ದಿನದ ಸುದ್ದಿ

ಹಂಪಿಯಲ್ಲಿ ಬ್ಯಾಟರಿ ಚಾಲಿತ ವಾಹನಗಳ ಆರಂಭ

Published

on

ಸುದ್ದಿದಿನ,ಬಳ್ಳಾರಿ: ಕೋವಿಡ್-19ರ ಲಾಕ್ಡೌನ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ಪ್ರವಾಸಿಗರಿಗೆ ಅನುಕೂಲತೆಗಳನ್ನು ಕಲ್ಪಿಸಿಕೊಡುವ ಉದ್ದೇಶದಿಂದ ಹಂಪಿಯಲ್ಲಿ ಬ್ಯಾಟರಿ ಚಾಲಿತ ವಾಹನಗಳನ್ನು ಮಂಗಳವಾರದಿಂದ ಆರಂಭಿಸಲಾಗಿದೆ.

ಹಂಪಿಯ ಗೆಜ್ಜಲ ಮಂಟಪದಿಂದ ಬ್ಯಾಟರಿ ಚಾಲಿತ ವಾಹನ ಆರಂಭ ಮಾಡಲಾಗಿದೆ. ಪ್ರವಾಸಿಗರು ಬ್ಯಾಟರಿ ಚಾಲಿತ ವಾಹನಗಳಲ್ಲಿ ಕುಳಿತು ಹಂಪಿಯ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸುತ್ತಿದ್ದಾರೆ ಎಂದು ಹಂಪಿ ವಿಶ್ವಪರಂಪರೆ ಅಭಿವೃದ್ಧಿ ಪ್ರಾಧಿಕಾರದ (ಹವಾಮಾ)ಆಯುಕ್ತ ಪಿ.ಎನ್.ಲೋಕೇಶ ಹೇಳಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಕಡ್ಡಾಯ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಮಾರಕಗಳ ಬಳಿ ಶುಚಿತ್ವ ಕಾಪಾಡುವುದು ಸೇರಿದಂತೆ ಇನ್ನೀತರ ವಿಷಯಗಳ ಕುರಿತು ಹವಾಮಾ ಸಿಬ್ಬಂದಿ ಅರಿವು ಮೂಡಿಸುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version