ದಿನದ ಸುದ್ದಿ

ಬೆಳಗಾವಿ | ಕೋವಿಡ್-19 : ಮತ್ತೆ ಒಬ್ಬ ಗುಣಮುಖ : ಆಸ್ಪತ್ರೆಯಿಂದ ಡಿಸ್ಚಾರ್ಜ್

Published

on

ಸುದ್ದಿದಿನ,ಬೆಳಗಾವಿ‌ : ಕೋವಿಡ್-19ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ 25 ವರ್ಷದ ವ್ಯಕ್ತಿ(ಪಿ-226)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.
ಇವರು ಏ.12ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 55ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ಪೈಕಿ ಏಳು ಜನರನ್ನು ಈಗಾಗಲೇ ಸರ್ಕಾರದ ಮಾರ್ಗಸೂಚಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿರುತ್ತದೆ. ಇದೀಗ ಒಟ್ಟಾರೆ ಎಂಟು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version