ದಿನದ ಸುದ್ದಿ

ರೈತರ ಜೀವನದಲ್ಲಿ ಬದಲಾವಣೆ ತರಲು ಸರ್ಕಾರದಿಂದ ಹಲವಾರು ಯೋಜನೆ : ಬಿ.ಸಿ.ಪಾಟೀಲ್

Published

on

ಸುದ್ದಿದಿನ ಡೆಸ್ಕ್ : ರಾಜ್ಯದ 53 ಲಕ್ಷ ರೈತರನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನಾ ವ್ಯಾಪ್ತಿಗೆ ತರಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ದಾವಣಗೆರೆಯಲ್ಲಿಂದು ಮಾತನಾಡಿದ ಸಚಿವರು, ರೈತರ ಜೀವನದಲ್ಲಿ ಬದಲಾವಣೆ ತರಲು ಸರ್ಕಾರ ಹಲವಾರು ಯೋಜನೆ ಜಾರಿಗೊಳಿಸಿದ್ದು, ರೈತರು ಸಾಲಕ್ಕೆ ಒಳಗಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ರಸಗೊಬ್ಬರಗಳಿಗೆ ಸಹಾಯಧನ ಕಲ್ಪಿಸುತ್ತಿದೆ. ಅಷ್ಟೇ ಅಲ್ಲದೇ ರಾಜ್ಯದ 53 ಲಕ್ಷ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿ ಮಾಡಿದೆ ಎಂದರು.

ರೈತರು ಸಮಗ್ರ ಕೃಷಿ ನೀತಿ ಅಳವಡಿಸಿಕೊಳ್ಳಬೇಕು, ಬಿತ್ತನೆಗೆ ಮುನ್ನ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಭೂಮಿಗೆ ಅಗತ್ಯ ಪೋ?ಕಾಂಶ, ಲವಣಾಂಶ ಒದಗಿಸುವ ಕೆಲಸ ಮಾಡಿದಾಗ ಮಾತ್ರ ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದು ಸಚಿವರು ತಿಳಿಸಿದರು.

ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳಿಗೆ ಶೇ.50ರ? ಮೀಸಲಾತಿ ಜಾರಿ ಮಾಡಲಾಗಿದೆ. ರೈತ ವಿದ್ಯಾನಿಧಿ ಯೋಜನೆ ಮೂಲಕ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಜಾರಿಗೊಳಿಸಲಾಗಿದೆ. ವಿಶೇ?ವಾಗಿ ಎಲ್ಲಾ ವರ್ಗದ ರೈತರ ಹೆಣ್ಣುಮಕ್ಕಳಿಗೆ 2 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಒಟ್ಟಾರೆ ರೈತರನ್ನು ಸಬಲೀಕರಣಗೊಳಿಸಲು ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸುತ್ತಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version