ದಿನದ ಸುದ್ದಿ
ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ
ಸುದ್ದಿದಿನ,ಬೆಂಗಳೂರು: ನೆನ್ನೆ ಬೆಂಗಳೂರಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್‍ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಭೇಟಿಯಾಗಿದ್ದು, ಈ ಮೂಲಕ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಅಮಿತ್ ಷಾ ಒಪ್ಪಿಗೆ ನೀಡಿದ್ದಾರೆ.
ಸುಮಾರು 42 ವರ್ಷಗಳ ಕಾಲ ಜೆಡಿಎಸ್‍ನಲ್ಲಿದ್ದ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರುವುದು ಖಚಿತವಾಗಿದೆ. ಈ ಬಗ್ಗೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಶೀಘ್ರದಲ್ಲೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದರು.
ಜೆಡಿಎಸ್ ಬಗ್ಗೆ ಒಳ್ಳೆ ಅಭಿಪ್ರಾಯ ಇದೆ. ಈಗ ಬದಲಾದ ವ್ಯವಸ್ಥೆಯಲ್ಲಿ ಮತದಾರರ ಅಭಿಪ್ರಾಯದ ಮೇಲೆ ಸೇರ್ಪಡೆಗೊಂಡಿದ್ದೇನೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243