ದಿನದ ಸುದ್ದಿ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಬೆಂಗಳೂರು:ಕಾವೇರಿ ನಿವಾಸದಲ್ಲಿ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ನಿಯೋಗದವರು ಸೊಮವಾರ ನನ್ನನ್ನು ಭೇಟಿಯಾಗಿ, ಸಮುದಾಯದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿ, ಮನವಿಪತ್ರ ನೀಡಿದರು. ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯವಿರುವವುಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಸಿಎಂ ತಮ್ಮ ಸೋಶಿಲ್‌ ಮೇಡಿಯಾದಲ್ಲಿ ಪೋಸ್ಟ್‌ ಹಾಕಿದ್ದಾರೆ.

ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮ ಸರ್ಕಾರ. ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ ಎಂದು ಕಿಡಿಕಾರಿದ್ದಾರೆ.

ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೆ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ. ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು, ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ.

ಗೋರುಚ ಅವರ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪವು ಮೊದಲ ಪ್ರಜಾಪ್ರಭುತ್ವದ ವೇದಿಕೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version