ದಿನದ ಸುದ್ದಿ
ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕ – ಸಿಬ್ಬಂದಿಯ ಕಾಲ್ಪನಿಕ ವೇತನ ಸಮಸ್ಯೆಗೆ ಪರಿಹಾರ ಕೋರಿ ಬಸವರಾಜ ಹೊರಟ್ಟಿ ಪತ್ರ
ಸುದ್ದಿದಿನ ಡೆಸ್ಕ್ : ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕ ಹಾಗೂ ಸಿಬ್ಬಂದಿಯ ಕಾಲ್ಪನಿಕ ವೇತನ ಸಮಸ್ಯೆಗೆ ಅಂತಿಮ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ.ನಾಗೇಶ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕಾಲ್ಪನಿಕ ವೇತನ ಸಮಸ್ಯೆಯಿಂದ ಬಾಧಿತರಾದ ಶಿಕ್ಷಕರು ಹಾಗೂ ಸಿಬ್ಬಂದಿ ಮುಖ್ಯಮಂತ್ರಿ ಜೊತೆಗಿನ ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಸಿದ್ಧರಿದ್ದಾರೆ. ಆದ್ದರಿಂದ ವಿಳಂಬಕ್ಕೆ ಅವಕಾಶವಿಲ್ಲದಂತೆ ಏಪ್ರೀಲ್ ಕೊನೆಯ ವಾರ ಅಥವಾ ಮೇ ಮೊದಲನೆ ವಾರ ಸಭೆಯ ದಿನಾಂಕವನ್ನು ನಿಗದಿಪಡಿಸುವಂತೆ ಬಸವರಾಜ ಹೊರಟ್ಟಿ ಕೋರಿದ್ದಾರೆ.
ಕಳೆದ ತಿಂಗಳು ಮೇಲ್ಮನೆಯಲ್ಲಿ ನಡೆದ ಚರ್ಚೆ ವೇಳೆ ಕಾಲ್ಪನಿಕ ವೇತನ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದೆಂದು ತಿಳಿಸಲಾಗಿತ್ತು. ಆದರೆ, ಈಗಾಗಲೇ ಒಂದು ತಿಂಗಳು ಗತಿಸಿದ್ದು, ಇಲ್ಲಿಯವರೆಗೂ ದಿನಾಂಕ ನಿಗದಿ ಆಗಿಲ್ಲ ಎಂದು ಸಭಾಪತಿ ಪತ್ರದಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243