ರಾಜಕೀಯ
ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ : ಸಭಾಪತಿ ಬಸವರಾಜ ಹೊರಟ್ಟಿ
ಸುದ್ದಿದಿನ,ಹುಬ್ಬಳ್ಳಿ: ಸದ್ಯಕ್ಕೆ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸೇರುವ ಬಗ್ಗೆ ನಾನು ಎಲ್ಲೂ ಮಾತನಾಡಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರಕ್ಕೆ ಆಯಾ ಪಕ್ಷಗಳು ತಮ್ಮ-ತಮ್ಮ ಅಭ್ಯರ್ಥಿಗಳನ್ನು ಪ್ರಕಟಿಸಿವೆ. ಇನ್ನೂ ಮೇ ತಿಂಗಳಲ್ಲಿ ಚುನಾವಣೆಯಿದೆ. ನನ್ನ ಚುನಾವಣೆ ವಿಚಾರದಲ್ಲಿ ಜಾತಿ ಪ್ರಶ್ನೆಯೇ ಬರಲ್ಲ. ಶಿಕ್ಷಕರ ಬೆಂಬಲ ನನಗಿದೆ. ಯಾವ ಪಕ್ಷಕ್ಕೂ ಹೋಗಬೇಕೆಂಬುದಿಲ್ಲ.
ಕೆಲವು ಸ್ನೇಹಿತರ ಬಿಜೆಪಿಗೆ ಸೇರುವಂತೆ ಆಹ್ವಾನ ನೀಡಿದ್ದರು. ಮತ್ತೆ ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಸಲಹೆ ನೀಡಿದ್ದಾರೆ. ಇನ್ನೂ ಸಾಕಷ್ಟು ಸಮಯಾವಕಾಶವಿದೆ. ಬಜೆಟ್ ಅಧಿವೇಶನದ ನಂತರ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ.
ಮತಾಂತರ ನಿಷೇಧ ಕಾಯ್ದೆ ಮಂಡನೆ ವಿಚಾರವಾಗಿ ಮಾತನಾಡಿ, ಯಾವ ಮಸೂದೆಗಳು ಮಂಡನೆಯಾಗುತ್ತೆ ಅನ್ನೋದರ ಬಗ್ಗೆ ಮಾಹಿತಿಯಿಲ್ಲ. ಪರಿಷತ್ನಲ್ಲಿ ಮಂಡನೆ ಆದ್ರೂ ನೆಕ್ ಟು ನೆಕ್ ಫೈಟ್ ಇದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243