ದಿನದ ಸುದ್ದಿ
ಏಪ್ರಿಲ್ 11ಕ್ಕೆ ಜಗಳೂರಿಗೆ ಮುಖ್ಯಮಂತ್ರಿ ಬೊಮ್ಮಾಯಿ ; ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ : ಶಾಸಕ ಎಸ್.ವಿ ರಾಮಚಂದ್ರ
ಸುದ್ದಿದಿನ,ದಾವಣಗೆರೆ : ಏ.11 ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಸೇರಿ ವಿವಿಧ ಯೋಜನೆಗಳ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ನೆರವೇರಿಸಲಿದ್ದಾರೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.
ಗುರುವಾರ ಪಟ್ಟಣದ ವಾಲ್ಮೀಕಿ ಭವನದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಜಗಳೂರು ತಾಲೂಕಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಚರ್ಚಿಸಲು ಕರೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು,
ಬರದನಾಡನ್ನು ಹಸಿರ ನಾಡನ್ನಾಗಿ ಮಾಡುವ ಕಾಲ ಸನ್ನಿಹಿತವಾಗಿದ್ದು 1336 ಕೋಟಿ ರೂ ವೆಚ್ಚದ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯ ಕಾಮಗಾರಿಗೆ ಮಾನ್ಯ ಮುಖ್ಯಮಂತ್ರಿಗಳು ಭೂಮಿ ಪೂಜೆ ನೆರವೇರಿಸಲಿದ್ದು ಅಂದೇ ವಿವಿಧ ಇಲಾಖೆಗಳ ಸಾವಿರಾರು ಕೋಟಿ ರೂ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ ಎಂದರು.
ಸಂಘ ಸಂಸ್ಥೆಗಳು, ರಾಜಕರಣಿಗಳು ಪ್ರಗತಿ ಪರ ಹೋರಾಟಗಾರರ 40 ವರ್ಷದ ಹೋರಾಟದ ಫಲವಾಗಿ ಈ ಯೋಜನೆ ತಾಲೂಕಿಗೆ ಬಂದಿದ್ದು ಇದ್ದಕ್ಕೆ ಯಡಿಯೂರಪ್ಪವರ ಶ್ರಮ ಬಹಳಷ್ಟಿದೆ ಎಂದರು. ಈ ಯೋಜನೆ ರಾಷ್ಟ್ರೀಯ ಯೋಜನೆಯಾಗಲಿದ್ದು 60-40 ರ ಅನುಪಾತದಲ್ಲಿ ಅನುದಾನವನ್ನು ಕೇಂದ್ರ ಮತ್ತು ರಾಜ್ಯ ಸರಕಾರ ನೀಡಲಿದೆ ಎಂದರು.
ಅಂದು ಸುಮಾರು 20 ಸಾವಿರ ಜನರ ಸಮ್ಮುಖದಲ್ಲಿ ಮಾನ್ಯ ಮುಖ್ಯಮಂತ್ರಿಗಳು ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ದಿಗೆ ನೆರವಾಗುವ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಹಾಗೂ ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲಿದ್ದಾರೆ ಎಂದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಮಾನ್ಯ ಮುಖ್ಯಮಂತ್ರಿಗಳು ವಿವಿಧ ಇಲಾಖೆಗಳ ನೂರಾರು ಕೋಟಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ದಾವಣಗೆರೆ ಜಿಲ್ಲೆಯ ಬಗೆಗೆ ವೀಶೇಷ ಕಾಳಜಿ ಹೊಂದಿರುವ ಮುಖ್ಯಮಂತ್ರಿಗಳು ಜಿಲ್ಲೆಯ ಅಭಿವೃದ್ದಿಗೆ ಬದ್ಧ ಎಂಬ ಮಾತನ್ನು ಯಾವಾಗಲೂ ಹೇಳುತ್ತಿರುತ್ತಾರೆ. ಈ ಕಾರ್ಯಕ್ರಮವನ್ನು ಇಡೀ ಜಿಲ್ಲಾಡಳಿತವೇ ಮುಂದೆ ನಿಂತು ಅದ್ದೂರಿಯಾಗಿ ನೆರೆವೇರಿಸಿಕೊಡಲಿದೆ ಎಂದರು.
ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಶಂಕುಸ್ಥಾಪನೆ, ಉದ್ಘಾಟನೆಗೆ ಸಿದ್ದವಿರುವ ಹಾಗೂ ಇಲಾಖೆಯಿಂದ ನೀಡಲಾಗುವ ವಿವಿಧ ಸಹಾಯಧನಗಳ ಬಗೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ, ಜಿ.ಪಂ ಸಿಇಓ ವಿಜಯ ಮಹಾಂತೇಶ್ ದಾನಮ್ಮನವರ್, ಎಸ್.ಪಿ. ರಿಷ್ಯಂತ್, ಎ.ಸಿ. ಮಮತ ಹೊಸಗೌಡರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಿ.ಬಸರಗಿ, ಡಿಎಚ್‍ಓ ನಾಗರಾಜ್, ತಹಶೀಲ್ದಾರ್ ಜಿ.ಸಂತೋಷ್ ಕುಮಾರ್,ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


