ದಿನದ ಸುದ್ದಿ

ಬಿ.ಸಿ.ಪಾಟೀಲ್ ಪರ ನಟ ದರ್ಶನ್ ಮತ ಯಾಚನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಎಲ್ಲೆಡೆ ತಾರಕಕ್ಕೇರಿದ್ದು, ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿದರು.

ಬಿಜೆಪಿ ಹಿರಿಯ ಧುರೀಣ, ಪ್ರಧಾನಿ ನರೇಂದ್ರ ಮೋದಿ ಅವರು ಬಳ್ಳಾರಿ ಮತ್ತು ತುಮಕೂರು ಜಿಲ್ಲೆಯಲ್ಲಿ ರೋಡ್ ಶೋ ಮೂಲಕ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿಂದು ನಟ ದರ್ಶನ್ ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಪರವಾಗಿ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು.

ಉಳಿದಂತೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಆಮ್ ಆದ್ಮಿ ಸೇರಿದಂತೆ ವಿವಿಧ ಪಕ್ಷದ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕೈಗೊಂಡರು. ಸಾರ್ವತ್ರಿಕ ಚುನಾವಣೆಯಲ್ಲಿ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರವಾಗಿ ನಾಯಕಿ ಮಾಯಾವತಿ ಮತಯಾಚಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಶಿವಾಜಿನಗರದಲ್ಲಿ ನಾಡಿದ್ದು ರ್‍ಯಾಲಿ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಲಿದ್ದಾರೆ. ನಂತರ ಪುತ್ತೂರಿನಲ್ಲಿ, ಬಳಿಕ ಬಂಟ್ವಾಳದಲ್ಲಿ ರೋಡ್ ಶೋ ಮೂಲಕ ಮತಯಾಚಿಸಲಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version