.
ಆನಂದಧಾಮದ ಹಿರಿಯ ಮಾತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೀತಗಾಯನ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending