ರಾಜಕೀಯ

ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ; ನಾಳೆ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ

Published

on

ಸುದ್ದಿದಿನ, ಬೆಂಗಳೂರು : ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದು, ಅಧಿಕೃತ ಘೋಷಣೆ ಮಾಡಲಾಗಿದೆ.

ರಾಜಧಾನಿಯ ಖಾಸಗಿ ಹೋಟೆಲ್ ವೊಂದರಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರ ಹೆಸರನ್ನು ನಾಯಕ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ಪ್ರಸ್ತಾಪಿಸಿದ್ದು, ಗೋವಿಂದ ಕಾರಜೋಳ ಅವರು ಅನುಮೋದಿಸಿದ್ದಾರೆ. ನಾಳೆ ಮಧ್ಯಾಹ್ನ 3:30ಕ್ಕೆ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬಸವರಾಜ್ ಬೊಮ್ಮಾಯಿ 2008 ರಲ್ಲಿ ಬಿಜೆಪಿಗೆ ಸೇರಿದ್ದ ಅವರು, ಅಂದಿನಿಂದ ಪಕ್ಷದಲ್ಲಿ ಉನ್ನತ ಸ್ಥಾನಕ್ಕೆ ಏರುತ್ತಲೆ ಬಂದಿದ್ದಾರೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಅವರು ಟಾಟಾ ಸಮೂಹದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು.

ಬಿಜೆಪಿಯ ಈ ಹಿಂದಿನ ಆಡಳಿತದಲ್ಲಿ ಒಟ್ಟು ಐದು ವರ್ಷ ಜಲಸಂಪನ್ಮೂಲ ಸಚಿವರಾಗಿಯು ಅವರು ಸೇವೆ ಸಲ್ಲಿಸಿದ್ದರು. ಬೊಮ್ಮಾಯಿ ಹಾವೇರಿ ಜಿಲ್ಲೆಯ ಶಿಗ್ಗಾಂವ್‌ನಿಂದ ಎರಡು ಬಾರಿ ಎಂಎಲ್‌ಸಿ ಮತ್ತು ಮೂರು ಬಾರಿ ಶಾಸಕರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version